ಯೆರೆಮೀಯ 10:6 - ಪರಿಶುದ್ದ ಬೈಬಲ್6 ಯೆಹೋವನೇ, ನಿನ್ನತೆ ಯಾರೂ ಇಲ್ಲ. ನೀನೇ ಮಹೋನ್ನತನು. ನಿನ್ನ ಹೆಸರು ಮಹೋನ್ನತವಾದದ್ದು; ಸಾಮರ್ಥ್ಯಪೂರ್ಣವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೇ ಸರ್ವೇಶ್ವರಾ, ನಿಮಗೆ ಸಮಾನನು ಇಲ್ಲ, ನೀವು ಮಹೋತ್ತಮರು ಸಾಮರ್ಥ್ಯದಿಂದ ಕೂಡಿರುವ ನಿಮ್ಮ ನಾಮವೂ ಮಹತ್ತರವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನೇ, ನಿನ್ನ ಸಮಾನನು ಯಾವನೂ ಇಲ್ಲ; ನೀನು ಮಹತ್ತಮನು, ನಿನ್ನ ನಾಮವೂ ಸಾಮರ್ಥ್ಯದಿಂದ ಕೂಡಿ ಮಹತ್ತಮವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು. ಅಧ್ಯಾಯವನ್ನು ನೋಡಿ |
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.
ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.”