Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:22 - ಪರಿಶುದ್ದ ಬೈಬಲ್‌

22 ಕೇಳಿರಿ, ಉತ್ತರ ದಿಕ್ಕಿನಿಂದ ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದೋ ಸುದ್ದಿ, ಕೇಳಿಬರುತ್ತಿದೆ ಸುದ್ದಿ ! ದೊಡ್ಡ ಕೋಲಾಹಲವೆದ್ದಿದೆ ಉತ್ತರ ನಾಡಿನಲ್ಲಿ : ‘ಅದನ್ನು ನರಿಗಳ ಬೀಡಾಗಿಸಿರಿ ಜುದೇಯದ ನಗರಗಳನ್ನು ನಾಶಮಾಡಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವುದಕ್ಕೂ, ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೂ, ಸುದ್ದಿಯ ಶಬ್ದವೂ, ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:22
16 ತಿಳಿವುಗಳ ಹೋಲಿಕೆ  

“ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”


ಏಸಾವನನ್ನು ನಾನು ಸ್ವೀಕರಿಸಲಿಲ್ಲ. ಏಸಾವನಿರುವ ಬೆಟ್ಟಪ್ರದೇಶವನ್ನು ನಾನು ಹಾಳುಮಾಡಿದೆನು. ಈಗ ಕಾಡುನಾಯಿಗಳು ಮಾತ್ರ ಅಲ್ಲಿ ವಾಸಿಸುತ್ತವೆ.” ಎಂದು ಹೇಳಿದನು.


ಯೆಹೋವನು ಹೇಳುವುದೇನೆಂದರೆ: “ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಬರಲಿದೆ. ಭೂಮಿಯ ಬಹುದೂರದ ಸ್ಥಳಗಳಿಂದ ಒಂದು ಮಹಾಜನಾಂಗವು ಬರಲಿದೆ.


ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.


ಇದು ಯೆಹೋವನ ಮಾತು: “ಇಸ್ರೇಲ್ ಮನೆತನವೇ, ನಿನ್ನ ಮೇಲೆ ಧಾಳಿ ಮಾಡುವುದಕ್ಕೆ ನಾನು ಬಹಳ ದೂರದಿಂದ ಒಂದು ಜನಾಂಗವನ್ನು ತರುತ್ತೇನೆ. ಅದು ಒಂದು ಬಲಿಷ್ಠ ಜನಾಂಗ; ಅದೊಂದು ಪುರಾತನ ಕಾಲದಿಂದ ಬಂದ ಜನಾಂಗ. ಆ ಜನಾಂಗದವರು ಮಾತನಾಡುವ ಭಾಷೆ ನಿನಗೆ ತಿಳಿಯುವದಿಲ್ಲ. ಅವರು ಹೇಳುವುದು ನಿನಗೆ ಅರ್ಥವಾಗುವದಿಲ್ಲ.


ಚೀಯೋನಿನ ಕಡೆಗೆ ಧ್ವಜವನ್ನು ಎತ್ತಿ ಸಂಕೇತ ಕೊಡಿ. ನಿಲ್ಲಬೇಡಿ. ನಿಮ್ಮ ಜೀವ ರಕ್ಷಣೆಗಾಗಿ ಓಡಿರಿ. ನಾನು ಉತ್ತರದಿಂದ ವಿಪತ್ತನ್ನು ತರುತ್ತಿರುವುದರಿಂದ ನೀವು ಹೀಗೆ ಮಾಡಬೇಕು. ನಾನು ಭಯಂಕರವಾದ ವಿನಾಶವನ್ನು ಬರಮಾಡಲಿದ್ದೇನೆ.”


ಸ್ವಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನ್ನು ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಬರುವರು. ಅವರು ಜೆರುಸಲೇಮಿನ ಹೆಬ್ಬಾಗಿಲಿನ ಹತ್ತಿರ ತಮ್ಮ ಆಸನಗಳನ್ನು ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು.


ಮುಳ್ಳುಗಿಡಗಳು ಅಲ್ಲಿಯ ಸುಂದರವಾದ ಬಂಗಲೆಗಳಲ್ಲಿ ಬೆಳೆಯುವವು. ಕಾಡುನಾಯಿಗಳೂ ಗೂಬೆಗಳೂ ಆ ಮನೆಗಳಲ್ಲಿ ವಾಸಿಸುವವು. ಕಾಡುಪ್ರಾಣಿಗಳು ಅದನ್ನು ತಮ್ಮ ಮನೆಯನ್ನಾಗಿ ಮಾಡಿಕೊಳ್ಳುವವು. ಅಲ್ಲಿ ಬೆಳೆಯುವ ಎತ್ತರವಾದ ಹುಲ್ಲುಗಳಲ್ಲಿ ಉಷ್ಟ್ರಪಕ್ಷಿಗಳು ವಾಸಮಾಡುವವು.


ಯೆಹೋವನು ನನಗೆ, “ಉತ್ತರ ದಿಕ್ಕಿನಿಂದ ಈ ದೇಶದ ನಿವಾಸಿಗಳೆಲ್ಲರ ಮೇಲೆ ಒಂದು ಕೇಡು ಬರುವದು.


ಕೇಳಿರಿ, ದಾನ್ ಪ್ರದೇಶದಿಂದ ದೂತನ ಸ್ವರವು ಕೇಳಿಬರುತ್ತಿದೆ. ಎಫ್ರಾಯೀಮ್ ಬೆಟ್ಟಪ್ರದೇಶದಿಂದ ಒಬ್ಬನು ಕೆಟ್ಟ ಸಮಾಚಾರವನ್ನು ತರುತ್ತಿದ್ದಾನೆ.


ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


“ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.”


ಚೀಯೋನಿಗೆ ಹೋಗುವ ದಾರಿಗಳು ದುಃಖಿಸುತ್ತಿವೆ. ಅವುಗಳು ದುಃಖಿಸುತ್ತಿವೆ; ಏಕೆಂದರೆ ಯಾರೂ ಈಗ ಉತ್ಸವಗಳಿಗಾಗಿ ಚೀಯೋನಿಗೆ ಬರುವದಿಲ್ಲ. ಚೀಯೋನಿನ ಎಲ್ಲ ಹೆಬ್ಬಾಗಿಲುಗಳು ನಿರ್ಜನವಾಗಿವೆ. ಚೀಯೋನಿನ ಎಲ್ಲ ಯಾಜಕರು ನರಳಾಡುತ್ತಿದ್ದಾರೆ. ಚೀಯೋನಿನ ತರುಣಿಯರನ್ನು ತೆಗೆದುಕೊಂಡು ಹೋಗಲಾಗಿದೆ. ಇದೆಲ್ಲ ಚೀಯೋನಿಗೆ ಅತಿ ದುಃಖವನ್ನುಂಟುಮಾಡಿದೆ.


ಇದನ್ನು ನೀನು ಸಾಮಾನ್ಯ ಜನರಿಗೆ ತಿಳಿಸಬೇಕು. ನೀನು ಹೀಗೆ ಹೇಳಬೇಕು, ‘ಇನ್ನೂ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಬಗ್ಗೆ ನಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಅವರು ಊಟಮಾಡುವಾಗ ಉದ್ವೇಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ.


ಪ್ರಾಯದಸಿಂಹಗಳು (ವೈರಿಗಳು) ಇಸ್ರೇಲ್ ಜನಾಂಗದ ಮೇಲೆ ಗರ್ಜಿಸುತ್ತಿವೆ. ಆ ಸಿಂಹಗಳು ಆರ್ಭಟಿಸುತ್ತಿವೆ; ಇಸ್ರೇಲರ ನಾಡನ್ನು ನಾಶಮಾಡಿವೆ. ಇಸ್ರೇಲ್‌ನ ನಗರಗಳು ಸುಡಲ್ಪಟ್ಟಿವೆ; ಅವುಗಳು ನಿರ್ಜನವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು