Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 8:35 - ಪರಿಶುದ್ದ ಬೈಬಲ್‌

35 ನೀವು ಏಳು ದಿನಗಳು ಹಗಲುರಾತ್ರಿ ದೇವದರ್ಶನಗುಡಾರದ ಬಾಗಿಲಿನಲ್ಲಿ ಇರಬೇಕು. ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾಗದಿದ್ದರೆ ಸಾಯುವಿರಿ! ಯೆಹೋವನು ಆ ಆಜ್ಞೆಗಳನ್ನು ನನಗೆ ಕೊಟ್ಟನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆದುದರಿಂದ ನೀವು ಆ ಆಜ್ಞೆಯ ಮೇರೆಗೆ ಏಳು ದಿನಗಳೂ ಹಗಲಿರುಳು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ. ಇದು ಸರ್ವೇಶ್ವರನ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆದದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನದ ಗುಡಾರದ ಬಾಗಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ; ಹೀಗೆಯೇ ನನಗೆ ಅಪ್ಪಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದ್ದರಿಂದ ಏಳು ದಿನಗಳವರೆಗೆ ನೀವು ಸಾಯದಂತೆ ಹಗಲೂ ರಾತ್ರಿ ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಆಜ್ಞೆಯನ್ನು ಕೈಗೊಳ್ಳಬೇಕು. ಏಕೆಂದರೆ ಹಾಗೆಯೇ ನನಗೆ ಅಪ್ಪಣೆಯಾಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 8:35
24 ತಿಳಿವುಗಳ ಹೋಲಿಕೆ  

ನಿನ್ನ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಎಚ್ಚರಿಕೆಯಿಂದ ಅನುಸರಿಸು. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆಜ್ಞೆಗಳಿಗೂ ಕಟ್ಟಳೆಗಳಿಗೂ ನಿರ್ಣಯಗಳಿಗೂ ಒಡಂಬಡಿಕೆಗಳಿಗೂ ವಿಧೇಯನಾಗಿರು. ಆಗ ನೀನು ನಿನ್ನ ಎಲ್ಲ ಕೆಲಸಕಾರ್ಯಗಳಲ್ಲೂ ನೀನು ಹೋಗುವ ಎಲ್ಲಾ ಕಡೆಗಳಲ್ಲೂ ಯಶಸ್ಸನ್ನು ಗಳಿಸುವೆ.


“ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿರಿ. ಆತನು ಹೇಳಿದವುಗಳನ್ನೆಲ್ಲ ಮಾಡಿರಿ. ನೀವು ಕಟ್ಟಳೆಗಳಿಗೆ, ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ಯಾವಾಗಲೂ ವಿಧೇಯರಾಗಿರಬೇಕು.


ಕೆಲವು ಬಾರಿ ಆ ಮೇಘವು ಬಹುದಿನಗಳವರೆಗೂ ಪವಿತ್ರಗುಡಾರದ ಮೇಲೆ ಇರುವ ಸಂದರ್ಭದಲ್ಲಿ ಇಸ್ರೇಲರು ಯೆಹೋವನಿಗೆ ವಿಧೇಯರಾಗಿ ಮುಂದಕ್ಕೆ ಪ್ರಯಾಣಮಾಡಲಿಲ್ಲ.


ಲೇವಿಯರು ಅವನಿಗಾಗಿ ಮತ್ತು ಇಡೀ ಸಮೂಹಕ್ಕಾಗಿ ದೇವದರ್ಶನಗುಡಾರದ ಮುಂದೆ ಕಾವಲುಗಾರರಾಗಿರುವರು ಮತ್ತು ದೇವದರ್ಶನಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸಗಳನ್ನು ಮಾಡುವರು.


ಧರ್ಮಶಾಸ್ತ್ರವು ಮನುಷ್ಯರೊಳಗಿಂದ ಪ್ರಧಾನ ಯಾಜಕರನ್ನು ಆರಿಸುತ್ತದೆ. ಆರಿಸಲ್ಪಟ್ಟ ಈ ಜನರು ಮಾನವ ದೌರ್ಬಲ್ಯಗಳನ್ನು ಹೊಂದಿದವರಾಗಿದ್ದಾರೆ. ಆದರೆ ದೇವರು ಧರ್ಮಶಾಸ್ತ್ರದ ನಂತರ ಮಾಡಿದ ವಾಗ್ದಾನ ದೇವರ ಮಗನನ್ನು ಪ್ರಧಾನ ಯಾಜಕನನ್ನಾಗಿ ಮಾಡಿತು. ಆ ಮಗನು ಎಂದೆಂದಿಗೂ ಸರ್ವಸಂಪೂರ್ಣನಾಗಿ ಮಾಡಲ್ಪಟ್ಟಿದ್ದಾನೆ.


ಜೀವಂತರಾಗಿರುವ ಜನರಿಗೂ ಸತ್ತುಹೋಗಿರುವ ಜನರಿಗೂ ನ್ಯಾಯತೀರಿಸುವಾತನು ಕ್ರಿಸ್ತ ಯೇಸುವೇ. ಆತನು ತನ್ನ ರಾಜ್ಯವನ್ನು ಹೊಂದಿದ್ದಾನೆ. ಆತನು ಮತ್ತೆ ಬರುವನು. ಆದ್ದರಿಂದ ಯೇಸು ಕ್ರಿಸ್ತನ ಮತ್ತು ದೇವರ ಸನ್ನಿಧಿಯಲ್ಲಿ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,


ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.


ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


ಪೊಂತ್ಯ ಪಿಲಾತನ ಮುಂದೆ ಸಾಕ್ಷಿ ನೀಡಿದ ಕ್ರಿಸ್ತ ಯೇಸುವಿನ ಸನ್ನಿಧಿಯಲ್ಲಿಯೂ ಸರ್ವಸೃಷ್ಟಿಗೆ ಜೀವದಾಯಕನಾದ ದೇವರ ಸನ್ನಿಧಿಯಲ್ಲಿಯೂ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,


ನೀನು ಈ ಕಾರ್ಯಗಳನ್ನು ಮಾಡಬೇಕೆಂದು ದೇವರ, ಯೇಸು ಕ್ರಿಸ್ತನ ಮತ್ತು ಆರಿಸಲ್ಪಟ್ಟ ದೇವದೂತರ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುತ್ತೇನೆ. ಆದರೆ ಸತ್ಯವನ್ನು ತಿಳಿಯುವುದಕ್ಕಿಂತ ಮೊದಲೇ ಜನರಿಗೆ ತೀರ್ಪು ನೀಡಬೇಡ. ಯಾರಿಗೂ ಪಕ್ಷಪಾತ ತೋರಬೇಡ.


ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ನಾನು ನಿನಗೆ ಆಜ್ಞಾಪಿಸುವುದೇನೆಂದರೆ, ಮೊದಲು ನಿನ್ನ ವಿಷಯದಲ್ಲಿ ತಿಳಿಸಲಾದ ಪ್ರವಾದನೆಗಳಿಗೆ ಅನುಗುಣವಾಗಿ ನಂಬಿಕೆಯ ದಿವ್ಯ ಹೋರಾಟವನ್ನು ಮಾಡು.


ಪ್ರಿಯ ಸ್ನೇಹಿತರೇ, ನಾವು ದೇವರಿಂದ ಈ ವಾಗ್ದಾನಗಳನ್ನು ಹೊಂದಿದ್ದೇವೆ. ಆದ್ದರಿಂದ ನಮ್ಮನ್ನು ಶುದ್ಧರನ್ನಾಗಿ ಮಾಡಿಕೊಳ್ಳಬೇಕು. ನಮ್ಮ ದೇಹವನ್ನಾಗಲಿ ನಮ್ಮ ಆತ್ಮವನ್ನಾಗಲಿ ಅಶುದ್ಧಗೊಳಿಸುವ ಎಲ್ಲಾ ವಿಧದ ಮಲಿನತೆಯಿಂದ ನಾವು ದೂರವಿರೋಣ. ನಾವು ದೇವರನ್ನು ಗೌರವಿಸುವುದರಿಂದ ಪರಿಶುದ್ಧವಾದ ಬಾಳ್ವೆಯನ್ನು ನಡೆಸಲು ನಾವು ಪ್ರಯತ್ನಿಸಬೇಕು.


ಈ ಭೂಮಿಯು ಚಾದೋಕನ ಸಂತತಿಯವರಿಗಿರುವದು. ಆ ಜನರು ನನ್ನ ಪರಿಶುದ್ಧ ಯಾಜಕರಾಗಿ ಆರಿಸಲ್ಪಟ್ಟಿರುತ್ತಾರೆ. ಯಾಕೆಂದರೆ ಇಸ್ರೇಲಿನ ಇತರ ಜನರು ನನ್ನನ್ನು ಬಿಟ್ಟು ತೊಲಗಿದರೂ ಇವರು ನನಗೆ ಸೇವೆಮಾಡುವದನ್ನು ಮುಂದುವರಿಸುತ್ತಿದ್ದರು. ಲೇವಿಕುಲದ ಜನರಂತೆ ಚಾದೋಕನ ಸಂತತಿಯವರು ನನ್ನನ್ನು ಬಿಟ್ಟುಹೋಗಲಿಲ್ಲ.


ದೋಷಪರಿಹಾರಕಯಜ್ಞಕ್ಕಾಗಿ ಪ್ರತಿದಿವಸ ಏಳು ದಿವಸಗಳ ತನಕ ಒಂದೊಂದು ಆಡನ್ನು ಸಮರ್ಪಿಸಬೇಕು. ಅದೇ ಸಮಯದಲ್ಲಿ ನಿಷ್ಕಳಂಕವಾದ ಒಂದು ಎಳೇ ಹೋರಿ ಮತ್ತು ಟಗರುಗಳನ್ನು ದೋಷಪರಿಹಾರಕಯಜ್ಞಕ್ಕಾಗಿ ಸಮರ್ಪಿಸಬೇಕು.


ಅವನು ಶುದ್ಧೀಕರಣದ ನೀರಿನಿಂದ ಮೂರನೆಯ ದಿನದಲ್ಲಿ ಮತ್ತು ತಿರುಗಿ ಏಳನೆಯ ದಿನದಲ್ಲಿ ತನ್ನನ್ನು ಶುದ್ಧೀಕರಿಸಿಕೊಳ್ಳಬೇಕು. ಆಗ ಅವನು ಶುದ್ಧನಾಗಿರುವನು.


“ಬಳಿಕ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸರ್ವಾಂಗಕ್ಷೌರ ಮಾಡಿಕೊಂಡು ಸ್ನಾನ ಮಾಡಬೇಕು. ಆಗ ಅವನು ಶುದ್ಧನಾಗುವನು. ಬಳಿಕ ಆ ವ್ಯಕ್ತಿ ಪಾಳೆಯದೊಳಗೆ ಹೋಗಬಹುದು. ಆದರೆ ಅವನು ತನ್ನ ಡೇರೆಯಿಂದ ಏಳು ದಿನಗಳವರೆಗೆ ಹೊರಗೆ ಇರಬೇಕು.


ತರುವಾಯ ಆರೋನನ ಪುತ್ರರಲ್ಲಿ ನಾದಾಬ ಮತ್ತು ಅಬೀಹು ಎಂಬಿಬ್ಬರು ಧೂಪ ಹಾಕಲು ಒಂದೊಂದು ಬಟ್ಟಲನ್ನು ತೆಗೆದುಕೊಂಡು ಅದರಲ್ಲಿ ಬೇರೆ ಬೆಂಕಿಯನ್ನಿಟ್ಟು ಯೆಹೋವನ ಮುಂದೆ ಧೂಪಹಾಕಿದರು. ಯೆಹೋವನ ಆಜ್ಞೆಗನುಸಾರವಾದ ಬೆಂಕಿಯನ್ನು ಅವರು ಉಪಯೋಗಿಸಲಿಲ್ಲ.


ಮೋಶೆ ಸ್ವಲ್ಪ ಅಭಿಷೇಕತೈಲವನ್ನು ಮತ್ತು ವೇದಿಕೆಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮೇಲೆ ಮತ್ತು ಅವನ ಯಾಜಕವಸ್ತ್ರದ ಮೇಲೆ ಚಿಮಿಕಿಸಿದನು; ಆರೋನನ ಜೊತೆ ಇದ್ದ ಅವನ ಪುತ್ರರ ಮೇಲೆ ಮತ್ತು ಅವರ ಬಟ್ಟೆಗಳ ಮೇಲೆ ಚಿಮಿಕಿಸಿದನು. ಹೀಗೆ ಮೋಶೆಯು ಆರೋನನನ್ನೂ ಅವನ ಯಾಜಕವಸ್ತ್ರವನ್ನೂ ಅವನ ಪುತ್ರರನ್ನೂ ಅವರ ಯಾಜಕ ವಸ್ತ್ರಗಳನ್ನೂ ಪವಿತ್ರಗೊಳಿಸಿದನು.


“ನಾನು ನಿನಗೆ ಆಜ್ಞಾಪಿಸಿದ ಇವುಗಳನ್ನೆಲ್ಲ ಆರೋನ ಮತ್ತು ಅವನ ಪುತ್ರರಿಗೋಸ್ಕರ ಮಾಡು. ಅವರನ್ನು ಯಾಜಕರನ್ನಾಗಿ ನೇಮಿಸುವ ಸಮಾರಂಭವು ಏಳು ದಿನಗಳವರೆಗೆ ನಡೆಯಬೇಕು.


ಈ ದಿನದಲ್ಲಿ ಮಾಡಿದ ಸಕಲಕಾರ್ಯಗಳನ್ನು ಏಳು ದಿನವೂ ಮಾಡಬೇಕು.


ಆದ್ದರಿಂದ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಆರೋನನೂ ಅವನ ಪುತ್ರರೂ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು