ಯೆರೆಮೀಯ 1:1 - ಪರಿಶುದ್ದ ಬೈಬಲ್1 ಇವು ಯೆರೆಮೀಯನ ಸಂದೇಶಗಳು. ಯೆರೆಮೀಯನು ಹಿಲ್ಕೀಯನೆಂಬುವನ ಮಗನು. ಯೆರೆಮೀಯನು ಅನಾತೋತ್ ನಗರದ ಯಾಜಕ ಕುಟುಂಬಕ್ಕೆ ಸೇರಿದವನಾಗಿದ್ದನು. ಆ ನಗರವು ಬೆನ್ಯಾಮೀನ್ಯರ ಪ್ರದೇಶದಲ್ಲಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇವು ಯೆರೆಮೀಯನ ಪ್ರವಚನಗಳು. ಈತ ಬೆನ್ಯಮೀನ್ ಪ್ರಾಂತ್ಯಕ್ಕೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನು. ಇವನ ತಂದೆ ಹಿಲ್ಕೀಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕವರ್ಗದವನೂ ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬೆನ್ಯಾಮೀನ್ ಸೀಮೆಗೆ ಸೇರಿ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು. ಅಧ್ಯಾಯವನ್ನು ನೋಡಿ |
ಆಗ ರಾಜನಾದ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನಾನು ನಿನ್ನನ್ನು ಕೊಲ್ಲಲೇಬೇಕು. ಆದರೆ ಅಣತೋತಿನಲ್ಲಿರುವ ನಿನ್ನ ಮನೆಗೆ ಹಿಂತಿರುಗಿ ಹೋಗಲು ನಿನಗೆ ಅವಕಾಶ ಕೊಡುತ್ತೇನೆ. ನಾನು ನಿನ್ನನ್ನು ಕೊಲ್ಲುವುದಿಲ್ಲ ಏಕೆಂದರೆ ನನ್ನ ತಂದೆಯಾದ ದಾವೀದನೊಂದಿಗೆ ನಡೆಯುವಾಗ ಯೆಹೋವನ ಪವಿತ್ರಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ನೀನು ಸಹಾಯ ಮಾಡಿದೆ. ನನ್ನ ತಂದೆಯ ಕಷ್ಟದ ದಿನಗಳಲ್ಲೆಲ್ಲಾ ನೀನೂ ಅವನ ಕಷ್ಟಗಳಲ್ಲಿ ಪಾಲುಗಾರನಾಗಿದ್ದದ್ದು ನನಗೆ ತಿಳಿದಿದೆ” ಎಂದು ಹೇಳಿದನು.