ಯಾಜಕಕಾಂಡ 9:7 - ಪರಿಶುದ್ದ ಬೈಬಲ್7 ಮೋಶೆಯು ಆರೋನನಿಗೆ, “ಯೆಹೋವನು ಆಜ್ಞಾಪಿಸಿದವುಗಳನ್ನು ಮಾಡು. ಯಜ್ಞವೇದಿಕೆಯ ಬಳಿಗೆ ಹೋಗಿ ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಅರ್ಪಿಸು. ನಿನ್ನನ್ನೂ ಜನರನ್ನೂ ಶುದ್ಧಿಮಾಡುವ ಆ ಕಾರ್ಯಗಳನ್ನು ಮಾಡು. ಜನರು ತಂದದ್ದನ್ನು ತೆಗೆದುಕೊಂಡು ಅವರಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿ ಅವರನ್ನು ಶುದ್ಧಿಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ಮೋಶೆ ಆರೋನನಿಗೆ, “ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಸಮರ್ಪಿಸಿ ನಿನಗೋಸ್ಕರವೂ ಮತ್ತು ನಿನ್ನ ಜನರಿಗೋಸ್ಕರವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗಾಗಿ ದೋಷಪರಿಹಾರವನ್ನು ಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅನಂತರ ಮೋಶೆ ಆರೋನನಿಗೆ, “ಬಲಿಪೀಠದ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಬಲಿಯನ್ನು ಮತ್ತು ದಹನಬಲಿಯನ್ನು ಸಮರ್ಪಿಸಿ ನಿನ್ನ ಹಾಗು ಜನರ ದೋಷವನ್ನು ಪರಿಹರಿಸು. ಜನರು ತಂದದ್ದನ್ನು ಸಮರ್ಪಿಸಿ ಸರ್ವೇಶ್ವರನ ಆಜ್ಞೆಯಂತೆ ಅವರ ದೋಷವನ್ನು ಪರಿಹರಿಸು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಗ ಮೋಶೆ ಆರೋನನಿಗೆ - ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮರ್ಪಿಸಿ ನಿನಗೋಸ್ಕರವೂ ಜನರಿಗೋಸ್ಕವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗೋಸ್ಕರ ದೋಷಪರಿಹಾರವನ್ನು ಮಾಡು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮೋಶೆಯು ಆರೋನನಿಗೆ, “ಬಲಿಪೀಠದ ಕಡೆಗೆ ಹೋಗಿ, ಯೆಹೋವ ದೇವರು ಆಜ್ಞಾಪಿಸಿದಂತೆಯೇ ನಿನ್ನ ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸು. ನಿನಗಾಗಿ ಪ್ರಾಯಶ್ಚಿತ್ತವನ್ನು ಮಾಡು, ಜನರ ಸಮರ್ಪಣೆಗಳನ್ನು ಸಮರ್ಪಿಸಿ, ಅವರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು,” ಎಂದನು. ಅಧ್ಯಾಯವನ್ನು ನೋಡಿ |