Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:7 - ಪರಿಶುದ್ದ ಬೈಬಲ್‌

7 ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜನಾಂಗಗಳ ಅರಸನೇ, ಯಾರು ನಿನಗೆ ಅಂಜದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ ರಾಜಪರಂಪರೆಯಲ್ಲಿಯೂ ನಿನ್ನ ಸಮಾನನು ಯಾವನೂ ಇಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:7
28 ತಿಳಿವುಗಳ ಹೋಲಿಕೆ  

ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”


ಯಾಕೆಂದರೆ ಯೆಹೋವನೇ ರಾಜನು! ಆತನು ಜನಾಂಗಗಳನ್ನೆಲ್ಲಾ ಆಳುವನು.


ಯೆಹೋವನೇ, ನಿನ್ನತೆ ಯಾರೂ ಇಲ್ಲ. ನೀನೇ ಮಹೋನ್ನತನು. ನಿನ್ನ ಹೆಸರು ಮಹೋನ್ನತವಾದದ್ದು; ಸಾಮರ್ಥ್ಯಪೂರ್ಣವಾದದ್ದು.


ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.


ಪರಲೋಕದಲ್ಲಿ ಯಾವನೂ ಯೆಹೋವನಿಗೆ ಸಮಾನನಲ್ಲ. ಯಾವ ದೇವರುಗಳನ್ನೂ ಯೆಹೋವನಿಗೆ ಹೋಲಿಸಲಾಗದು.


ನೀವು ಯಾರಿಗೆ ಭಯಪಡಬೇಕೆಂದರೆ, ನಿಮ್ಮನ್ನು ಕೊಂದು ನರಕಕ್ಕೆ ಹಾಕಲು ಅಧಿಕಾರವುಳ್ಳಾತನಿಗಷ್ಟೇ (ದೇವರಿಗೆ). ಹೌದು, ಆತನೊಬ್ಬನಿಗೇ ನೀವು ಭಯಪಡಬೇಕು.


ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು.


ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ.


ಯೆಹೋವನೇ, ಪ್ರತಿಯೊಬ್ಬ ವ್ಯಕ್ತಿಯನ್ನು ಸೃಷ್ಟಿಸಿದವನು ನೀನೇ. ಅವರೆಲ್ಲರೂ ಬಂದು ನಿನ್ನನ್ನು ಆರಾಧಿಸಲಿ. ಅವರೆಲ್ಲರೂ ನಿನ್ನ ಹೆಸರನ್ನು ಸನ್ಮಾನಿಸಲಿ.


ದೇವರೇ, ನೀನು ಭಯಂಕರನೇ ಸರಿ! ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು?


ಅರಸರುಗಳೆಲ್ಲಾ ನಮ್ಮ ರಾಜನಿಗೆ ಅಡ್ಡಬೀಳಲಿ. ಜನಾಂಗಗಳೆಲ್ಲಾ ಅವನ ಸೇವೆಮಾಡಲಿ.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ನಮಗಾದರೋ ಒಬ್ಬನೇ ಒಬ್ಬ ದೇವರಿದ್ದಾನೆ. ಆತನು ನಮ್ಮ ತಂದೆ. ಸಮಸ್ತವನ್ನು ಆತನೇ ಸೃಷ್ಟಿ ಮಾಡಿದನು. ನಾವು ಆತನಿಗೋಸ್ಕರ ಜೀವಿಸುತ್ತೇವೆ. ಒಬ್ಬನೇ ಒಬ್ಬ ಪ್ರಭುವಿದ್ದಾನೆ. ಆತನೇ ಯೇಸು ಕ್ರಿಸ್ತನು. ಆತನ ಮೂಲಕವಾಗಿ ಸಮಸ್ತವು ಉಂಟಾಯಿತು. ಆತನ ಮೂಲಕವಾಗಿ ನಾವು ಜೀವವನ್ನು ಹೊಂದಿದ್ದೇವೆ.


ಅದಕ್ಕೆ ಫರೋಹನು, “ನಾಳೆ” ಅಂದನು. ಮೋಶೆ, “ನೀನು ಹೇಳಿದಂತೆಯೇ ಆಗುವುದು. ನಮ್ಮ ದೇವರಾದ ಯೆಹೋವನಿಗೆ ಸಮಾನನಾದ ದೇವರೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಇಲ್ಲವಾದರೆ, ನಾನು ನಿನ್ನ ವಿರುದ್ಧವಾಗಿಯೂ ನಿನ್ನ ಅಧಿಕಾರಿಗಳ ವಿರುದ್ಧವಾಗಿಯೂ ನಿನ್ನ ಜನರ ವಿರುದ್ಧವಾಗಿಯೂ ನನ್ನ ಪೂರ್ಣಶಕ್ತಿಯಿಂದ ಉಪದ್ರವಗಳನ್ನು ಕಳುಹಿಸುವೆನು. ಆಗ ನನ್ನಂಥ ದೇವರು ಲೋಕದಲ್ಲಿ ಇಲ್ಲವೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಈ ಭೂಲೋಕದ ಜನರೆಲ್ಲರೂ ಯೆಹೋವನೇ ಸರ್ವಶಕ್ತನೆಂದು ತಿಳಿದುಕೊಳ್ಳಬೇಕೆಂದು ಆತನು ಹೀಗೆ ಮಾಡಿದನು. ಹೀಗೆ ಅವರು ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವರು” ಅಂದನು.


ಕಾನೂನು ಮತ್ತು ದಂಡನೆಗಳ ಬಗ್ಗೆ ಪರಿಣಿತರಾಗಿದ್ದ ಮಂತ್ರಿಗಳ ಸಲಹೆ ಕೇಳುವುದು ರಾಜನ ವಾಡಿಕೆಯಾಗಿತ್ತು. ಅದೇ ಪ್ರಕಾರ ರಾಜನು ತನ್ನ ಸಲಹೆಗಾರರೊಂದಿಗೆ ಈ ವಿಷಯವನ್ನು ಆಲೋಚಿಸಿದನು. ಇವರು ರಾಜನಿಗೆ ನಿಕಟವರ್ತಿಗಳಾಗಿದ್ದರು. ಅವರು ಯಾರೆಂದರೆ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷಿಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಮೇದ್ಯ, ಪಾರಸಿಯ ಪ್ರಮುಖ ಅಧಿಕಾರಿಗಳು.


ದಾನಿಯೇಲನು, “ಅರಸನಾದ ನೆಬೂಕದ್ನೆಚ್ಚರನೇ, ಯಾವ ವಿದ್ವಾಂಸರಾಗಲಿ ಮಾಟಗಾರರಾಗಲಿ ಜೋಯಿಸರಾಗಲಿ ಶಕುನದವರಾಗಲಿ ಅರಸನಾದ ನಿನಗೆ ರಹಸ್ಯವನ್ನು ಹೇಳಲಾಗಲಿಲ್ಲ.


ಆದರೆ ಪರಲೋಕದಲ್ಲಿ ಯೆಹೋವನು ಎಂಬಾತನಿದ್ದಾನೆ. ಆತನು ರಹಸ್ಯಗಳನ್ನು ಹೇಳುತ್ತಾನೆ. ಭವಿಷ್ಯದಲ್ಲಿ ನಡೆಯಲಿರುವುದನ್ನು ಅರಸನಾದ ನಿನಗೆ ಯೆಹೋವನು ತಿಳಿಯಪಡಿಸಿದ್ದಾನೆ. ಇದೇ ನೀನು ಕಂಡ ಕನಸು, ನೀನು ಹಾಸಿಗೆಯ ಮೇಲೆ ಮಲಗಿದ್ದಾಗ ಕಂಡ ಸಂಗತಿಗಳು ಇವು:


ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿವೆ. ನಮ್ಮ ಕಾಲದಲ್ಲಿಯೂ ಮಹತ್ಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಆ ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.


“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.


ನೀವು ನಿಮ್ಮ ದೇವರಾದ ಯೆಹೋವನನ್ನು ಮಾತ್ರ ಆರಾಧಿಸಬೇಕು. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳಿಂದ ರಕ್ಷಿಸುತ್ತಾನೆ” ಎಂದು ಆಜ್ಞಾಪಿಸಿದನು.


ಯೆಹೋವನು ದೊಡ್ಡವನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. ಎಲ್ಲಾ ದೇವರುಗಳಲ್ಲಿ ಯೆಹೋವನೇ ಭಯಂಕರನು.


ಆತನು ಜನಾಂಗಗಳನ್ನು ಸೋಲಿಸಲು ನಮಗೆ ಸಹಾಯಮಾಡಿ ಅವುಗಳನ್ನು ನಮಗೆ ಅಧೀನಪಡಿಸಿದ್ದಾನೆ.


ದೇವರೇ, ನಿನ್ನಂತೆ ಬೇರೆ ಯಾರೂ ಇಲ್ಲ. ನೀನು ಮಾಡಿರುವ ಕಾರ್ಯಗಳನ್ನು ಬೇರೆ ಯಾರೂ ಮಾಡಲಾರರು.


ನಮ್ಮ ಒಡೆಯನು ಬಹು ದೊಡ್ಡವನೂ ಪರಾಕ್ರಮಿಯೂ ಆಗಿದ್ದಾನೆ. ಆತನ ಜ್ಞಾನವು ಅಪರಿಮಿತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು