Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:15 - ಪರಿಶುದ್ದ ಬೈಬಲ್‌

15 ತರುವಾಯ ಆರೋನನು ಜನರು ಅರ್ಪಿಸುವ ಪಶುಗಳನ್ನು ತರಿಸಿದನು. ಅವನು ಜನರಿಗಾಗಿ ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ವಧಿಸಿದನು. ಅವನು ಮೊದಲಿನ ಪಶುವನ್ನು ಸಮರ್ಪಿಸಿದ ರೀತಿಯಲ್ಲಿ ಪಾಪಪರಿಹಾರಕ್ಕಾಗಿ ಹೋತವನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಅದನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಾದ ಮೇಲೆ ಜನರು ಸಮರ್ಪಿಸಿದ ಪ್ರಾಣಿಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕವಾದ ಹೋತವನ್ನು ಮೊದಲನೆಯ ಬಲಿಪ್ರಾಣಿಯಾಗಿ ವಧಿಸಿ ಜನರ ದೋಷಪರಿಹಾರಾರ್ಥವಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕವಾದ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದಾದ ಮೇಲೆ ಆರೋನನು ಜನರಿಗಾಗಿ ಅರ್ಪಿಸಿದ ಬಲಿಯನ್ನು ತಂದು, ಹೋತವನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಪರಿಹಾರದ ಬಲಿಯಾಗಿರುವುದನ್ನು ವಧಿಸಿ, ಮೊದಲನೆಯದರ ಹಾಗೆ ಅದನ್ನು ಸಮರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:15
11 ತಿಳಿವುಗಳ ಹೋಲಿಕೆ  

ತಾನೂ ಬಲಹೀನನಾಗಿರುವುದರಿಂದ ಅವನು ಮನುಷ್ಯರ ಪಾಪಗಳಿಗಾಗಿಯೂ ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಗಳನ್ನು ಅರ್ಪಿಸುತ್ತಾನೆ.


ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.


ಇಸ್ರೇಲರಿಗೆ ಹೀಗೆ ಹೇಳು: ‘ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ತೆಗೆದುಕೊಳ್ಳಿರಿ; ಸರ್ವಾಂಗಹೋಮಕ್ಕಾಗಿ ಕರುವನ್ನೂ ಕುರಿಮರಿಯನ್ನೂ ತೆಗೆದುಕೊಳ್ಳಿರಿ. ಕರುವೂ ಕುರಿಮರಿಯೂ ಒಂದು ವರ್ಷದ್ದಾಗಿರಬೇಕು. ಆ ಪ್ರಾಣಿಗಳಲ್ಲಿ ಯಾವ ದೋಷವಿರಬಾರದು.


ಆತನು ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. ನಮ್ಮನ್ನು ಪಾಪದಿಂದ ಬಿಡುಗಡೆ ಮಾಡಲು ಮತ್ತು ಯಾವಾಗಲೂ ಒಳ್ಳೆಯ ಕಾರ್ಯಗಳನ್ನೇ ಮಾಡ ಬಯಸುವ ತನ್ನ ಪರಿಶುದ್ಧ ಜನರನ್ನಾಗಿ ಮಾಡಲು ಆತನು ಮರಣ ಹೊಂದಿದನು.


ಕ್ರಿಸ್ತನಲ್ಲಿ ಪಾಪವಿರಲಿಲ್ಲ. ಆದರೆ ನಾವು ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಆತನನ್ನು ಪಾಪಸ್ವರೂಪಿಯನ್ನಾಗಿ ಮಾಡಿದನು.


ಆತನನ್ನು ಬಾಧೆಯಿಂದ ಜಜ್ಜಬೇಕೆಂಬುದು ಯೆಹೋವನ ನಿರ್ಧಾರವಾಗಿತ್ತು. ಆದ್ದರಿಂದ ಈ ಸೇವಕನು ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಆದರೆ ಆತನು ತನ್ನ ಹೊಸ ಜೀವಿತದಲ್ಲಿ ಚಿರಂಜೀವಿಯಾಗುವನು. ಆತನು ತನ್ನ ಜನರನ್ನು ದೃಷ್ಟಿಸಿ ನೋಡುವನು. ಯೆಹೋವನ ಸಂಕಲ್ಪದ ಮೇರೆಗೆ ಎಲ್ಲವನ್ನೂ ಆತನು ಮಾಡುವನು.


ಆರೋನನು ಸರ್ವಾಂಗಹೋಮದ ಪಶುವಿನ ಒಳಗಿನ ಭಾಗಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು.


ಮೋಶೆಯು ಪಾಪಪರಿಹಾರಕ್ಕಾಗಿ ಸಮರ್ಪಿತವಾದ ಹೋತದ ಕುರಿತು ವಿಚಾರಿಸಿದಾಗ, ಅದನ್ನು ಸುಟ್ಟುಬಿಟ್ಟರೆಂದು ಕೇಳಿ ಆರೋನನ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್‌ರವರ ಮೇಲೆ ಬಹುಕೋಪಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು