Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:4 - ಪರಿಶುದ್ದ ಬೈಬಲ್‌

4 ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊಂಡು ಎಣ್ಣೆ ಬೆರೆಸಿದ ಧಾನ್ಯಸಮರ್ಪಣೆಗಳೊಡನೆ ಅವುಗಳನ್ನು ಯೆಹೋವನ ಮುಂದೆ ಅರ್ಪಿಸಿರಿ. ಯಾಕೆಂದರೆ ಈ ದಿನ ಯೆಹೋವನು ನಿಮಗೆ ಪ್ರತ್ಯಕ್ಷವಾಗುವನು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕುರಿಯನ್ನು ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನು, ಟಗರನ್ನು ಧಾನ್ಯನೈವೇದ್ಯಕ್ಕಾಗಿ ಎಣ್ಣೆಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಯೆಹೋವನ ಮುಂದೆ ಬರಬೇಕೆಂದು ಆಜ್ಞಾಪಿಸು’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಶಾಂತಿಸಮಾಧಾನ ಬಲಿಗಾಗಿ ಒಂದು ಹೋರಿ ಹಾಗು ಒಂದು ಟಗರನ್ನು ಮತ್ತು ನೈವೇದ್ಯಕ್ಕಾಗಿ ಎಣ್ಣೆ ಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಬರಬೇಕೆಂದು ಆಜ್ಞಾಪಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನೂ ಟಗರನ್ನೂ ನೈವೇದ್ಯಕ್ಕಾಗಿ ಎಣ್ಣೆವಿುಶ್ರವಾದ ಪದಾರ್ಥವನ್ನೂ ತೆಗೆದುಕೊಂಡು ಬರಬೇಕೆಂದು ಆಜ್ಞಾಪಿಸು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಾಗಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆಹಾರದ ಬಲಿ ಎಣ್ಣೆಯೊಂದಿಗೆ ಬೆರೆತಿರಬೇಕು. ಏಕೆಂದರೆ ಈ ದಿನವೇ ಯೆಹೋವ ದೇವರು ನಿಮಗೆ ಕಾಣಿಸಿಕೊಳ್ಳುವರು,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:4
18 ತಿಳಿವುಗಳ ಹೋಲಿಕೆ  

ಆ ಸ್ಥಳದಲ್ಲಿ ನಾನು ಇಸ್ರೇಲರನ್ನು ಸಂಧಿಸುವೆನು. ನನ್ನ ಪ್ರಭಾವದಿಂದ ಆ ಸ್ಥಳವು ಪವಿತ್ರವಾಗುವುದು.


ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.


ಮೋಶೆ, “ಯೆಹೋವನು ಆಜ್ಞಾಪಿಸಿದವುಗಳನ್ನು ನೀವು ಮಾಡಿದರೆ ಯೆಹೋವನ ಮಹಿಮೆಯು ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.


ಅಲ್ಲಿ ಇಸ್ರೇಲ್ ದೇವರ ಮಹಿಮೆಯು ಪೂರ್ವದಿಂದ ಬಂದಿತು. ದೇವರ ಸ್ವರವು ಸಮುದ್ರದ ಶಬ್ದದಂತೆ ಗಟ್ಟಿಯಾಗಿತ್ತು. ದೇವರ ಮಹಿಮಾ ಪ್ರಕಾಶದಿಂದ ನೆಲವು ಬೆಳಕಿನಿಂದ ತುಂಬಿತ್ತು.


ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ಮಹಿಮೆ ಸಮೂಹದವರೆಲ್ಲರಿಗೂ ಪ್ರತ್ಯಕ್ಷವಾಯಿತು.


ಎಲ್ಲಾ ಜನರು ಯೆಹೋಶುವನನ್ನು ಮತ್ತು ಕಾಲೇಬನನ್ನು ಕಲ್ಲೆಸೆದು ಕೊಲ್ಲಬೇಕೆಂದು ಮಾತಾಡತೊಡಗಿದರು. ಆದರೆ ಯೆಹೋವನ ಮಹಿಮೆ ದೇವದರ್ಶನಗುಡಾರ ಮೇಲೆ ಪ್ರತ್ಯಕ್ಷವಾದದ್ದು ಇಸ್ರೇಲರೆಲ್ಲರಿಗೆ ಕಾಣಿಸಿತು. ಯೆಹೋವನು ಮೋಶೆಯೊಡನೆ ಮಾತಾಡಿ,


“ಒಬ್ಬನು ದೇವರಾದ ಯೆಹೋವನಿಗೆ ಧಾನ್ಯಸಮರ್ಪಣೆ ಮಾಡಬೇಕೆಂದಿದ್ದರೆ, ಅದು ಗೋಧಿಹಿಟ್ಟಾಗಿರಬೇಕು. ಅವನು ಈ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯಿದು, ಧೂಪವನ್ನಿಡಬೇಕು.


ಸೀನಾಯಿ ಬೆಟ್ಟದ ಮೇಲೆ ಯೆಹೋವನ ಮಹಿಮೆಯು ಇಳಿದು ಬಂದಿತು. ಮೋಡವು ಆರುದಿನಗಳವರೆಗೆ ಬೆಟ್ಟವನ್ನು ಕವಿದುಕೊಂಡಿತ್ತು. ಏಳನೆಯ ದಿನದಲ್ಲಿ, ಮೋಡದೊಳಗಿಂದ ಯೆಹೋವನು ಮೋಶೆಯೊಡನೆ ಮಾತಾಡಿದನು.


ಮೂರನೆಯ ದಿನದಲ್ಲಿ ನನಗಾಗಿ ಸಿದ್ಧರಾಗಬೇಕು. ಮೂರನೆಯ ದಿನದಲ್ಲಿ ನಾನು ಸೀನಾಯ್ ಬೆಟ್ಟದ ಮೇಲೆ ಇಳಿದುಬರುವೆನು; ಜನರೆಲ್ಲರೂ ನನ್ನನ್ನು ನೋಡುವರು.


ಅರೋನನು ಇಸ್ರೇಲರೆಲ್ಲರೊಂದಿಗೆ ಮಾತಾಡಿದನು. ಅವರೆಲ್ಲರೂ ಒಂದು ಸ್ಥಳದಲ್ಲಿ ಕೂಡಿಬಂದರು. ಆರೋನನು ಅವರೊಂದಿಗೆ ಮಾತಾಡುತ್ತಿದ್ದಾಗ ಅವರೆಲ್ಲರೂ ಅರಣ್ಯದ ಕಡೆಗೆ ತಿರುಗಿನೋಡಿದರು. ಮೇಘದಲ್ಲಿ ಯೆಹೋವನ ಮಹಿಮೆಯು ಪ್ರತ್ಯಕ್ಷವಾದದ್ದನ್ನು ಅವರೆಲ್ಲರೂ ಕಂಡರು.


ಇಸ್ರೇಲರಿಗೆ ಹೀಗೆ ಹೇಳು: ‘ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ತೆಗೆದುಕೊಳ್ಳಿರಿ; ಸರ್ವಾಂಗಹೋಮಕ್ಕಾಗಿ ಕರುವನ್ನೂ ಕುರಿಮರಿಯನ್ನೂ ತೆಗೆದುಕೊಳ್ಳಿರಿ. ಕರುವೂ ಕುರಿಮರಿಯೂ ಒಂದು ವರ್ಷದ್ದಾಗಿರಬೇಕು. ಆ ಪ್ರಾಣಿಗಳಲ್ಲಿ ಯಾವ ದೋಷವಿರಬಾರದು.


ಆದ್ದರಿಂದ ಜನರೆಲ್ಲರೂ ದೇವದರ್ಶನಗುಡಾರಕ್ಕೆ ಬಂದರು. ಮೋಶೆ ಆಜ್ಞಾಪಿಸಿದ ವಸ್ತುಗಳನ್ನು ಅವರು ತಂದರು. ಎಲ್ಲಾ ಜನರು ಯೆಹೋವನ ಸನ್ನಿಧಿಯಲ್ಲಿ ನಿಂತರು.


“ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ತನ್ನ ಪಶುಮಂದೆಯಿಂದ ಗಂಡುಪಶುವನ್ನಾಗಲಿ ಹೆಣ್ಣುಪಶುವನ್ನಾಗಲಿ ಅರ್ಪಿಸಬಹುದು. ಯೆಹೋವನ ಎದುರಿನಲ್ಲಿ ಅರ್ಪಿಸಲ್ಪಡುವ ಅದು ಅಂಗದೋಷವಿಲ್ಲದ್ದಾಗಿರಬೇಕು.


ಏಳು ದಿವಸಗಳ ತರುವಾಯ, ಎಂಟನೇ ದಿನದಲ್ಲಿ ಯಾಜಕರು ನಿಮ್ಮ ಪರವಾಗಿ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಬೇಕು. ಆಗ ನಾನು ನಿಮಗೆ ಪ್ರಸನ್ನನಾಗುವೆನು.” ನನ್ನ ಒಡೆಯನಾದ ಯೆಹೋವನ ನುಡಿಗಳಿವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು