Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:14 - ಪರಿಶುದ್ದ ಬೈಬಲ್‌

14 ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:14
20 ತಿಳಿವುಗಳ ಹೋಲಿಕೆ  

ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ.


ಆದರೆ ಕೆಲವರು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿಬಿಟ್ಟಿದ್ದಾರೆ. ಅವರ ಬಳಿಯಲ್ಲಿ ಬಂಗಾರದ ತಗಡಿನಿಂದ ಹೊದಿಸಿದ ವಿಗ್ರಹಗಳಿವೆ. ಅವರು ಆ ವಿಗ್ರಹಗಳಿಗೆ, ‘ನೀನೇ ನಮ್ಮ ದೇವರು’ ಎಂದು ಹೇಳುವರು. ಸುಳ್ಳುದೇವರುಗಳನ್ನು ಅವರು ಅವಲಂಬಿಸಿರುವದರಿಂದ ನಿರಾಶರಾಗುವರು.


ಎಷ್ಟೋ ಜನರು ಸುಳ್ಳುದೇವರುಗಳನ್ನು ರೂಪಿಸಿಕೊಂಡು ನಿರಾಶರಾಗುವರು. ಅವರೆಲ್ಲರೂ ನಾಚಿಕೆಗೆ ಗುರಿಯಾಗುವರು.


ಜನರು ತಮ್ಮ ವಿಗ್ರಹಗಳನ್ನು ಪೂಜಿಸುವರು. ಅವರು ತಮ್ಮ “ದೇವರುಗಳ” ಬಗ್ಗೆ ಜಂಬಕೊಚ್ಚುವರು. ಆದರೆ ಅವರು ನಾಚಿಕೆಗೀಡಾಗುವರು. ಅವರ “ದೇವರುಗಳು” ಯೆಹೋವನಿಗೆ ಅಡ್ಡಬಿದ್ದು ಆರಾಧಿಸುತ್ತವೆ.


ಕುಶಲಕರ್ಮಿಗಳು ಆ ದೇವರುಗಳನ್ನು ಮಾಡಿದರು. ಆ ಕುಶಲಕರ್ಮಿಗಳೆಲ್ಲಾ ಜನರೇ, ಅವರು ದೇವರುಗಳಲ್ಲ. ಆ ದೇವರುಗಳೆಲ್ಲಾ ಒಟ್ಟಾಗಿ ಸೇರಿ ತಮ್ಮೊಳಗೆ ಮಾತಾಡಿಕೊಂಡರೆ ಆಗ ಅವುಗಳಿಗೆ ನಾಚಿಕೆಯೂ ಭಯವೂ ಉಂಟಾಗುವದು.


ದೇವರಿಗಾಗಿ ಹುಡುಕುವ ಬುದ್ಧಿವಂತರು ಮನುಷ್ಯರಲ್ಲಿ ಇದ್ದಾರೋ ಎಂದು ಯೆಹೋವನು ಪರಲೋಕದಿಂದ ಮನುಷ್ಯರನ್ನು ನೋಡುವನು.


ನಿನಗೆ ಹೋಲಿಸಿದರೆ, ಜನರು ದಡ್ಡ ಪ್ರಾಣಿಗಳಂತಿದ್ದಾರೆ. ನಾವು ಯಾವುದನ್ನೂ ಅರ್ಥಮಾಡಿಕೊಳ್ಳಲಾಗದ ಮೂಢರಂತಿದ್ದೇವೆ.


ದುಷ್ಟರೇ, ನೀವು ಮೂಢರಾಗಿದ್ದೀರಿ! ನೀವು ಪಾಠವನ್ನು ಕಲಿತುಕೊಳ್ಳುವುದು ಯಾವಾಗ? ದುಷ್ಟರೇ, ನೀವು ಬಹು ದಡ್ಡರಾಗಿದ್ದೀರಿ! ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು.


ನಾನು ಬೇರೆಯವರಿಗಿಂತ ದಡ್ಡನಾಗಿರುವೆ. ಸರ್ವಸಾಮಾನ್ಯವಾದ ಬುದ್ಧಿಯೂ ನನಗಿಲ್ಲ.


ಅವರು ದೇವರ ಸತ್ಯವನ್ನು ತೊರೆದು ಸುಳ್ಳನ್ನು ಹಿಡಿದುಕೊಂಡರು; ಸೃಷ್ಟಿಸಲ್ಪಟ್ಟ ವಸ್ತುಗಳನ್ನು ಆರಾಧಿಸಿದರು; ಅವುಗಳ ಸೇವೆ ಮಾಡಿದರು. ಆದರೆ ಆ ವಸ್ತುಗಳನ್ನು ಸೃಷ್ಟಿಸಿದ ದೇವರನ್ನು ಅವರು ಆರಾಧಿಸಲಿಲ್ಲ; ಆತನ ಸೇವೆ ಮಾಡಲಿಲ್ಲ. ದೇವರಿಗೇ ನಿರಂತರ ಸ್ತುತಿಸ್ತೋತ್ರ ಸಲ್ಲಬೇಕು. ಆಮೆನ್.


ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”


ಆದರೆ ಮರುದಿನ ಬೆಳಿಗ್ಗೆ ಅಷ್ಡೋದಿನ ಜನರು ಎದ್ದಾಗ ದಾಗೋನ್ ವಿಗ್ರಹವು ನೆಲದ ಮೇಲೆ ಯೆಹೋವನ ಪವಿತ್ರ ಪೆಟ್ಟಿಗೆಯ ಮುಂದೆ ಬೋರಲಬಿದ್ದಿತ್ತು. ದಾಗೋನಿನ ತಲೆಯು ಮತ್ತು ಕೈಗಳು ಮುರಿದು ಹೊಸ್ತಿಲಿನ ಮೇಲೆ ಬಿದ್ದಿದ್ದವು; ದೇಹವು ಏಕಶಿಲೆಯಾಗಿ ಬಿದ್ದಿತ್ತು.


ನೀವು ಮಾಡುವ ಧಾರ್ಮಿಕ ಕಾರ್ಯಗಳನ್ನೂ ನಿಮ್ಮ ಒಳ್ಳೆತನವನ್ನೂ ನಾನು ಹೇಳಿದರೂ ಅವುಗಳೆಲ್ಲಾ ನಿಷ್ಪ್ರಯೋಜಕವಾದವುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು