ಯೆರೆಮೀಯ 10:25 - ಪರಿಶುದ್ದ ಬೈಬಲ್25 ನಿನಗೆ ಕೋಪ ಬಂದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಸರ್ವೇಶ್ವರಾ, ನಿಮ್ಮನ್ನು ಅರಿತುಕೊಳ್ಳದವರ ಮೇಲೆ ನಿಮ್ಮ ನಾಮವನ್ನು ಉಚ್ಚರಿಸದವರ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದುಬಿಡಿ. ಅವರು ಯಕೋಬ್ಯರನ್ನು ಕಬಳಿಸಿದ್ದಾರೆ ಹೌದು, ಪೂರ್ತಿಯಾಗಿ ಕಬಳಿಸಿಬಿಟ್ಟಿದ್ದಾರೆ ಅವರ ನಿವಾಸಗಳನ್ನು ನಾಶಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ. ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆ ಹೇಳುತ್ತಾನೆ: “ನನ್ನನ್ನು ಕಾದುಕೊಂಡಿರಿ. ನೀವು ನನ್ನ ನ್ಯಾಯತೀರ್ಪಿನ ತನಕ ಕಾದುಕೊಂಡಿರಿ. ನಾನು ಬೇರೆ ಜನಾಂಗಗಳನ್ನು ಇಲ್ಲಿಗೆ ಕರೆದು ನಿಮ್ಮನ್ನು ಶಿಕ್ಷಿಸುವಂತೆ ಮಾಡುವ ಹಕ್ಕು ನನಗಿದೆ. ನಿಮ್ಮ ಮೇಲೆ ನನಗಿರುವ ಸಿಟ್ಟು ತೋರಿಸಲು ನಾನು ಆ ಜನಾಂಗಗಳನ್ನು ಉಪಯೋಗಿಸುವೆನು. ನಿಮ್ಮ ಮೇಲೆ ನಾನು ಎಷ್ಟರಮಟ್ಟಿಗೆ ಕೋಪಗೊಂಡಿದ್ದೇನೆ ಎಂದು ಅವರ ಮೂಲಕ ನಿಮಗೆ ತಿಳಿದುಬರುವುದು. ಆಗ ಇಡೀ ದೇಶವೇ ನಾಶವಾಗುವುದು.
ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು. ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.”