ಯೆರೆಮೀಯ 1:18 - ಪರಿಶುದ್ದ ಬೈಬಲ್18 ಇಗೋ, ನೀನು ನನ್ನ ವಿಷಯವಾಗಿ ಹೇಳಬೇಕು. ನಾನು ನಿನ್ನನ್ನು ಭದ್ರವಾದ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ಕಂಚಿನ ಗೋಡೆಯನ್ನಾಗಿಯೂ ಮಾಡುತ್ತೇನೆ. ನೀನು ದೇಶದಲ್ಲಿ ಎಲ್ಲರಿಗೂ ಎದುರಾಗಿ ನಿಲ್ಲಬಹುದು, ಯೆಹೂದ ದೇಶದ ರಾಜರ ವಿರುದ್ಧವಾಗಿಯೂ ಯೆಹೂದದ ನಾಯಕರ ವಿರುದ್ಧವಾಗಿಯೂ ಯೆಹೂದದ ಯಾಜಕರ ವಿರುದ್ಧವಾಗಿಯೂ ಯೆಹೂದದೇಶದ ಜನರ ವಿರುದ್ಧವಾಗಿಯೂ ನೀನು ನಿಲ್ಲುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಾನು ಹೇಳುವುದನ್ನು ಗಮನದಿಂದ ಕೇಳು - ಈ ದಿನ ನಿನ್ನನ್ನು ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಜನಸಾಮಾನ್ಯರು, ಹೀಗೆ ನಾಡಿನವರೆಲ್ಲರನ್ನು ಎದುರಿಸತಕ್ಕವನನ್ನಾಗಿ ಮಾಡಿದ್ದೇನೆ; ಕೋಟೆಕೊತ್ತಲಗಳಿಂದ ಸುಸಜ್ಜಿತ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ನಿನ್ನನ್ನು ಸ್ಥಾಪಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ, ಅದರ ಪ್ರಧಾನರಿಗೆ ವಿರೋಧವಾಗಿಯೂ, ಅದರ ಯಾಜಕರಿಗೆ ವಿರೋಧವಾಗಿಯೂ, ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತ್ತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ, ಕಬ್ಬಿಣದ ಸ್ತಂಭವಾಗಿಯೂ, ಕಂಚಿನ ಗೋಡೆಗಳಾಗಿಯೂ ಮಾಡಿದ್ದೇನೆ. ಅಧ್ಯಾಯವನ್ನು ನೋಡಿ |
“ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶ್ನೆಗಳನ್ನು ಕೇಳುವದಕ್ಕಾಗಿ ನಿಮ್ಮನ್ನು ನನ್ನಲ್ಲಿಗೆ ಕಳಿಸಿದ್ದಾನೆಂಬುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಬಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಬರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.
ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ನಿಮ್ಮ ಕೈಯಲ್ಲಿ ಯುದ್ಧದ ಆಯುಧಗಳಿವೆ. ಆ ಆಯುಧಗಳನ್ನು ನೀವು ನಿಮ್ಮ ರಕ್ಷಣೆಗಾಗಿಯೂ ಬಾಬಿಲೋನಿನ ರಾಜನ ವಿರುದ್ಧವಾಗಿಯೂ ಮತ್ತು ಬಾಬಿಲೋನಿನ ಜನರ ವಿರುದ್ಧವಾಗಿಯೂ ಬಳಸುತ್ತಿದ್ದೀರಿ. ಆದರೆ ನಾನು ಆ ಆಯುಧಗಳನ್ನು ವಿಫಲಗೊಳಿಸುತ್ತೇನೆ. “‘ಬಾಬಿಲೋನಿನ ಸೈನ್ಯವು ನಗರದ ಸುತ್ತಲಿನ ಪೌಳಿಗೋಡೆಯ ಬಳಿಯಿದೆ. ತಕ್ಷಣವೇ ನಾನು ಆ ಸೈನ್ಯವನ್ನು ಜೆರುಸಲೇಮಿನ ಒಳಗಡೆ ತರುತ್ತೇನೆ.
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.