Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:9 - ಪರಿಶುದ್ದ ಬೈಬಲ್‌

9 ಆರೋನನ ಪುತ್ರರು ಅದರ ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನ ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯಜ್ಞವೇದಿಕೆಯ ಮೂಲೆಗಳಿಗೆ ಹಚ್ಚಿದನು. ಬಳಿಕ ಆರೋನನು ರಕ್ತವನ್ನು ಯಜ್ಞವೇದಿಕೆಯ ಬುಡದಲ್ಲಿ ಸುರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆರೋನನ ಮಕ್ಕಳು ಆ ಬಲಿಪ್ರಾಣಿಯ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಹೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯಿದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಆರೋನನ ಪುತ್ರರು ಅವನ ಬಳಿಗೆ ರಕ್ತವನ್ನು ತಂದರು. ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಬಲಿಪೀಠದ ಅಡಿಯಲ್ಲಿ ಉಳಿದ ರಕ್ತವನ್ನು ಹೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:9
14 ತಿಳಿವುಗಳ ಹೋಲಿಕೆ  

ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಞಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಞಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು.


ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.


ತರುವಾಯ ಆರೋನನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಕೆಯ ಬಳಿಗೆ ಹೋಗುವನು. ಆರೋನನು ಯಜ್ಞವೇದಿಕೆಯನ್ನು ಶುದ್ಧೀಕರಿಸುವನು. ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ಮತ್ತು ಹೋತದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಎಲ್ಲಾ ಮೂಲೆಗಳಿಗೆ ಹಚ್ಚುವನು.


ಆರೋನನು ಜನರಿಗಾಗಿ ಸಮಾಧಾನಯಜ್ಞವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಪುತ್ರರು ಅವುಗಳ ರಕ್ತವನ್ನು ಅವನ ಬಳಿಗೆ ತಂದರು. ಆರೋನನು ಈ ರಕ್ತವನ್ನು ಯಜ್ಞವೇದಿಕೆಯ ಸುತ್ತಲೂ ಚಿಮಿಕಿಸಿದನು.


ನಂತರ ಆರೋನನು ಸರ್ವಾಂಗಹೋಮದ ಪಶುವನ್ನು ವಧಿಸಿದನು. ಆರೋನನ ಪುತ್ರರು ಅದರ ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನು ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು.


ಬಳಿಕ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮ ಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಬಳಿಕ ಯಾಜಕನು ಆಡಿನ ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿಯಬೇಕು.


ಯಾಜಕನು ಪಾಪಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದು,


ಆರೋನನು ಪಾಪಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು ಮತ್ತು ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನು ತೆಗೆದುಕೊಂಡನು. ಅವನು ಆ ವಸ್ತುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು.


ಯಜ್ಞವೇದಿಯ ಮೇಲೆ ಬೆಂಕಿ ಹಾಕುವ ಸ್ಥಳದ ಎತ್ತರ ನಾಲ್ಕು ಮೊಳ. ಅದರ ನಾಲ್ಕು ಮೂಲೆಗಳು ಕೊಂಬಿನ ಆಕಾರದಂತಿದ್ದವು.


“ನೀನು ಹೋರಿಯ ರಕ್ತವನ್ನು ತೆಗೆದು ವೇದಿಯ ನಾಲ್ಕು ಕೊಂಬುಗಳಲ್ಲಿ ಪ್ರೋಕ್ಷಿಸಬೇಕು; ಮತ್ತು ಮೆಟ್ಟಿಲಿನ ನಾಲ್ಕು ಮೂಲೆಗಳಿಗೂ, ಅದರ ಸುತ್ತಲೂ ಇರುವ ದಿಂಡಿನ ಮೇಲೂ ರಕ್ತ ಪ್ರೋಕ್ಷಿಸಬೇಕು. ಹೀಗೆ ಮಾಡುವಾಗ ನೀನು ವೇದಿಯನ್ನು ಪವಿತ್ರಗೊಳಿಸುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು