Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:14 - ಪರಿಶುದ್ದ ಬೈಬಲ್‌

14 ಯೆಹೋವನು ನನಗೆ, “ಉತ್ತರ ದಿಕ್ಕಿನಿಂದ ಈ ದೇಶದ ನಿವಾಸಿಗಳೆಲ್ಲರ ಮೇಲೆ ಒಂದು ಕೇಡು ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ನನಗೆ, “ಈ ದೇಶದ ನಿವಾಸಿಗಳೆಲ್ಲರ ಮೇಲೆ ಉತ್ತರ ದಿಕ್ಕಿನಿಂದ ಕೇಡು ಉಕ್ಕಿ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಸ್ವಾಮಿ ನನಗೆ ಹೀಗೆಂದರು : “ಈ ನಾಡಿನ ನಿವಾಸಿಗಳೆಲ್ಲರ ಮೇಲೆ ಉತ್ತರದಿಂದ ಕೇಡು ಉಕ್ಕಿಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯೆಹೋವನು ನನಗೆ ಹೀಗೆ ಹೇಳಿದನು - ಈ ದೇಶನಿವಾಸಿಗಳೆಲ್ಲರ ಮೇಲೆ ಬಡಗಲಿಂದ ಕೇಡು ಉಕ್ಕಿ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೋವ ದೇವರು ನನಗೆ, “ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:14
17 ತಿಳಿವುಗಳ ಹೋಲಿಕೆ  

ಕೇಳಿರಿ, ಉತ್ತರ ದಿಕ್ಕಿನಿಂದ ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು.


ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.


ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. ನಾನು ಭಯಂಕರವಾದ ವಿನಾಶವನ್ನು ಬರಮಾಡಲಿದ್ದೇನೆ.”


“ಉತ್ತರದಿಕ್ಕಿನಲ್ಲಿರುವ ಒಬ್ಬ ಮನುಷ್ಯನನ್ನು ನಾನು ಎಚ್ಚರಪಡಿಸಿದೆನು. ಅವನು ಪೂರ್ವದಿಕ್ಕಿನಿಂದ ಬರುವನು. ನನ್ನ ನಾಮವನ್ನು ಅವನು ಆರಾಧಿಸುವನು. ಕುಂಬಾರನು ಜೇಡಿಮಣ್ಣನ್ನು ತುಳಿದು ಹದಗೊಳಿಸುವಂತೆ ಅವನು ಅರಸರುಗಳ ಮೇಲೆ ತುಳಿದಾಡುವನು.


ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಬರುವದನ್ನು ಯೆಹೆಜ್ಕೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಬೆಂಕಿಯು ಪ್ರಜ್ವಲಿಸುತ್ತಿತ್ತು. ಮೋಡದ ಸುತ್ತಲೂ ಬೆಳಕಿತ್ತು. ಬೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನ್ನೊ ಕಂಡೆನು.


“ಇಗೋ, ಉತ್ತರದಿಂದ ಜನರು ಬರುತ್ತಿದ್ದಾರೆ. ಅವರು ಒಂದು ಪ್ರಬಲ ರಾಷ್ಟ್ರದಿಂದ ಬರುತ್ತಿದ್ದಾರೆ. ಇಡೀ ಜಗತ್ತಿನ ಹಲವಾರು ರಾಜರುಗಳು ಒಟ್ಟುಗೂಡಿ ಬರುತ್ತಿದ್ದಾರೆ.


ಉತ್ತರ ದಿಕ್ಕಿನ ಹಲವು ಜನಾಂಗಗಳನ್ನು ನಾನು ಒಟ್ಟುಗೂಡಿಸಿ ತರುವೆನು. ಆ ಜನಾಂಗಗಳ ಸಮುದಾಯವು ಬಾಬಿಲೋನಿನ ವಿರುದ್ಧ ಯುದ್ಧಕ್ಕೆ ಸಿದ್ಧವಾಗುತ್ತದೆ. ಬಾಬಿಲೋನ್ ಅವರಿಗೆ ವಶವಾಗುವುದು. ಆ ಜನಾಂಗಗಳ ಜನರು ಬಾಬಿಲೋನಿನ ಮೇಲೆ ಹಲವು ಬಾಣಗಳನ್ನು ಪ್ರಯೋಗ ಮಾಡುವರು. ಆ ಬಾಣಗಳೆಲ್ಲ ಬರಿಗೈಯಲ್ಲಿ ಯುದ್ಧದಿಂದ ಹಿಂದಿರುಗದ ಶೂರ ಸೈನಿಕರಂತಿರುವವು.


“ಈಜಿಪ್ಟು ಸುಂದರವಾದ ಹಸುವಿನಂತಿದೆ, ಆದರೆ ಉತ್ತರದಿಂದ ತೊಣಚಿಯು ಅದನ್ನು ಪೀಡಿಸಲು ಬರುತ್ತಿದೆ.


ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.


ಯೆಹೋವನು ಹೇಳುವುದೇನೆಂದರೆ: “ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಬರಲಿದೆ. ಭೂಮಿಯ ಬಹುದೂರದ ಸ್ಥಳಗಳಿಂದ ಒಂದು ಮಹಾಜನಾಂಗವು ಬರಲಿದೆ.


ಮಹಾದ್ವಾರಗಳ ಬಳಿಯಲ್ಲಿರುವ ಜನರೇ, ಗೋಳಾಡಿರಿ! ಪಟ್ಟಣದೊಳಗಿರುವ ಜನರೇ, ಕೂಗಾಡಿರಿ! ಫಿಲಿಷ್ಟಿಯದಲ್ಲಿರುವವರೆಲ್ಲರೂ ಭಯಪಡುವರು. ನಿಮ್ಮ ಧೈರ್ಯವು ಮೇಣದಂತೆ ಕರಗಿಹೋಗುವದು. ಇಗೋ, ಉತ್ತರದಿಕ್ಕಿನಲ್ಲಿ ಧೂಳು ಏಳುತ್ತಿದೆ. ಅಶ್ಶೂರದ ಸೈನ್ಯವು ಬರುತ್ತಿದೆ. ಅವರೆಲ್ಲರೂ ಬಲಶಾಲಿಗಳಾದ ವೀರರು.


ಸರ್ವಶಕ್ತನಾದ ಯೆಹೋವನು ನಿಮ್ಮನ್ನು ನೆಟ್ಟನು. ನಿಮಗೆ ಕೇಡು ಬರುವದೆಂದು ಆತನು ಸಾರಿರುವನು. ಏಕೆಂದರೆ ಇಸ್ರೇಲ್ ವಂಶವೂ ಯೆಹೂದ ವಂಶವೂ ದುಷ್ಕೃತ್ಯಗಳನ್ನು ಮಾಡಿವೆ. ಬಾಳನಿಗೆ ಹೋಮವನ್ನರ್ಪಿಸಿ ನನಗೆ ಕೋಪ ಬರುವಂತೆ ಮಾಡಿವೆ.”


ಯೆಹೋವನು ಹೀಗೆನ್ನುತ್ತಾನೆ: “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಬರುವರು. ಅವರು ಪ್ರವಾಹದಂತೆ ಇಡೀ ದೇಶವನ್ನು ವ್ಯಾಪಿಸುವರು. ಅವರು ಪಟ್ಟಣಗಳನ್ನೂ ಅಲ್ಲಿ ವಾಸಿಸುವ ಜನರನ್ನೂ ಮುತ್ತುವರು. ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು.


ಈ ವಿಷಯವನ್ನು ವಿಧೇಯರಾಗದ ಆ ಸಂತಾನಕ್ಕೆ ತಿಳಿಸು. ಅವರಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “‘ಹಂಡೆಯನ್ನು ಬೆಂಕಿಯ ಮೇಲಿಟ್ಟು ಅದರಲ್ಲಿ ನೀರು ಹೊಯ್ಯಿ.


ಉತ್ತರದಿಂದ ಬಂದ ದಂಡನ್ನು ನಿಮ್ಮ ದೇಶದಿಂದ ಹೊರಡಿಸುವೆನು. ಅವರನ್ನು ಒಣ ಬೆಂಗಾಡಿಗೆ ಕಳುಹಿಸುವೆನು. ಅವರಲ್ಲಿ ಕೆಲವರು ಪೂರ್ವದ ಸಮುದ್ರಕ್ಕೆ ಹೋಗುವರು, ಕೆಲವರು ಪಶ್ಚಿಮದ ಸಮುದ್ರಕ್ಕೆ ಹೋಗುವರು. ಅವರು ಭಯಂಕರ ಕೃತ್ಯಗಳನ್ನು ಮಾಡಿದುದರಿಂದ ಸತ್ತು ಕೊಳೆಯುವ ಸ್ಥಿತಿಗೆ ಬರಮಾಡುವೆನು. ಆಗ ಭಯಂಕರ ಹೊಲಸು ವಾಸನೆ ಇರುವದು.”


ಕಪ್ಪು ಕುದುರೆಗಳು ಉತ್ತರದಿಕ್ಕಿಗೆ ಹೋಗುವವು. ಕೆಂಪು ಕುದುರೆಗಳು ಪೂರ್ವದಿಕ್ಕಿಗೆ ಹೋಗುವವು. ಬಿಳಿ ಕುದುರೆಗಳು ಪಶ್ಚಿಮಕ್ಕೂ ಮಚ್ಚೆಯಿರುವ ಕುದುರೆಗಳು ದಕ್ಷಿಣ ದಿಕ್ಕಿಗೂ ಹೋಗುವವು.”


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು