ಯೆರೆಮೀಯ 10:24 - ಪರಿಶುದ್ದ ಬೈಬಲ್24 ಯೆಹೋವನೇ, ನಮ್ಮನ್ನು ತಿದ್ದು, ಆದರೆ ಕಠೋರನಾಗಬೇಡ, ಕೋಪದಲ್ಲಿ ನಮ್ಮನ್ನು ದಂಡಿಸಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ. ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ವಿುತಿಮೀರಿ ಬೇಡ; ರೋಷದಿಂದ ದಂಡಿಸದಿರು, ನಾನು ಕೇವಲ ಕ್ಷೀಣನಾದೇನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು. ಅಧ್ಯಾಯವನ್ನು ನೋಡಿ |
“ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.”
ಯೆಹೋವನು ಹೀಗೆನ್ನುತ್ತಾನೆ: “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ. ನಾನು ನಿನ್ನ ಜೊತೆಯಲ್ಲಿದ್ದೇನೆ. ನಾನು ನಿನ್ನನ್ನು ಅನೇಕ ಸ್ಥಳಗಳಿಗೆ ಕಳುಹಿಸಿದೆ. ನಾನು ಆ ಜನಾಂಗಗಳನ್ನೆಲ್ಲ ಸಂಪೂರ್ಣವಾಗಿ ನಾಶಮಾಡುತ್ತೇನೆ. ಆದರೆ ನಿನ್ನನ್ನು ನಾನು ಸಂಪೂರ್ಣವಾಗಿ ನಾಶಮಾಡುವದಿಲ್ಲ. ನೀನು ಮಾಡಿದ ದುಷ್ಕೃತ್ಯಗಳಿಗಾಗಿ ನಿನಗೆ ಶಿಕ್ಷೆ ಆಗಲೇಬೇಕು. ಆದ್ದರಿಂದ ನೀನು ದಂಡನೆಯಿಂದ ತಪ್ಪಿಸಿಕೊಳ್ಳಲು ನಾನು ಬಿಡುವದಿಲ್ಲ. ನಾನು ನಿನಗೆ ಸರಿಯಾಗಿ ಬುದ್ಧಿ ಕಲಿಸುತ್ತೇನೆ, ಆದರೆ ನ್ಯಾಯವಂತನಾಗಿರುವೆನು.”