ಅವರು ಆ ವಿಗ್ರಹವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಹೊರುತ್ತಾರೆ. ಆ ಸುಳ್ಳುದೇವರುಗಳು ನಿಷ್ಪ್ರಯೋಜಕವಾಗಿವೆ. ಜನರೇ ಅವುಗಳನ್ನು ಹೊತ್ತುಕೊಳ್ಳಬೇಕು. ಜನರು ಅವುಗಳನ್ನು ನೆಲದ ಮೇಲೆ ಇಟ್ಟಾಗ ಅವು ಅಲ್ಲಾಡುವದಿಲ್ಲ. ತಮ್ಮ ಸ್ಥಳದಿಂದ ಆ ಸುಳ್ಳುದೇವರುಗಳು ಎದ್ದುಹೋಗುವದಿಲ್ಲ. ಜನರು ಅದರ ಮುಂದೆ ಕೂಗಿಕೊಂಡರೂ ಅವು ಕೇಳಿಸಿಕೊಳ್ಳುವದಿಲ್ಲ. ಆ ಸುಳ್ಳುದೇವರುಗಳು ಕೇವಲ ವಿಗ್ರಹಗಳಷ್ಟೇ. ಅವು ಜನರನ್ನು ಅವರ ಕಷ್ಟಗಳಿಂದ ಬಿಡಿಸಲಾರವು.