Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:14 - ಪರಿಶುದ್ದ ಬೈಬಲ್‌

14 “ಯೆರೆಮೀಯನೇ, ಈ ಯೆಹೂದದ ಜನರಿಗಾಗಿ ಬೇಡಿಕೊಳ್ಳಬೇಡ. ಅವರಿಗಾಗಿ ಮೊರೆಯಿಡಬೇಡ. ಅವರಿಗಾಗಿ ಪ್ರಾರ್ಥನೆ ಮಾಡಿದರೂ ನಾನು ಕೇಳುವದಿಲ್ಲ. ಆ ಜನರು ತೊಂದರೆಯನ್ನು ಅನುಭವಿಸುವರು. ಆಗ ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಕೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದುದರಿಂದ ಯೆರೆಮೀಯನೇ, ಈ ಜನರ ಪರವಾಗಿ ಬೇಡಿಕೊಳ್ಳಬೇಡ. ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂಬೇಡ. ಅವರಿಗೆ ಕೇಡು ಬಂದಾಗ ನನ್ನನ್ನು ಗೋಗರೆದರೂ ನಾನು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ; ಅವರು ತಮ್ಮ ಕೇಡಿನ ನಿವಿುತ್ತ ನನಗೆ ಮೊರೆಯಿಡುವಾಗ ನಾನು ಕೇಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಏಕೆಂದರೆ, ತಮ್ಮ ಕೇಡಿನ ನಿಮಿತ್ತ ನನ್ನ ಕೂಗುವ ಸಮಯದಲ್ಲಿ ನಾನು ಕೇಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:14
12 ತಿಳಿವುಗಳ ಹೋಲಿಕೆ  

“ಯೆರೆಮೀಯನೇ, ನೀನು ಈ ಯೆಹೂದದ ಜನರಿಗಾಗಿ ಪ್ರಾರ್ಥಿಸಬೇಡ; ಇವರಿಗಾಗಿ ಮೊರೆಯಿಡಬೇಡ; ಇವರಿಗಾಗಿ ಬೇಡಿಕೊಳ್ಳಬೇಡ; ಇವರಿಗಾಗಿ ನೀನು ಮಾಡುವ ಪ್ರಾರ್ಥನೆಯನ್ನು ನಾನು ಕೇಳುವದಿಲ್ಲ.


ಯೆಹೋವನು ಹೇಳುತ್ತಾನೆ, “ನಾನು ಶೀಘ್ರವಾಗಿ ಯೆಹೂದದ ಜನರಿಗೆ ಏನಾದರೊಂದು ಭಯಂಕರ ಅನಾಹುತ ಸಂಭವಿಸುವಂತೆ ಮಾಡುತ್ತೇನೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುವದಿಲ್ಲ. ಅವರು ಪಶ್ಚಾತ್ತಾಪಪಡುವರು. ಅವರು ಸಹಾಯಕ್ಕಾಗಿ ನನಗೆ ಮೊರೆಯಿಡುವರು. ಆದರೆ ನಾನು ಅವರ ಮೊರೆಯನ್ನು ಕೇಳುವದಿಲ್ಲ.


ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.


ಆಗ ಯೆಹೋವನು, “ಯೆರೆಮೀಯನೇ, ಯೆಹೂದದ ಜನರ ಒಳಿತಿಗಾಗಿ ಪ್ರಾರ್ಥಿಸಬೇಡ.


ಆದ್ದರಿಂದ ನಾನು ಅವರನ್ನು ಕೋಪದಿಂದ ನಾಶಮಾಡಿಬಿಡುತ್ತೇನೆ. ನನ್ನನ್ನು ತಡೆಯಬೇಡ. ಬಳಿಕ ನಾನು ನಿನ್ನಿಂದ ಒಂದು ಮಹಾಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.


ನನ್ನ ಶುದ್ಧಹೃದಯವನ್ನು ಕಂಡು ಯೆಹೋವನು ಕಿವಿಗೊಟ್ಟನು.


“ಜನರ ನಾಯಕರು ಯೆಹೋವನನ್ನು ಹುಡುಕಾಡುವರು. ಅವರು ತಮ್ಮ ಕುರಿದನಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವರು. ಆದರೆ ಅವರು ಯೆಹೋವನನ್ನು ಕಂಡುಕೊಳ್ಳುವದಿಲ್ಲ. ಯಾಕೆಂದರೆ ಆತನು ಅವರನ್ನು ಬಿಟ್ಟುಹೋಗಿರುತ್ತಾನೆ.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ಆತನು ಹೇಳಿದ್ದೇನೆಂದರೆ, “ನಾನು ಅವರನ್ನು ಕರೆದರೂ ಅವರು ನನಗೆ ಕಿವಿಗೊಡಲಿಲ್ಲ. ಆದ್ದರಿಂದ ಈಗ ಅವರು ನನ್ನನ್ನು ಕರೆದರೂ ನಾನು ಅವರಿಗೆ ಉತ್ತರಕೊಡುವುದಿಲ್ಲ.


ನೀವು ಅತ್ತು ಗೋಳಾಡಿ ಯೆಹೋವನ ವೇದಿಕೆಯನ್ನು ಕಣ್ಣೀರಿನಿಂದ ತೋಯಿಸಿದರೂ ಪ್ರಯೋಜನವಿಲ್ಲ. ಯೆಹೋವನು ನಿಮ್ಮ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ. ನಿಮ್ಮ ಕಾಣಿಕೆಗಳನ್ನು ಆತನು ಮೆಚ್ಚುವವನಲ್ಲ.


ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು