Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:19 - ಪರಿಶುದ್ದ ಬೈಬಲ್‌

19 ಆ ಜನರೆಲ್ಲಾ ನಿನ್ನ ವಿರುದ್ಧ ಹೋರಾಡುವರು, ಆದರೆ ಅವರು ನಿನ್ನನ್ನು ಸೋಲಿಸಲಾಗುವುದಿಲ್ಲ. ಏಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಾನೇ ನಿನ್ನನ್ನು ರಕ್ಷಿಸುವೆನು.” ಇದು ಯೆಹೋವನಾದ ನನ್ನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:19
24 ತಿಳಿವುಗಳ ಹೋಲಿಕೆ  

ನೆನಪಿಡು, ನೀನು ಸ್ಥಿರಚಿತ್ತನಾಗಿರಬೇಕೆಂತಲೂ ಧೈರ್ಯಶಾಲಿಯಾಗಿರಬೇಕೆಂತಲೂ ನಾನು ನಿನಗೆ ಆಜ್ಞಾಪಿಸುತ್ತೇನೆ. ಆದ್ದರಿಂದ ಹೆದರಬೇಡ, ಯಾಕೆಂದರೆ ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನೇ ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಯಾರಿಗೂ ನೀನು ಹೆದರಬೇಡ, ನಾನೇ ನಿನ್ನ ಜೊತೆ ಇದ್ದೇನೆ. ನಾನು ನಿನ್ನನ್ನು ಕಾಪಾಡುತ್ತೇನೆ. ಈ ಮಾತನ್ನು ಯೆಹೋವನಾದ ನಾನೇ ಹೇಳುತ್ತಿದ್ದೇನೆ” ಎಂದನು.


ಆದರೆ ಯೆಹೋವನು ನನ್ನೊಡನಿದ್ದಾನೆ. ಯೆಹೋವನು ಒಬ್ಬ ಶೂರ ಯೋಧನಂತಿದ್ದಾನೆ. ಆದ್ದರಿಂದ ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿದ್ದ ಜನರು ಬೀಳುತ್ತಾರೆ. ಅವರು ನನ್ನನ್ನು ಸೋಲಿಸಲಾರರು. ಆ ಜನರು ಸೋತುಹೋಗುತ್ತಾರೆ. ಅವರಿಗೆ ಆಶಾಭಂಗವಾಗುತ್ತದೆ. ಅವರಿಗೆ ನಾಚಿಕೆಯಾಗುತ್ತದೆ. ಅವರು ಆ ನಾಚಿಕೆಯನ್ನು ಎಂದೂ ಮರೆಯಲಾರರು.


ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಆದರೆ ಅವರೆಂದೂ ಗೆಲ್ಲಲಿಲ್ಲ.


ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”


ನಿನ್ನ ಸ್ವಂತ ಜನರಿಂದಲೂ ಯೆಹೂದ್ಯರಲ್ಲದ ಜನರಿಂದಲೂ ನಿನಗೆ ಕೇಡಾಗದಂತೆ ಕಾಪಾಡುವೆನು. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತಿದ್ದೇನೆ.


ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.


ಇಗೋ, ನೀನು ನನ್ನ ವಿಷಯವಾಗಿ ಹೇಳಬೇಕು. ನಾನು ನಿನ್ನನ್ನು ಭದ್ರವಾದ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ಕಂಚಿನ ಗೋಡೆಯನ್ನಾಗಿಯೂ ಮಾಡುತ್ತೇನೆ. ನೀನು ದೇಶದಲ್ಲಿ ಎಲ್ಲರಿಗೂ ಎದುರಾಗಿ ನಿಲ್ಲಬಹುದು, ಯೆಹೂದ ದೇಶದ ರಾಜರ ವಿರುದ್ಧವಾಗಿಯೂ ಯೆಹೂದದ ನಾಯಕರ ವಿರುದ್ಧವಾಗಿಯೂ ಯೆಹೂದದ ಯಾಜಕರ ವಿರುದ್ಧವಾಗಿಯೂ ಯೆಹೂದದೇಶದ ಜನರ ವಿರುದ್ಧವಾಗಿಯೂ ನೀನು ನಿಲ್ಲುವೆ.


ಯೆಹೋವನ ಈ ಸಂದೇಶವು ಯೆರೆಮೀಯನಿಗೆ ಬಂದಿತು:


“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”


ಈಗ ನೀವು ಬಾಬಿಲೋನಿನ ರಾಜನಿಗೆ ಹೆದರಿದ್ದೀರಿ. ಆದರೆ ಅವನಿಗೆ ಅಂಜಬೇಡಿರಿ.’ ಇದು ಯೆಹೋವನ ನುಡಿ. ‘ಏಕೆಂದರೆ ನಾನು ನಿಮ್ಮೊಂದಿಗಿದ್ದೇನೆ. ನಾನೇ ನಿಮ್ಮನ್ನು ರಕ್ಷಿಸುವೆನು. ನಾನು ನಿಮ್ಮನ್ನು ಕಷ್ಟದಿಂದ ಪಾರು ಮಾಡುವೆನು. ಅವನ ಕೈಗೆ ನೀವು ಸಿಗುವುದಿಲ್ಲ.


ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”


ಆಗ ಅರಸನು, “ನೋಡಿರಿ, ನಾಲ್ಕು ಜನರು ಬೆಂಕಿಯಲ್ಲಿ ತಿರುಗಾಡುತ್ತಿರುವುದು ನನಗೆ ಕಾಣುತ್ತಿದೆ. ಅವರು ಕಟ್ಟಲ್ಪಟ್ಟಿಲ್ಲ. ಅವರನ್ನು ಬೆಂಕಿಯು ಸುಟ್ಟಿಲ್ಲ. ನಾಲ್ಕನೆಯವನು ದೇವಕುಮಾರನಂತೆ ಕಾಣುತ್ತಾನೆ” ಎಂದು ಹೇಳಿದನು.


ಅನಾತೋತಿನ ಜನರು ಯೆರೆಮೀಯನನ್ನು ಕೊಲೆ ಮಾಡಬೇಕೆಂದು ಯೋಚಿಸುತ್ತಿದ್ದರು. ಆ ಜನರು ಯೆರೆಮೀಯನಿಗೆ, “ಯೆಹೋವನ ಹೆಸರಿನಿಂದ ನೀನು ಪ್ರವಾದಿಸಬೇಡ, ನೀನು ಹಾಗೆ ಮಾಡಿದರೆ ನಾವು ನಿನ್ನ ಕೊಲೆ ಮಾಡುವೆವು” ಎಂದರು. ಅನಾತೋತಿನ ಆ ಜನರ ಬಗ್ಗೆ ಯೆಹೋವನು ಒಂದು ನಿರ್ಣಯವನ್ನು ತೆಗೆದುಕೊಂಡನು.


ಆಗ ಯೆರೆಮೀಯನ ವೈರಿಗಳು ಹೀಗೆಂದರು: “ಬನ್ನಿ, ನಾವು ಯೆರೆಮೀಯನ ವಿರುದ್ಧ ಒಳಸಂಚು ಮಾಡೋಣ. ಯಾಜಕನಿಂದ ಧರ್ಮೋಪದೇಶವು ತಪ್ಪುವದಿಲ್ಲ, ಇದು ಖಂಡಿತ. ಜ್ಞಾನಿಗಳಿಂದ ಮಂತ್ರಾಲೋಚನೆಯು ಇದ್ದೇ ಇರುತ್ತದೆ. ದೈವೋಕ್ತಿಯು ಪ್ರವಾದಿಯಿಂದ ಎಂದಿಗೂ ತಪ್ಪದು. ಆದ್ದರಿಂದ ಅವನ ಬಗ್ಗೆ ಸುಳ್ಳು ಹೇಳಿ ನಾಶಮಾಡೋಣ. ಅವನು ಹೇಳುವ ಯಾವುದಕ್ಕೂ ನಾವು ಗಮನಕೊಡಬೇಕಾಗಿಲ್ಲ.”


ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.


ಯೆಹೋವನು ಜನರಿಗೆ ತಿಳಿಸಬೇಕೆಂದು ಹೇಳಿದ ಎಲ್ಲವನ್ನು ಯೆರೆಮೀಯನು ಹೇಳಿ ಮುಗಿಸಿದನು. ಆಗ ಯಾಜಕರು, ಪ್ರವಾದಿಗಳು ಮತ್ತು ಎಲ್ಲಾ ಜನರು ಯೆರೆಮೀಯನನ್ನು ಹಿಡಿದುಕೊಂಡರು. ಅವರು “ನೀನು ಇಂಥಾ ಭಯಂಕರವಾದ ವಿಷಯವನ್ನು ಹೇಳಿದ್ದಕ್ಕಾಗಿ ನಿನಗೆ ಮರಣವೇ ಗತಿ!


ಆದರೆ ಅಂದು ಎಬೆದ್ಮೆಲೆಕನೇ, ನಾನು ನಿನ್ನನ್ನು ರಕ್ಷಿಸುತ್ತೇನೆ.’ ಇದು ಯೆಹೋವನ ನುಡಿ. ‘ನೀನು ಊಹಿಸಿ ಭಯಪಟ್ಟಂತೆ ನಿನ್ನನ್ನು ಆ ಜನರ ಕೈಗೆ ಒಪ್ಪಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು