Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:17 - ಪರಿಶುದ್ದ ಬೈಬಲ್‌

17 ನಿಮ್ಮದಾದ ಎಲ್ಲವನ್ನು ತೆಗೆದುಕೊಂಡು ಇಲ್ಲಿಂದ ಹೊರಡುವುದಕ್ಕೆ ಸಿದ್ಧರಾಗಿರಿ. ಯೆಹೂದದ ಜನರಾದ ನೀವು ನಗರದಲ್ಲಿ ಸಿಕ್ಕಿಹಾಕಿಕೊಂಡಿದ್ದೀರಿ. ವೈರಿಯು ನಗರವನ್ನು ಮುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮುತ್ತಿಗೆಗೆ ಈಡಾದ ಜನವೇ, ಗಂಟುಕಟ್ಟಿಕೊಂಡು ದೇಶದೊಳಗಿಂದ ನಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಮುತ್ತಿಗೆಗೆ ತುತ್ತಾದ ಜನತೆಯೇ, ಗಂಟು ಕಟ್ಟಿಕೊಂಡು ನಾಡುಬಿಟ್ಟು ನಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮುತ್ತಿಗೆಗೆ ಈಡಾದ ಜನವೇ, ಗಂಟು ಕಟ್ಟಿಕೊಂಡು ದೇಶದೊಳಗಿಂದ ನಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮುತ್ತಿಗೆಗೆ ಒಳಗಾದವರೇ, ನಿಮ್ಮ ದೇಶ ಬಿಡಲು ನಿಮ್ಮ ಸೊತ್ತುಗಳನ್ನು ಕೂಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:17
6 ತಿಳಿವುಗಳ ಹೋಲಿಕೆ  

ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.


“ಭಯಂಕರವಾದ ನಾಶಕ್ಕೆ ಕಾರಣವಾದ ವಸ್ತುವೊಂದನ್ನು ಕುರಿತು ಪ್ರವಾದಿ ದಾನಿಯೇಲನು ಹೇಳಿದ್ದಾನೆ. ಈ ಭಯಂಕರವಾದ ವಸ್ತುವು ದೇವಾಲಯದ ಪರಿಶುದ್ಧ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುತ್ತಿರುವವನು ಇದರ ಅರ್ಥವನ್ನು ಗ್ರಹಿಸಿಕೊಳ್ಳಲಿ.)


ಎದ್ದು ಈ ಸ್ಥಳವನ್ನು ಬಿಟ್ಟುಹೋಗು. ಇದು ನಿನ್ನ ವಿಶ್ರಾಂತಿಯ ಸ್ಥಳವಲ್ಲ, ಯಾಕೆಂದರೆ ನೀನು ಇದನ್ನು ಹಾಳು ಮಾಡಿರುವೆ. ನೀನು ಇದನ್ನು ಹೊಲಸು ಮಾಡಿರುವೆ, ಆದ್ದರಿಂದ ಇದು ನಾಶವಾಗುವದು; ಭಯಂಕರ ರೀತಿಯಲ್ಲಿ ಕೆಡವಲ್ಪಡುವದು.


“ಜೆರುಸಲೇಮ್ ನಗರವೇ, ನಾನು ನಿನ್ನ ವಿರುದ್ಧವಾಗಿದ್ದೇನೆ. ನೀನು ಬೆಟ್ಟದ ಮೇಲೆ ಕುಳಿತಿರುವೆ, ನೀನು ರಾಣಿಯಂತೆ ಈ ಕಣಿವೆಯ ಮೇಲೆ ಕುಳಿತಿರುವೆ. ‘ನಮ್ಮ ಮೇಲೆ ಯಾರೂ ಧಾಳಿ ಮಾಡಲಾರರು, ನಮ್ಮ ಭದ್ರವಾದ ನಗರವನ್ನು ಯಾರೂ ಪ್ರವೇಶ ಮಾಡಲಾರರು’ ಎಂದು ಜೆರುಸಲೇಮಿನ ನಿವಾಸಿಗಳಾದ ನೀವು ಹೇಳುವಿರಿ.” ಆದರೆ ಯೆಹೋವನ ಸಂದೇಶವನ್ನು ಕೇಳಿರಿ.


“ಆ ವೈರಿಗಳು ನಿಮ್ಮ ಪಟ್ಟಣಗಳನ್ನೆಲ್ಲಾ ಮುತ್ತಿ ವಶಪಡಿಸಿಕೊಳ್ಳುವರು. ಆ ಪಟ್ಟಣಗಳಿಗೆ ಎತ್ತರದ ಪೌಳಿಗೋಡೆಗಳಿವೆ. ಆದ್ದರಿಂದ ನಮಗೆ ಭಯವಿಲ್ಲವೆಂದು ನೀವು ಭರವಸೆಯಿಂದಿರುವಿರಿ. ಆದರೆ ಅವರು ಪೌಳಿಗೋಡೆಗಳನ್ನು ಕೆಡವಿ ನೆಲಸಮ ಮಾಡುವರು. ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೆಲ್ಲಾ ತೊಂದರೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು