ಯೆರೆಮೀಯ 10:3 - ಪರಿಶುದ್ದ ಬೈಬಲ್3 ಬೇರೆ ಜನರ ಸಂಪ್ರದಾಯಗಳು ನಿಷ್ಪ್ರಯೋಜಕವಾದವುಗಳಾಗಿವೆ. ಅವರ ವಿಗ್ರಹಗಳು ಅರಣ್ಯದ ಮರವಲ್ಲದೆ ಮತ್ತೇನಲ್ಲ. ಅವರ ವಿಗ್ರಹಗಳು ಬಡಗಿಯು ಉಳಿಯಿಂದ ಮಾಡಲ್ಪಟ್ಟವುಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ಜನಾಂಗಗಳ ಧಾರ್ಮಿಕ ಪದ್ಧತಿಗಳು ಶೂನ್ಯ. ಅರಣ್ಯದ ಮರಗಳನ್ನು ಅವರು ಕತ್ತರಿಸುತ್ತಾರೆ ಬಡಗಿಯ ಕೈಯಿಂದ, ಅವನ ಉಳಿಯಿಂದ, ಅದನ್ನು ರೂಪಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಬಾಚಿಯಿಂದ ರೂಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.