ಯೆರೆಮೀಯ 11:11 - ಪರಿಶುದ್ದ ಬೈಬಲ್11 ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನ್ನು ಕೇಳುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ : ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದಕಾರಣ ಯೆಹೋವನೆಂಬ ನಾನು ಹೀಗನ್ನುತ್ತೇನೆ - ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ಅವರು ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ತರುವೆನು. ಅವರು ನನಗೆ ಕೂಗಿದರೂ ನಾನು ಅವರನ್ನು ಕೇಳುವುದಿಲ್ಲ. ಅಧ್ಯಾಯವನ್ನು ನೋಡಿ |
ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
ಯೆಹೋವನಾದ ನಾನು ಯೆಹೋಯಾಕೀಮ ಮತ್ತು ಅವನ ಮಕ್ಕಳನ್ನು ದಂಡಿಸುವೆನು. ನಾನು ಅವನ ಅಧಿಕಾರಿಗಳನ್ನೂ ದಂಡಿಸುವೆನು. ಅವರು ದುಷ್ಟರಾದುದರಿಂದ ಹೀಗೆ ಮಾಡುವೆನು. ನಾನು ಅವರ ಮೇಲೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೆಲ್ಲರ ಮೇಲೂ ಮತ್ತು ಯೆಹೂದದ ಜನರ ಮೇಲೂ ಭಯಂಕರವಾದ ಕೇಡನ್ನು ತರಲು ನಿಶ್ಚಯಿಸಿದ್ದೇನೆ. ನಾನು ಹೇಳಿದಂತೆ ಅವರಿಗೆ ಎಲ್ಲಾ ಕೆಡುಕನ್ನು ಉಂಟುಮಾಡುವೆನು. ಏಕೆಂದರೆ ಅವರು ನನ್ನ ಮಾತನ್ನು ಕೇಳಲಿಲ್ಲ.’”
‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.
“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.