ಯೂದನು 1:25 - ಪರಿಶುದ್ದ ಬೈಬಲ್25 ಆತನೊಬ್ಬನೇ ದೇವರು. ನಮ್ಮನ್ನು ರಕ್ಷಿಸುವಾತನು ಆತನೊಬ್ಬನೇ. ಆದಿಯಿಂದ ಇದ್ದಹಾಗೆ ಈಗಲೂ ಯಾವಾಗಲೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನಿಗೆ ಪ್ರಭಾವ, ಮಹತ್ವ, ಆಧಿಪತ್ಯ ಮತ್ತು ಅಧಿಕಾರಗಳು ಇರಲಿ. ಆಮೆನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಶಕ್ತನಾಗಿರುವ ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಎಲ್ಲಾ ಕಾಲಕ್ಕಿಂತ ಮೊದಲೂ [ಇದ್ದ ಹಾಗೆ] ಈಗಲೂ ಯಾವಾಗಲೂ ಇರಲಿ. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತ್ಯಾ ಅಮ್ಕಾ ರಾಕ್ತಲ್ಯಾ ಎಕ್ಲ್ಯಾಚ್ ದೆವಾಕ್, ಜೆಜು ಕ್ರಿಸ್ತಾ ಅಮ್ಚ್ಯಾ ಧನಿಯಾಚ್ಯಾ ವೈನಾ ಮಹಿಮಾ, ವೈಭವ್, ರಾಜ್ವಟ್ಕಿ ಅನಿ ಅಧಿಕಾರ್ , ಅದ್ದಿ, ಅತ್ತಾ ಅನಿ ಸದಾ ಸರ್ವತಾಕ್ ತೆಕಾಚ್ ರ್‍ಹಾಂವ್ದಿತ್, ಆಮೆನ್! ಅಧ್ಯಾಯವನ್ನು ನೋಡಿ |
ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!