ಯೂದನು 1:11 - ಪರಿಶುದ್ದ ಬೈಬಲ್11 ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರ ಗತಿಯನ್ನು ಏನೆಂದು ಹೇಳಲಿ? ಇವರು ಕಾಯಿನನ ಮಾರ್ಗವನ್ನು ಹಿಡಿದವರೂ, ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಳುಗಿದವರೂ, ಕೋರಹನಂತೆ ಎದುರು ಮಾತನಾಡಿ ನಾಶವಾಗಿ ಹೋಗುವವರು ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೆಂಚಿ ಗತ್ ಕಾಯ್ ಸಾಂಗು! ತೆನಿ ಕಾಯಿನಾಚಿ ವಾಟ್ ಧರ್ಲ್ಯಾನಾತ್, ಕಮ್ವುತಲ್ಯಾ ಆಶೆಸಾಟ್ನಿ ಪುರಾ ಮಾಪಾನ್ ಬಾಲಾಮಾನ್ ಕರಲ್ಲ್ಯಾ ಸಾರ್ಕೆ ಚುಕ್ ಕರ್ಲ್ಯಾನಿ. ಅನಿ ತೆನಿ ಕೊರಾ ಮನ್ತಲ್ಯಾ ಮಾನ್ಸಾಚ್ಯಾ ಸಾರ್ಕೆ ಹುರ್ಪಾಟಿ ಬೊಲ್ಲ್ಯಾನಿ ಅನಿ ತೆಚೆ ಸಾರ್ಕೆಚ್ ನಾಸ್ ಹೊವ್ನ್ ಗೆಲ್ಯಾನಿ. ಅಧ್ಯಾಯವನ್ನು ನೋಡಿ |
“ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.
ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.
ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”