Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:17 - ಪರಿಶುದ್ದ ಬೈಬಲ್‌

17 “ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನ್ನು ಜನರಿಗೆ ಹೇಳು. ಅವರಿಗೆ ಹೆದರಬೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನ್ನನ್ನು ಅವರೆದುರಿನಲ್ಲಿ ಹೆದರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಕಂಗೆಡಬೇಡ; ಕಂಗೆಟ್ಟರೆ ನಾನೂ ನಿನ್ನನ್ನು ಅವರ ಮುಂದೆ ಕಂಗೆಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:17
26 ತಿಳಿವುಗಳ ಹೋಲಿಕೆ  

ಯೆಹೋವನ ಶಕ್ತಿಯು ಎಲೀಯನ ಮೇಲೆ ಬಂದಿತು. ಎಲೀಯನು ಓಡುವುದಕ್ಕಾಗಿ ತನ್ನ ಬಟ್ಟೆಗಳನ್ನು ತನ್ನ ಸುತ್ತಲೂ ಬಿಗಿದುಕೊಂಡನು. ನಂತರ ಎಲೀಯನು ರಾಜನಾದ ಅಹಾಬನಿಗಿಂತ ಮುಂಚೆ ಇಜ್ರೇಲಿನ ದಾರಿಯುದ್ದಕ್ಕೂ ಓಡುತ್ತಲೇ ಹೋದನು.


ಆದ್ದರಿಂದ ನೀವು ನಿಮ್ಮ ಮನಸ್ಸುಗಳನ್ನು ಸೇವೆಗಾಗಿ ಸಿದ್ಧಪಡಿಸಿರಿ. ಅಲ್ಲದೆ ನಿಮ್ಮನ್ನು ಹತೋಟಿಯಲ್ಲಿಟ್ಟುಕೊಂಡಿರಿ. ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರೆಯುವ ಕೃಪಾವರದ ಮೇಲೆಯೇ ನಿಮ್ಮ ನಿರೀಕ್ಷೆಯೆಲ್ಲಾ ಇರಬೇಕು.


“ಉಡುಪನ್ನು ಧರಿಸಿಕೊಂಡು ಪೂರ್ಣಸಿದ್ಧರಾಗಿರಿ! ನಿಮ್ಮ ದೀಪಗಳು ಉರಿಯುತ್ತಿರಲಿ.


ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.


ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಆರೋನನಿಗೆ ಹೇಳು. ಆಗ ಅವನು ಅವುಗಳನ್ನೆಲ್ಲಾ ರಾಜನಿಗೆ ತಿಳಿಸುವನು. ಇಸ್ರೇಲರು ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ಫರೋಹನು ಸಮ್ಮತಿಸುವನು.


ಯೋಬನೇ, ನಡುಕಟ್ಟಿಕೊಂಡು ಬಲಿಷ್ಠನಾಗಿರು. ನಾನು ನಿನಗೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧನಾಗು.


ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ.


ನಿಮಗೆ ಒಳ್ಳೆಯದನ್ನೇ ಯಾವಾಗಲೂ ಮಾಡಿದೆನು. ನಾನು ನಿಮಗೆ ಯೇಸುವಿನ ಕುರಿತಾದ ಸುವಾರ್ತೆಯನ್ನು ಬಹಿರಂಗವಾಗಿ ಜನರೆದುರಿನಲ್ಲಿ ತಿಳಿಸಿದೆನು ಮತ್ತು ನಿಮ್ಮ ಮನೆಗಳಲ್ಲಿಯೂ ಸಹ ಬೋಧಿಸಿದೆನು.


ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ, ನೀವು ಈ ಬೆಟ್ಟದ ಬಳಿ ನನ್ನನ್ನು ಆರಾಧಿಸುವಿರಿ” ಎಂದು ಹೇಳಿದನು.


ಸುವಾರ್ತೆಯನ್ನು ಬೋಧಿಸುತ್ತೇನೆಂಬುದು ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವಲ್ಲ. ಸುವಾರ್ತೆಯನ್ನು ಬೋಧಿಸುವುದು ನನ್ನ ಕರ್ತವ್ಯವಾಗಿದೆ. ಅದನ್ನು ನಾನು ಮಾಡಲೇಬೇಕು. ನಾನು ಸುವಾರ್ತೆಯನ್ನು ಬೋಧಿಸದಿದ್ದರೆ, ನನ್ನ ಗತಿಯನ್ನು ಏನು ಹೇಳಲಿ!


“ಮಹಾನಗರವಾದ ನಿನೆವೆಗೆ ನೀನು ಎದ್ದುಹೋಗಿ ಅಲ್ಲಿ ನಾನು ಹೇಳಿದ್ದನ್ನು ಅವರಿಗೆ ಸಾರು.”


ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು.


ಎಲೀಷನು ಗೇಹಜಿಗೆ, “ಹೊರಡಲು ಸಿದ್ಧನಾಗು. ನನ್ನ ಕೋಲನ್ನು ತೆಗೆದುಕೊಂಡು ಹೋಗು. ಯಾರ ಹತ್ತಿರವಾಗಲಿ ಮಾತನಾಡಲು ನಿಲ್ಲದಿರು! ನೀನು ಯಾರನ್ನಾದರೂ ಸಂಧಿಸಿದರೆ ಅವನಿಗೆ, ‘ಕ್ಷೇಮವಾಗಿರುವೆಯಾ?’ ಎಂದು ಕೇಳದಿರು. ಯಾರಾದರೂ ನಿನ್ನನ್ನು ‘ಕ್ಷೇಮವಾಗಿರುವೆಯಾ?’ ಎಂದು ಕೇಳಿದರೆ, ಅವನಿಗೆ ಉತ್ತರಿಸದಿರು. ಹೀಗೆ ನೀನು ಹೋಗಿ, ನನ್ನ ಕೋಲನ್ನು ಮಗುವಿನ ಮುಖದ ಮೇಲೆ ಇಡು” ಎಂದು ಹೇಳಿದನು.


ನಿಮ್ಮಲ್ಲಿಗೆ ಬರುವುದಕ್ಕೆ ಮೊದಲೇ ಫಿಲಿಪ್ಪಿಯಲ್ಲಿ ಹಿಂಸೆಯನ್ನು ಅನುಭವಿಸಿದೆವು. ಅಲ್ಲಿಯ ಜನರು ನಮ್ಮ ವಿರುದ್ಧವಾಗಿ ಕೆಟ್ಟದ್ದನ್ನು ಹೇಳಿದರು. ಅದೆಲ್ಲವೂ ನಿಮಗೆ ತಿಳಿದಿದೆ. ನಿಮ್ಮ ಬಳಿಗೆ ಬಂದಾಗ, ಅನೇಕ ಜನರು ನಮಗೆ ವಿರುದ್ಧವಾಗಿದ್ದರು. ಆದರೆ ಧೈರ್ಯದಿಂದ ಇರಲು ಮತ್ತು ನಿಮಗೆ ಸುವಾರ್ತೆಯನ್ನು ತಿಳಿಸಲು ದೇವರು ನಮಗೆ ಸಹಾಯ ಮಾಡಿದನು.


ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್‌ಗಿಲ್ಯಾದಿಗೆ ಹೋಗು.


ಯೆಹೋವನ ದೂತನು ಎಲೀಯನಿಗೆ, “ಸೇನಾಧಿಪತಿಯೊಡನೆ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದನು. ಎಲೀಯನು ರಾಜನಾದ ಅಹಜ್ಯನನ್ನು ನೋಡಲು ಆ ಸೇನಾಧಿಪತಿಯೊಡನೆ ಹೋದನು.


ಇಗೋ, ನೀನು ನನ್ನ ವಿಷಯವಾಗಿ ಹೇಳಬೇಕು. ನಾನು ನಿನ್ನನ್ನು ಭದ್ರವಾದ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ಕಂಚಿನ ಗೋಡೆಯನ್ನಾಗಿಯೂ ಮಾಡುತ್ತೇನೆ. ನೀನು ದೇಶದಲ್ಲಿ ಎಲ್ಲರಿಗೂ ಎದುರಾಗಿ ನಿಲ್ಲಬಹುದು, ಯೆಹೂದ ದೇಶದ ರಾಜರ ವಿರುದ್ಧವಾಗಿಯೂ ಯೆಹೂದದ ನಾಯಕರ ವಿರುದ್ಧವಾಗಿಯೂ ಯೆಹೂದದ ಯಾಜಕರ ವಿರುದ್ಧವಾಗಿಯೂ ಯೆಹೂದದೇಶದ ಜನರ ವಿರುದ್ಧವಾಗಿಯೂ ನೀನು ನಿಲ್ಲುವೆ.


ಯೆಹೋವನು ಹೀಗೆಂದನು, “ಯೆರೆಮೀಯನೇ, ಯೆಹೋವನ ಆಲಯದ ಅಂಗಳದಲ್ಲಿ ನಿಲ್ಲು, ಯೆಹೋವನ ಆಲಯದಲ್ಲಿ ಆರಾಧನೆಗೆಂದು ಬರುವ ಯೆಹೂದದ ಎಲ್ಲಾ ಜನರಿಗೆ ಈ ಸಂದೇಶವನ್ನು ತಿಳಿಸು. ನಾನು ನಿನಗೆ ತಿಳಿಸೆಂದು ಹೇಳುವ ಎಲ್ಲವನ್ನೂ ಅವರಿಗೆ ಹೇಳು. ನನ್ನ ಸಂದೇಶದ ಯಾವ ಭಾಗವನ್ನೂ ಬಿಡಬೇಡ.


ಆಗ ಯೆರೆಮೀಯನು ಯೆಹೂದದ ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು: “ಈ ಆಲಯದ ಬಗ್ಗೆ ಮತ್ತು ಈ ನಗರದ ಬಗ್ಗೆ ಹೀಗೆ ಹೇಳಲು ಯೆಹೋವನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ. ನೀವು ಕೇಳಿದ ಪ್ರತಿಯೊಂದು ವಿಷಯವೂ ಯೆಹೋವನಿಂದಲೇ ಬಂದದ್ದು.


ಪ್ರವಾದಿಯಾದ ಯೆರೆಮೀಯನು ತನಗೆ ಮಾಡಲು ಹೇಳಿದಂತೆ ನೇರೀಯನ ಮಗನಾದ ಬಾರೂಕನು ಮಾಡಿದನು. ಬಾರೂಕನು ಸುರುಳಿಯ ಮೇಲೆ ಬರೆದ ಯೆಹೋವನ ಸಂದೇಶಗಳನ್ನು ಗಟ್ಟಿಯಾಗಿ ಯೆಹೋವನ ಆಲಯದಲ್ಲಿ ಓದಿದನು.


ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, “ಭಯಪಡದಿರು” ಎಂದು ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು