Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:2 - ಪರಿಶುದ್ದ ಬೈಬಲ್‌

2 ಯೆಹೂದದಲ್ಲಿ ಆಮೋನನ ಮಗನಾದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನೊಂದಿಗೆ ಮಾತನಾಡಲು ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜುದೇಯದ ಅರಸನೂ ಅಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರುಷದಲ್ಲಿ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳಿಕೆಯ ಹದಿಮೂರನೆಯ ವರುಷದಲ್ಲಿ ಯೆಹೋವನ ವಾಕ್ಯವು ಇವನಿಗೆ ಒದಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವ ದೇವರ ವಾಕ್ಯವು ಇವನಿಗೆ ಕೇಳಿಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:2
18 ತಿಳಿವುಗಳ ಹೋಲಿಕೆ  

ಯೆಹೋವನ ಮಾತುಗಳು ಮೀಕನಿಗೆ ಬಂದವು. ಅರಸರಾದ ಯೋಥಾಮ, ಅಹಾಜ ಮತ್ತು ಹಿಜ್ಕೀಯರ ಆಳ್ವಿಕೆಯ ಸಮಯದಲ್ಲಿ ಇದು ನಡೆಯಿತು. ಇವರು ಯೆಹೂದ ರಾಜ್ಯದ ಅರಸರು. ಮೀಕನು ಮೋರೆಷೆತ್‌ನವನು. ಇವನು ಸಮಾರ್ಯ ಮತ್ತು ಜೆರುಸಲೇಮಿನ ವಿಷಯವಾಗಿ ದೇವದರ್ಶನವನ್ನು ಹೊಂದಿದನು.


ಆಮಿತ್ತೈಯ ಮಗನಾದ ಯೋನನಿಗೆ ಯೆಹೋವನು ಹೇಳಿದ್ದೇನೆಂದರೆ,


ಬೆಯೇರಿಯ ಮಗನಾದ ಹೋಶೇಯನಿಗೆ ಯೋಹೋವನಿಂದ ಬಂದ ಸಂದೇಶ: ಈ ಸಂದೇಶವು ಯೆಹೂದ ಪ್ರಾಂತ್ಯದ ಅರಸರಾದ ಉಜ್ಜೀಯ, ಯೋಥಾಮ, ಅಹಾಜ ಮತ್ತು ಹಿಜ್ಕೀಯ ಇವರ ಆಳ್ವಿಕೆಯ ಸಮಯದಲ್ಲಿ ಬಂದಿತು. ಇದು ಇಸ್ರೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಕಾಲ.


ಯೆಹೋವನಿಂದ ನನಗೆ ಈ ಸಂದೇಶ ಬಂದಿತು: “ಯೆರೆಮೀಯನೇ, ನಿನಗೆ ಏನು ಕಾಣುತ್ತಿದೆ?” ಎಂದು ಯೆಹೋವನು ಕೇಳಿದನು. ನಾನು ಆತನಿಗೆ, “ಬಾದಾಮಿಯ ಮರದಿಂದ ಮಾಡಿದ ಒಂದು ದಂಡ ಕಾಣಿಸುತ್ತಿದೆ” ಎಂದು ಉತ್ತರಕೊಟ್ಟೆನು.


ಯೆರೆಮೀಯನಿಗೆ ಯೆಹೋವನ ಈ ಸಂದೇಶ ಬಂದಿತು:


ಅವರು ಮೇಜಿನ ಮುಂದೆ ಕುಳಿತಿದ್ದಾಗ, ಯೆಹೋವನು ಆ ಪ್ರವಾದಿಯೊಂದಿಗೆ ಮಾತನಾಡಿದನು.


“ಯೆರೆಮೀಯನೇ, ಒಂದು ಸುರಳಿಯನ್ನು ತೆಗೆದುಕೊಂಡು ನಾನು ನಿನಗೆ ಹೇಳಿದ ಎಲ್ಲಾ ಸಂದೇಶಗಳನ್ನು ಅದರಲ್ಲಿ ಬರೆದಿಡು. ನಾನು ನಿನಗೆ ಇಸ್ರೇಲ್ ಮತ್ತು ಯೆಹೂದ ಜನಾಂಗಗಳ ಬಗ್ಗೆಯೂ ಮತ್ತು ಉಳಿದ ಜನಾಂಗಗಳ ಬಗ್ಗೆಯೂ ಹೇಳಿದ್ದೇನೆ. ಯೋಷೀಯನ ಆಳ್ವಿಕೆಯ ಕಾಲದಿಂದ ಇಲ್ಲಿಯವರೆಗೂ ನಾನು ನಿನಗೆ ಹೇಳಿದ ಪ್ರತಿಯೊಂದು ಶಬ್ಧವನ್ನೂ ಬರೆದಿಡು.


ಕಳೆದ ಇಪ್ಪತ್ಮೂರು ವರ್ಷಗಳಿಂದ ನಾನು ನಿಮಗೆ ಮತ್ತೆಮತ್ತೆ ಯೆಹೋವನ ಸಂದೇಶವನ್ನು ಕೊಡುತ್ತಿದ್ದೇನೆ. ಅಮೋನನ ಮಗನಾದ ಯೋಷೀಯನು ಯೆಹೂದದ ರಾಜನಾದ ಹದಿಮೂರನೆ ವರ್ಷದಿಂದ ನಾನು ಪ್ರವಾದಿಯಾಗಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಯೆಹೋವನ ಸಂದೇಶಗಳನ್ನು ನಿಮಗೆ ತಿಳಿಸುತ್ತಾ ಬಂದಿದ್ದೇನೆ. ಆದರೆ ನೀವು ಕಿವಿಗೆ ಹಾಕಿಕೊಂಡಿಲ್ಲ.


ರಾಜನಾದ ಆಮೋನನ ವಿರುದ್ಧ ಒಳಸಂಚು ಮಾಡಿದ ಅವನ ಅಧಿಕಾರಿಗಳನ್ನು ಆ ದೇಶದ ಜನಸಾಮಾನ್ಯರು ಕೊಂದುಹಾಕಿದರು. ಆಮೋನನ ಮಗನಾದ ಯೋಷೀಯನನ್ನು ಜನರು ಅವನ ನಂತರ ಹೊಸ ರಾಜನನ್ನಾಗಿ ಮಾಡಿದರು.


ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”


ಮನಸ್ಸೆಯು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಮನಸ್ಸೆಯನ್ನು “ಉಜ್ಜನ ವನ”ದಲ್ಲಿ ಸಮಾಧಿಮಾಡಿದರು. ಈ ವನವು ಅವನ ಸ್ವಂತ ಮನೆಯಲ್ಲಿತ್ತು. ಮನಸ್ಸೆಯ ನಂತರ ಅವನ ಮಗನಾದ ಆಮೋನನು ಹೊಸ ರಾಜನಾದನು.


ಯೋಷೀಯನು ರಾಜನಾಗಿದ್ದ ಹದಿನೆಂಟನೆಯ ವರ್ಷದಲ್ಲಿ ಅಚೆಲ್ಯನ ಮಗನೂ ಮೆಷುಲ್ಲಾಮನ ಮೊಮ್ಮಗನೂ ಕಾರ್ಯದರ್ಶಿಯೂ ಆದ ಶಾಫಾನನನ್ನು ದೇವಾಲಯಕ್ಕೆ ಕಳುಹಿಸಿದನು.


ಯೆಹೂದ ಪ್ರದೇಶವನ್ನು ಯೋಷೀಯನು ಆಳುತ್ತಿದ್ದಾಗ ಯೆಹೋವನು ನನ್ನೊಂದಿಗೆ ಮಾತನಾಡಿ, “ಯೆರೆಮೀಯನೇ, ಇಸ್ರೇಲ್‌ ಎಂಬಾಕೆಯು ಮಾಡಿದ ದುಷ್ಕೃತ್ಯಗಳನ್ನು ನೀನು ನೋಡಿದಿಯಾ? ಅವಳು ನನಗೆ ಹೇಗೆ ವಂಚಿಸಿದಳು ನೋಡಿದಿಯಾ? ಅವಳು ಪ್ರತಿಯೊಂದು ಬೆಟ್ಟದ ಮೇಲೆಯೂ ಸೊಂಪಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವಿಗ್ರಹಗಳ ಜೊತೆ ಜಾರತನ ಮಾಡಿದಳು.


ಆಗ ಯೆರೆಮೀಯನಿಗೆ ಯೆಹೋವನ ಸಂದೇಶ ಬಂದಿತು. ಹನನ್ಯನು ಯೆರೆಮೀಯನ ಕತ್ತಿನಿಂದ ನೊಗವನ್ನು ತೆಗೆದುಕೊಂಡು ಮುರಿದುಹಾಕಿದ ಮೇಲೆ ಈ ಸಂದೇಶ ಬಂದಿತು.


ಪೆತೂವೇಲನ ಮಗನಾದ ಯೋವೇಲನು ಯೆಹೋವನಿಂದ ಈ ಸಂದೇಶವನ್ನು ಪಡೆದನು.


ಚೆಫನ್ಯನಿಗೆ ಯೆಹೋವನು ಕೊಟ್ಟ ಸಂದೇಶ. ಆಮೋನನ ಮಗನಾದ ಯೋಷೀಯನು ಯೆಹೂದ ಪ್ರಾಂತ್ಯದ ಅರಸನಾಗಿದ್ದಾಗ ಈ ಸಂದೇಶವು ಅವನಿಗೆ ದೊರಕಿತು. ಚೆಫನ್ಯನು ಕೂಷನ ಮಗನು; ಕೂಷನು ಗೆದಲ್ಯನ ಮಗನು; ಗೆದಲ್ಯನು ಅಮರ್ಯನ ಮಗನು; ಅಮರ್ಯನು ಹಿಜ್ಕೀಯನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು