ಯೆರೆಮೀಯ 10:18 - ಪರಿಶುದ್ದ ಬೈಬಲ್18 ಯೆಹೋವನು ಹೇಳುತ್ತಾನೆ: “ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಏಕೆಂದರೆ ಸರ್ವೇಶ್ವರ ನುಡಿವ ಮಾತಿದು : “ಇಗೋ, ಈ ಸಾರಿ ಈ ನಾಡಿನ ನಿವಾಸಿಗಳನ್ನು ಕವಣೆಯ ಕಲ್ಲಂತೆ ಎಸೆದುಬಿಡುವೆನು; ಬುದ್ಧಿಬರಲೆಂದು ಅವರನ್ನು ಬಾಧಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿಬರಲೆಂದು ಅವರನ್ನು ಬಾಧಿಸುವೆನು ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಏಕೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣೆಯಿಂದ ಎಸೆದುಬಿಡುತ್ತೇನೆ. ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.” ಅಧ್ಯಾಯವನ್ನು ನೋಡಿ |
“ಮನುಷ್ಯನೇ, ಯೆಹೋವನು ನಿನ್ನನ್ನು ಧ್ವಂಸ ಮಾಡುವನು. ಆತನು ನಿನ್ನನ್ನು ಚೆಂಡಿನಂತೆ ಉರುಳಿಸಿ ಬಹುದೂರಕ್ಕೆ ಅಂದರೆ ಬೇರೊಂದು ದೇಶದ ತೆರೆದ ತೋಳುಗಳಿಗೆ ಎಸೆದುಬಿಡುವನು. ಅಲ್ಲಿ ನೀನು ಸಾಯುವೆ” ಎಂದು ಹೇಳಿದನು. ಅದಕ್ಕೆ ಯೆಹೋವನು, “ನೀನು ನಿನ್ನ ರಥಗಳಲ್ಲಿ ಹೆಚ್ಚಳಪಡುತ್ತಿರುವೆ. ಆದರೆ ಆ ದೂರದೇಶದಲ್ಲಿರುವ ನಿನ್ನ ಹೊಸ ಅರಸನ ಬಳಿಯಲ್ಲಿ ಇದಕ್ಕಿಂತಲೂ ಶ್ರೇಷ್ಠವಾದ ರಥಗಳಿವೆ. ಅವನ ಅರಮನೆಯಲ್ಲಿ ನಿನ್ನ ರಥಗಳು ಮುಖ್ಯವಾದವುಗಳಾಗಿರುವುದಿಲ್ಲ.