Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:34 - ಪರಿಶುದ್ದ ಬೈಬಲ್‌

34 ಈ ದಿನದಲ್ಲಿ ಮಾಡಿದ ಸಕಲಕಾರ್ಯಗಳನ್ನು ಏಳು ದಿನವೂ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನಿಮ್ಮ ದೋಷಪರಿಹಾರಕ್ಕಾಗಿ ಈ ದಿನ ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂಬುದು ಸರ್ವೇಶ್ವರನ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು [ಏಳು ದಿನವೂ] ನಡಿಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:34
5 ತಿಳಿವುಗಳ ಹೋಲಿಕೆ  

ಆತನು ಬೇರೆ ಯಾಜಕರಂತಲ್ಲ. ಅವರಾದರೋ ಪ್ರತಿ ದಿನವೂ ಯಜ್ಞಗಳನ್ನು ಅರ್ಪಿಸಬೇಕು. ಅವರು ತಮ್ಮ ಸ್ವಂತ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಿದ ನಂತರ ಬೇರೆಯವರ ಪಾಪಗಳಿಗಾಗಿ ಅರ್ಪಿಸಬೇಕು. ಆದರೆ ಕ್ರಿಸ್ತನು ಹಾಗೆ ಮಾಡಬೇಕಾಗಿಲ್ಲ. ಆತನು ತನ್ನನ್ನೇ ಯಜ್ಞವಾಗಿ ಅರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ಆತನು ಯಾಜಕನಾದದ್ದು ವಂಶಾನುಗತವಾಗಿ ಬಂದ ನಿಯಮಗಳ ಮತ್ತು ಶಾಸ್ತ್ರಗಳ ಪ್ರಕಾರವಲ್ಲ. ಆತನು ನಾಶವಾಗದ ತನ್ನ ಜೀವಶಕ್ತಿಯಿಂದ ಯಾಜಕನಾದನು.


ಯಾಜಕರಾಗಿ ಪ್ರತಿಷ್ಠಿಸುವ ಆಚಾರವಿಧಿಯು ಏಳು ದಿನಗಳವರೆಗೆ ಇರುವುದು. ಆ ಸಮಯ ಮುಗಿಯುವವರೆಗೆ ನೀವು ದೇವದರ್ಶನಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು.


ನೀವು ಏಳು ದಿನಗಳು ಹಗಲುರಾತ್ರಿ ದೇವದರ್ಶನಗುಡಾರದ ಬಾಗಿಲಿನಲ್ಲಿ ಇರಬೇಕು. ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾಗದಿದ್ದರೆ ಸಾಯುವಿರಿ! ಯೆಹೋವನು ಆ ಆಜ್ಞೆಗಳನ್ನು ನನಗೆ ಕೊಟ್ಟನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು