ಯೆರೆಮೀಯ 11:15 - ಪರಿಶುದ್ದ ಬೈಬಲ್15 “ನನ್ನ ಪ್ರೇಯಸಿ (ಯೆಹೂದ) ನನ್ನ ಪವಿತ್ರ ಆಲಯದಲ್ಲಿ ಏಕೆ ಇದ್ದಾಳೆ? ಇಲ್ಲಿ ಇರಲು ಅವಳಿಗೆ ಅಧಿಕಾರವಿಲ್ಲ. ಅವಳು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾಳೆ. ಯೆಹೂದವೇ, ಹರಕೆಗಳಿಂದ ಮತ್ತು ಪ್ರಾಣಿಗಳ ಬಲಿಯಿಂದ ನಿನ್ನ ವಿನಾಶವನ್ನು ತಡೆಯಬಹುದೆಂದು ತಿಳಿದುಕೊಂಡಿರುವಿಯಾ? ನನಗೆ ಹೋಮವನ್ನು ಅರ್ಪಿಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದೆಂದು ತಿಳಿದುಕೊಂಡಿರುವಿಯಾ?” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ನನಗೆ ಆಪ್ತವಾದ ಜನತೆಯು, ನನಗೆ ಅಸಹ್ಯಕಾರ್ಯಗಳನ್ನು ಮಾಡಿದ್ದೇಕೆ? ನನ್ನ ಆಲಯದಲ್ಲಿ ಅದಕ್ಕಿರುವ ಹಕ್ಕಾದರೂ ಏನು? ವ್ರತಗಳ ಮೂಲಕ, ಪಶುಬಲಿ ಮಾಂಸದ ಮೂಲಕ ಅದು ಬರಲಿರುವ ದಂಡನೆಯನ್ನು ತಡೆಗಟ್ಟಬಲ್ಲದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸಿಯಾವೇ? ಇಂಥವುಗಳ ಮೂಲಕ ತಪ್ಪಿಸಿಕೊಂಡೀಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ನನ್ನ ಪ್ರಿಯಳಿಗೆ ನನ್ನ ಆಲಯದಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡೆಸಿದ್ದಾಳೆ. ನೀನು ಸಮರ್ಪಿಸಿದ ಮಾಂಸದ ಬಲಿಯು ನಿನ್ನ ಶಿಕ್ಷೆಯನ್ನು ರದ್ದುಗೊಳಿಸುವುದೋ? ನೀನು ಕೆಟ್ಟತನ ಮಾಡುವಾಗ ಉಲ್ಲಾಸಪಡುತ್ತೀ.” ಅಧ್ಯಾಯವನ್ನು ನೋಡಿ |
ದೆವ್ವವು ಅವನನ್ನು ಪದೇಪದೇ ವಶಪಡಿಸಿಕೊಳ್ಳುತ್ತಿತ್ತು. ಆ ಮನುಷ್ಯನನ್ನು ಸೆರೆಮನೆಗೆ ಹಾಕಿ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿದರೂ ಅವನು ಅವುಗಳನ್ನು ಕಿತ್ತೊಗೆದುಬಿಡುತ್ತಿದ್ದನು. ಅವನೊಳಗಿದ್ದ ದೆವ್ವವು ಅವನನ್ನು ಜನರಿಲ್ಲದ ಸ್ಥಳಗಳಿಗೆ ಬಲವಂತವಾಗಿ ಕೊಂಡೊಯ್ಯುತ್ತಿತ್ತು. ಯೇಸು ಆ ದೆವ್ವಕ್ಕೆ, “ಅವನನ್ನು ಬಿಟ್ಟು ಹೋಗು” ಎಂದು ಆಜ್ಞಾಪಿಸಿದನು. ಆ ಮನುಷ್ಯನು ಯೇಸುವಿನ ಮುಂದೆ ಅಡ್ಡಬಿದ್ದು ಗಟ್ಟಿಯಾದ ಸ್ವರದಿಂದ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನಿಂದ ನಿನಗೇನಾಗಬೇಕಾಗಿದೆ? ದಯಮಾಡಿ ನನ್ನನ್ನು ದಂಡಿಸಬೇಡ!” ಎಂದು ಕೂಗಿದನು.
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.
ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”