Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:11 - ಪರಿಶುದ್ದ ಬೈಬಲ್‌

11 ಯೆಹೋವನಿಂದ ನನಗೆ ಈ ಸಂದೇಶ ಬಂದಿತು: “ಯೆರೆಮೀಯನೇ, ನಿನಗೆ ಏನು ಕಾಣುತ್ತಿದೆ?” ಎಂದು ಯೆಹೋವನು ಕೇಳಿದನು. ನಾನು ಆತನಿಗೆ, “ಬಾದಾಮಿಯ ಮರದಿಂದ ಮಾಡಿದ ಒಂದು ದಂಡ ಕಾಣಿಸುತ್ತಿದೆ” ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ ಸರ್ವೇಶ್ವರ ಸ್ವಾಮಿ, “ಎಲೈ ಯೆರೆಮೀಯನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ಅದಕ್ಕೆ ನಾನು, ಚಚ್ಚರ ಮರದ ರೆಂಬೆಯನ್ನು ನೋಡುತ್ತಿದ್ದೇನೆ,” ಎಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಯೆಹೋವನು - ಯೆರೆಮೀಯನೇ, ಏನು ನೋಡುತ್ತೀ ಎಂದು ನನ್ನನ್ನು ಕೇಳಿದನು, ಅದಕ್ಕೆ ನಾನು - ಚಚ್ಚರ ಮರದ ರೆಂಬೆಯನ್ನು ನೋಡುತ್ತೇನೆ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಯೆಹೋವ ದೇವರ ವಾಕ್ಯವು ನನಗೆ, “ಯೆರೆಮೀಯನೇ, ನೀನು ಏನು ಕಾಣುತ್ತೀ?” ಎಂದು ಕೇಳಿದರು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:11
11 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನನಗೆ, “ಆಮೋಸನೇ, ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ನೂಲುಗುಂಡು” ಅಂದೆನು. ಆಗ ನನ್ನ ಒಡೆಯನು, “ನೋಡು, ನನ್ನ ಜನರಾದ ಇಸ್ರೇಲರ ಮೇಲೆ ನೂಲುಗುಂಡನ್ನು ಹಾಕುವೆನು. ಅವರನ್ನು ನಾನು ಸುಮ್ಮನೆ ಬಿಟ್ಟುಬಿಡುವುದಿಲ್ಲ. ಅವರ ಪಾಪದ ಸ್ಥಳಗಳನ್ನು ನಾನು ತೆಗೆದುಬಿಡುವೆನು.


ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.


“ಏನನ್ನು ನೋಡುತ್ತೀ?” ಎಂದು ದೇವದೂತನು ಕೇಳಿದನು. “ಒಂದು ಹಾರುವ ಸುರುಳಿ, ಅದು ಮೂವತ್ತು ಅಡಿ ಉದ್ದ, ಹದಿನೈದು ಅಡಿ ಅಗಲವಿದೆ” ಎಂದು ನಾನು ಉತ್ತರಿಸಿದೆನು.


ಆಗ ದೂತನು, “ಏನು ನೋಡುತ್ತೀ?” ಎಂದು ಪ್ರಶ್ನಿಸಿದನು. ಆಗ ನಾನು “ಬಂಗಾರದ ದೀಪಸ್ತಂಭವನ್ನು ನೋಡುತ್ತಿದ್ದೇನೆ. ಆ ಸ್ತಂಭದಲ್ಲಿ ಏಳು ದೀಪಗಳಿವೆ. ದೀಪಸ್ತಂಭದ ಮೇಲೆ ಒಂದು ಬೋಗುಣಿ ಇದೆ. ಆ ಬೋಗುಣಿಯಿಂದ ಏಳು ನಳಿಗೆಗಳು ಪ್ರತೀ ದೀಪಕ್ಕೆ ಹೋಗುತ್ತವೆ. ಬೋಗುಣಿಯಲ್ಲಿಟ್ಟ ಎಣ್ಣೆಯು ಆ ನಳಿಗೆಯ ಮೂಲಕ ದೀಪಕ್ಕೆ ಸುರಿಯುತ್ತಿತ್ತು.


ಯೆಹೋವನು ನನಗೆ “ಯೆರೆಮೀಯನೇ, ನಿನಗೇನು ಕಾಣುತ್ತಿದೆ?” ಎಂದು ಕೇಳಿದನು. “ನನಗೆ ಅಂಜೂರಗಳು ಕಾಣುತ್ತಿವೆ. ಒಳ್ಳೆಯ ಅಂಜೂರಗಳು ಬಹಳ ಚೆನ್ನಾಗಿವೆ. ಕೊಳೆತ ಅಂಜೂರಗಳು ತಿನ್ನಲಾಗದಷ್ಟು ಕೊಳೆತಿವೆ” ಎಂದು ನಾನು ಉತ್ತರಿಸಿದೆ.


ಮರುದಿನ ಮೋಶೆ ಗುಡಾರದೊಳಗೆ ಹೋಗಿ ನೋಡಲಾಗಿ ಲೇವಿಕುಲದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.


“ಆ ಶಿಕ್ಷೆಯ ಸಮಯವು ಬಂದಿದೆ. ಆಪತ್ತು ಬರುತ್ತಿದೆ. ಹಿಂಸೆಯು ಅರಳಿದೆ. ದುರಹಂಕಾರವು ಮೊಗ್ಗು ಬಿಟ್ಟಿದೆ.


ಆದ್ದರಿಂದ ಯಾಕೋಬನು ಲಿಬ್ನೆ, ಲೂಜ್ ಮತ್ತು ಅರ್ಮೋನ್ ಎಂಬ ಮರಗಳಿಂದ ಹಸಿರುಕೊಂಬೆಗಳನ್ನು ಕತ್ತರಿಸಿದನು. ಅವುಗಳನ್ನು ಪಟ್ಟಿಪಟ್ಟಿಯಾಗಿ ತೊಗಟೆ ಸುಲಿದು ಅವುಗಳಲ್ಲಿರುವ ಬಿಳುಪುಬಣ್ಣವು ಕಾಣಿಸುವಂತೆ ಮಾಡಿದನು.


ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿಮುಗಿಸುವವು.


ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟಬಂದದ್ದನ್ನು ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಬೇಕಾಗದು. ಆ ಸಂಕಟಗಳು ಬೇಗನೇ ಬರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಬರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


ಆದ್ದರಿಂದ ಅವರಿಗೆ ನೀನು ಈ ವಿಷಯವನ್ನು ತಿಳಿಸು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: ಏನೆಂದರೆ ನಾನು ಇನ್ನು ಹೆಚ್ಚು ತಡಮಾಡುವುದಿಲ್ಲ. ನಾನೊಂದು ವಿಷಯವು ನೆರವೇರುವುದು ಎಂದು ಹೇಳಿದರೆ ಅದು ಖಂಡಿತ ನೆರವೇರುವುದು.’” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು