ಯೆರೆಮೀಯ 10:10 - ಪರಿಶುದ್ದ ಬೈಬಲ್10 ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಶಾಶ್ವತರಾಜನೂ ಆಗಿದ್ದಾನೆ; ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು. ಅಧ್ಯಾಯವನ್ನು ನೋಡಿ |
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.
ದಾವೀದನು ತನ್ನ ಹತ್ತಿರ ನಿಂತಿದ್ದವನಿಗೆ, “ಈ ಫಿಲಿಷ್ಟಿಯನನ್ನು ಕೊಂದು ಇಸ್ರೇಲರಿಗೆ ಉಂಟಾಗಿರುವ ಅಪನಿಂದೆಯನ್ನು ಹೋಗಲಾಡಿಸುವವನಿಗೆ ಸಿಗುವ ಬಹುಮಾನವೇನು? ಈ ಗೊಲ್ಯಾತನ್ಯಾರು? ಇವನು ಕೇವಲ ಒಬ್ಬ ಪರದೇಶಿ. ಗೊಲ್ಯಾತನು ಫಿಲಿಷ್ಟಿಯನೇ ಹೊರತು ಬೇರೆ ಯಾರೂ ಅಲ್ಲ. ಜೀವಸ್ವರೂಪನಾದ ದೇವರ ಸೈನ್ಯದ ವಿರೋಧವಾಗಿ ಮಾತಾಡಲು ಇವನು ತನ್ನನ್ನು ಯಾರೆಂದು ಯೋಚಿಸಿಕೊಂಡಿದ್ದಾನೆ?” ಎಂದನು.
ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.