ಯಾಜಕಕಾಂಡ 9:10 - ಪರಿಶುದ್ದ ಬೈಬಲ್10 ಆರೋನನು ಪಾಪಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು ಮತ್ತು ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನು ತೆಗೆದುಕೊಂಡನು. ಅವನು ಆ ವಸ್ತುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೋಷಪರಿಹಾರಕ ಬಲಿಪ್ರಾಣಿಯ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಾಳಿಜದ ಹತ್ತಿರವಿರುವ ಕೊಬ್ಬನ್ನು, ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ, ಬಲಿಪೀಠದ ಮೇಲೆ ಹೋಮಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ದೋಷಪರಿಹಾರಕಯಜ್ಞಪಶುವಿನ ಕೊಬ್ಬನ್ನೂ ಹುರುಳಿಕಾಯಿಗಳನ್ನೂ ಕಾಳಿಜದ ಹತ್ತಿರವಿರುವ ಕೊಬ್ಬನ್ನೂ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದರ ಪಾಪ ಪರಿಹಾರದ ಬಲಿಯ ಕೊಬ್ಬು, ಮೂತ್ರಪಿಂಡಗಳು ಮತ್ತು ಕಾಳಿಜದ ಹತ್ತಿರವಿರುವ ಕೊಬ್ಬು, ಇವುಗಳನ್ನು ಅವನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ, ಬಲಿಪೀಠದ ಮೇಲೆ ಸುಟ್ಟನು. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.