Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:10 - ಪರಿಶುದ್ದ ಬೈಬಲ್‌

10 ಕಿತ್ತುಹಾಕಲು, ಕೆಡವಲು, ನಾಶಪಡಿಸಲು, ಹಾಳುಮಾಡಲು, ಕಟ್ಟಲು, ನೆಡಲು, ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ರಾಷ್ಟ್ರಗಳ ಮೇಲೂ ರಾಜ್ಯಗಳ ಮೇಲೂ ಅಧಿಕಾರವುಳ್ಳವನನ್ನಾಗಿ ನಾನು ನಿನ್ನನ್ನು ಈ ದಿನ ನೇಮಿಸಿದ್ದೇನೆ. ಇದರಿಂದಾಗಿ ಕಿತ್ತುಹಾಕುವ ಹಾಗು ಕೆಡುವುವ, ನಾಶಪಡಿಸುವ ಹಾಗು ನೆಲಸಮಮಾಡುವ, ಕಟ್ಟುವ ಹಾಗು ನೆಡುವ ಕಾರ್ಯ ನಿನ್ನದು,” ಎಂದರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕಿತ್ತುಹಾಕುವದು, ಕೆಡವುವದು, ನಾಶಪಡಿಸುವದು, ಹಾಳುಮಾಡುವದು, ಕಟ್ಟುವದು, ನೆಡುವದು, ಈ ಕಾರ್ಯಗಳನ್ನು ಮಾಡುವದಕ್ಕೋಸ್ಕರ ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇವಿುಸಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:10
29 ತಿಳಿವುಗಳ ಹೋಲಿಕೆ  

ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.


ದೇವರು ಹೇಳುವುದೇನೆಂದರೆ, “ಯೆಹೋವನಾದ ನಾನೇ ಹಾಳುಬಿದ್ದ ಆ ಕಟ್ಟಡಗಳನ್ನು ಮತ್ತೆ ಕಟ್ಟಿದೆನೆಂದೂ ಮತ್ತು ಬರಿದಾಗಿದ್ದ ಈ ದೇಶದಲ್ಲಿ ಬೆಳೆಯಿಸುವೆನೆಂದೂ ನಿನ್ನ ಸುತ್ತಲೂ ಇನ್ನೂ ಇರುವ ಜನಾಂಗಗಳು ತಿಳಿದುಕೊಳ್ಳುವವು. ನಾನೇ ಯೆಹೋವನು. ಇವುಗಳನ್ನು ನಾನೇ ಹೇಳಿದ್ದೇನೆ ಮತ್ತು ನಾನೇ ಇವುಗಳನ್ನು ನೆರವೇರಿಸುವೆನು.”


ನಾನು ಅವರನ್ನು ರಕ್ಷಿಸುವೆನು. ನಾನು ಅವರನ್ನು ಪುನಃ ಯೆಹೂದಕ್ಕೆ ಕರೆತರುವೆನು. ನಾನು ಅವರನ್ನು ಬೀಳಿಸುವದಿಲ್ಲ. ನಾನು ಅವರನ್ನು ಅಭಿವೃದ್ಧಿಪಡಿಸುತ್ತೇನೆ. ನಾನು ಅವರನ್ನು ಕೀಳುವದಿಲ್ಲ. ಅವರನ್ನು ನೆಟ್ಟು ಬೆಳೆಯುವದಕ್ಕೆ ಅವಕಾಶ ಮಾಡಿಕೊಡುವೆನು.


“ದಾವೀದನ ಗುಡಾರವು ಕುಸಿದುಬಿದ್ದಿದೆ. ಆದರೆ ಆ ದಿವಸಗಳಲ್ಲಿ ತಿರುಗಿ ಅದನ್ನು ಮೇಲಕ್ಕೆತ್ತುವೆನು. ಗೋಡೆಯಲ್ಲಿರುವ ರಂಧ್ರಗಳನ್ನು ನಾನು ಸರಿಪಡಿಸುವೆನು. ಬಿದ್ದುಹೋದ ಕಟ್ಟಡಗಳನ್ನು ತಿರುಗಿ ಕಟ್ಟುವೆನು. ಮುಂಚೆ ಹೇಗಿತ್ತೋ ಹಾಗೆಯೇ ಇರುವದು.


ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


“ನರಪುತ್ರನೇ, ಈಜಿಪ್ಟಿನ ಜನರಿಗಾಗಿ ಗೋಳಾಡು. ಪಾತಾಳಕ್ಕೆ ಇಳಿದುಹೋಗಿರುವ ಇತರ ಎಲ್ಲರೊಡನೆ ಇರುವದಕ್ಕಾಗಿ ಈಜಿಪ್ಟನ್ನು ಮತ್ತು ಇತರ ಜನಾಂಗಗಳ ಉಳಿದ ಪಟ್ಟಣಗಳನ್ನು ಸಮಾಧಿಗೆ ಕಳುಹಿಸು.


ನಾನು ನೋಡಿದ ದರ್ಶನವು ಕೆಬಾರ್ ಕಾಲುವೆಯ ಬಳಿ ಕಂಡ ದರ್ಶನದಂತಿತ್ತು. ನಾನು ಸಾಷ್ಟಾಂಗವೆರಗಿದೆನು.


ಹಜಾಯೇಲನು ಕೆಟ್ಟವರಾದ ಅನೇಕ ಜನರನ್ನು ಕೊಲ್ಲುತ್ತಾನೆ. ಹಜಾಯೇಲನ ಖಡ್ಗದಿಂದ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುತ್ತಾನೆ. ಯೇಹುವಿನಿಂದ ತಪ್ಪಿಸಿಕೊಂಡ ಆ ಕೆಟ್ಟ ಜನರನ್ನೆಲ್ಲ ಎಲೀಷನು ಕೊಲ್ಲುತ್ತಾನೆ.


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


“ನಾನು ನಿನ್ನನ್ನು ನಿನ್ನ ತಾಯಿಯ ಗರ್ಭದಲ್ಲಿ ರೂಪಿಸುವ ಮುಂಚೆಯೇ ನಿನ್ನನ್ನು ಬಲ್ಲವನಾಗಿದ್ದೆನು. ನೀನು ಹುಟ್ಟುವದಕ್ಕಿಂತ ಮುಂಚೆಯೇ ನಾನು ನಿನ್ನನ್ನು ಒಂದು ವಿಶೇಷವಾದ ಕೆಲಸಕ್ಕೆ ಅಂದರೆ ಜನಾಂಗಗಳಿಗೆ ಪ್ರವಾದಿಯನ್ನಾಗಿ ಆರಿಸಿಕೊಂಡಿದ್ದೆನು.”


ಬಾಬಿಲೋನಿಗೆ ಅನೇಕ ಕೇಡುಗಳು ಬರುವವೆಂದು ನಾನು ಹೇಳಿದ್ದೇನೆ. ಅದೆಲ್ಲ ನಡೆಯುವುದು. ಯೆರೆಮೀಯನು ಆ ಅನ್ಯಜನಾಂಗಗಳ ಬಗ್ಗೆ ಬೋಧಿಸಿದ್ದಾನೆ. ಆ ಮೂನ್ಸೂಚನೆಗಳೆಲ್ಲಾ ಈ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.


ಹೆಣಗಳನ್ನು ಮತ್ತು ಬೂದಿಯನ್ನು ಚೆಲ್ಲುವ ಇಡೀ ಕಣಿವೆ ಪ್ರದೇಶ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆಬಾಗಿಲಿನ ಮೂಲೆ, ಇವುಗಳವರೆಗಿರುವ ಬೆಟ್ಟಪ್ರದೇಶ ಅದರಲ್ಲಿ ಸೇರುವುದು. ಆ ಪ್ರದೇಶವೆಲ್ಲ ಯೆಹೋವನಿಗೆ ಪವಿತ್ರಸ್ಥಳವಾಗುವುದು. ಜೆರುಸಲೇಮ್ ನಗರವು ಇನ್ನುಮೇಲೆ ಎಂದಿಗೂ ಕೆಡವಲ್ಪಡದು; ಹಾಳಾಗದು!”


“ಯೆರೆಮೀಯನೇ, ಒಂದು ಸುರಳಿಯನ್ನು ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನ್ನು ಅದರಲ್ಲಿ ಬರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಬಗ್ಗೆಯೂ ಮತ್ತು ಉಳಿದ ಜನಾಂಗಗಳ ಬಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳ್ವಿಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಬ್ಧವನ್ನೂ ಬರೆದಿಡು.


ನಾನು ಯೆಹೂದದ ಜನರನ್ನು ಗಮನಿಸುತ್ತಿರುವುದು ಅವರನ್ನು ಕಾಪಾಡುವುದಕ್ಕಲ್ಲ. ನಾನು ಅವರನ್ನು ಗಮನಿಸುತ್ತಿರುವುದು ಅವರಿಗೆ ಕೇಡುಮಾಡುವುದಕ್ಕಾಗಿ. ಈಜಿಪ್ಟಿನಲ್ಲಿ ವಾಸಿಸುವ ಯೆಹೂದಿಯರು ಹಸಿವಿನಿಂದ ಸತ್ತುಹೋಗುವರು ಮತ್ತು ಖಡ್ಗಕ್ಕೆ ಬಲಿಯಾಗುವರು. ಅವರು ನಿರ್ನಾಮವಾಗುವವರೆಗೆ ಸಾಯುತ್ತಿರುವರು.


ಯೆರೆಮೀಯನೇ, “ಯೆಹೋವನು ಹೀಗೆ ಹೇಳುತ್ತಾನೆಂದು ಬಾರೂಕನಿಗೆ ತಿಳಿಸು. ನಾನು ಕಟ್ಟಿದ್ದನ್ನು ಕೆಡಿಸುತ್ತೇನೆ. ನಾನು ನೆಟ್ಟಿದ್ದನ್ನು ಕಿತ್ತು ಎಸೆಯುತ್ತೇನೆ. ನಾನು ಈ ರೀತಿ ಯೆಹೂದದಲ್ಲಿ ಎಲ್ಲಾ ಕಡೆಗೂ ಮಾಡುತ್ತೇನೆ.


“ನರಪುತ್ರನೇ, ಬಾಬಿಲೋನಿನ ರಾಜನ ಖಡ್ಗವು ಇಸ್ರೇಲಿಗೆ ಬರಲು ಎರಡು ಮಾರ್ಗಗಳ ನಕ್ಷೆಯನ್ನು ರಚಿಸು. ಅವರೆಡೂ ಒಂದೇ ಪ್ರದೇಶದಿಂದ (ಬಾಬಿಲೋನಿನಿಂದ) ಆರಂಭವಾಗುತ್ತವೆ. ಪ್ರತಿಯೊಂದು ರಸ್ತೆಯ ಆರಂಭದಲ್ಲಿ ಸೂಚನೆ ಕಂಬವನ್ನು ಚಿತ್ರಿಸು.


ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನೀನು ಒಹೊಲ ಮತ್ತು ಒಹೊಲೀಬಳನ್ನು ನ್ಯಾಯವಿಚಾರಣೆ ಮಾಡುವಿಯೋ? ಆಗ ನೀನು, ಗಾಬರಿಗೊಳಿಸುವ ಅವರ ದುಷ್ಟತನವನ್ನು ಅವರಿಗೆ ತಿಳಿಸು.


ನಾನು ಪ್ರವಾದಿಗಳ ಮೂಲಕ ಜನರಿಗೆ ಕಟ್ಟಳೆಗಳನ್ನು ವಿಧಿಸಿದೆನು. ನನ್ನ ಅಪ್ಪಣೆಯ ಮೇರೆಗೆ ಜನರು ಕೊಲ್ಲಲ್ಪಟ್ಟರು.


ಕೊಲ್ಲುವ ಸಮಯ, ವಾಸಿಮಾಡುವ ಸಮಯ. ನಾಶಮಾಡುವ ಸಮಯ, ಕಟ್ಟುವ ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು