Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:16 - ಪರಿಶುದ್ದ ಬೈಬಲ್‌

16 “ಯೆಹೋವನು ನಿನಗೆ ‘ನೋಡಲು ಸುಂದರವಾದ ಹಸಿರು ಆಲೀವ್ ಮರ ಎಂದು’ ಹೆಸರು ಕೊಟ್ಟನು. ಆದರೆ ಯೆಹೋವನು ಬಿರುಗಾಳಿ ಬೀಸಿ ಆ ಮರಕ್ಕೆ ಬೆಂಕಿ ಇಡುವನು. ಆಗ ಅದರ ಕೊಂಬೆಗಳು ಸುಟ್ಟುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರನಾದ ನಾನು ಅದಕ್ಕೆ ‘ಸುಂದರ ಫಲದಿಂದ ಕೂಡಿದ ಚೆಲುವಾದ ಹಚ್ಚನೆಯ ಓಲಿವ್ ಮರ’ ಎಂದು ಹೆಸರಿಟ್ಟೆ. ಆದರೆ ಅದೇ ಮರಕ್ಕೆ ಬೆಂಕಿಯಿಟ್ಟು ಧಗಧಗನೆ ಉರಿಯುವಂತೆ ಮಾಡುವೆನು. ಅದರ ರೆಂಬೆಗಳು ಸುಟ್ಟುಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ನಿನಗೆ ಸುಂದರಫಲದಿಂದ ಅಂದವಾದ ಹಚ್ಚನೆಯ ಒಲೀವಮರವೆಂದು ಹೆಸರಿಟ್ಟಿದ್ದನು; ಆ ಮರಕ್ಕೆ ಬೆಂಕಿಯಿಕ್ಕಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸೌಂದರ್ಯವಾದ ಒಳ್ಳೆಯ ಹಣ್ಣುಳ್ಳ ಹಸುರಾದ ಓಲಿವ್ ಗಿಡವೆಂದು ಯೆಹೋವ ದೇವರು ನಿನಗೆ ಹೆಸರಿಟ್ಟರು. ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸುವನು. ಅದರ ಕೊಂಬೆಗಳು ಮುರಿದು ಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:16
18 ತಿಳಿವುಗಳ ಹೋಲಿಕೆ  

ದ್ರಾಕ್ಷಿಬಳ್ಳಿ ಒಣಗಿಹೋಗುವದು. ಅದರ ಕೊಂಬೆಗಳು ಮುರಿದುಬೀಳುವವು. ಹೆಂಗಸರು ಆ ಕೊಂಬೆಗಳನ್ನು ಸೌದೆಯಾಗಿ ಉಪಯೋಗಿಸುವರು. ಜನರು ತಿಳಿದುಕೊಳ್ಳುವದಕ್ಕೆ ಮನಸ್ಸು ಕೊಡುವದಿಲ್ಲ. ಆದ್ದರಿಂದ ಅವರ ನಿರ್ಮಾಣಿಕನಾದ ದೇವರು ಅವರನ್ನು ಸಂತೈಸುವದಿಲ್ಲ. ಅವರ ನಿರ್ಮಾಣಿಕನು ಅವರಿಗೆ ದಯೆ ತೋರುವದಿಲ್ಲ.


ನಾನಾದರೋ ದೇವರ ಆಲಯದ ಅಂಗಳದಲ್ಲಿ ಹಸಿರಸಿರಾಗಿ ಬೆಳೆಯುವ ಆಲೀವ್ ಮರದಂತಿದ್ದೇನೆ. ನಾನು ದೇವರ ಶಾಶ್ವತವಾದ ಪ್ರೀತಿಯಲ್ಲೇ ಯಾವಾಗಲೂ ಭರವಸವಿಟ್ಟಿರುವೆ.


ನಿನ್ನ “ದ್ರಾಕ್ಷಾಲತೆ”ಯು ಒಣಗಿದ ಗೊಬ್ಬರದಂತೆ ಬೆಂಕಿಯಿಂದ ಸುಟ್ಟುಹೋಗಿದೆ. ನೀನು ಅದರ ಮೇಲೆ ಕೋಪಗೊಂಡು ನಾಶಮಾಡಿದೆ.


ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು.


ಮರಗಳನ್ನು ಕಡಿದುಹಾಕಲು ಕೊಡಲಿ ಈಗಲೇ ಸಿದ್ಧವಾಗಿದೆ. ಒಳ್ಳೆಯ ಫಲಬಿಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


“ನೀವು ತಕ್ಕ ಶಿಕ್ಷೆಯನ್ನು ಅನುಭವಿಸುವಿರಿ. ನಾನು ನಿಮ್ಮ ಅರಣ್ಯಗಳಲ್ಲಿ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ನಿಮ್ಮ ಸುತ್ತಮುತ್ತಲಿನ ಪ್ರತಿಯೊಂದು ವಸ್ತುವನ್ನು ಸುಟ್ಟುಹಾಕುತ್ತದೆ.”


ದೇವರೇ, ನಿನ್ನ ಶತ್ರುಗಳು ನಿನಗೆ ವಿರೋಧವಾಗಿ ಸಂಚು ಮಾಡುತ್ತಿದ್ದಾರೆ. ಬಹುಬೇಗನೆ ಅವರು ಆಕ್ರಮಣ ಮಾಡಲಿದ್ದಾರೆ.


ಭೂಲೋಕದ ಪ್ರಭುವಿನ ಸನ್ನಿಧಿಯಲ್ಲಿ ನಿಂತಿರುವ ಎರಡು ಆಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳೇ ಈ ಇಬ್ಬರು ಸಾಕ್ಷಿಗಳು.


ನಿಮ್ಮ ಭೂಮಿಯಲ್ಲಿ ಆಲಿವ್ ಮರಗಳು ತುಂಬಿದ್ದರೂ ಎಣ್ಣೆಯ ಬರದಲ್ಲಿ ಸಂಕಟಪಡುವಿರಿ. ಯಾಕೆಂದರೆ ಆಲಿವ್ ಕಾಯಿಗಳು ಭೂಮಿಯ ಮೇಲೆ ಉದುರಿಬಿದ್ದು ಹಾಳಾಗುವವು.


ಅವನು ಬೇಕಾದಷ್ಟು ನೀರನ್ನೂ ಬಿಸಿಲನ್ನೂ ಹೊಂದಿರುವ ಬಳ್ಳಿಯಂತಿರುವನು. ಆ ಬಳ್ಳಿಯ ಕವಲುಗಳು ತೋಟದಲ್ಲೆಲ್ಲಾ ಹರಡಿಕೊಳ್ಳುತ್ತವೆ.


ಯೆಹೋವನು ಹೀಗೆಂದನು: “ನಾನು ಈ ಸ್ಥಳಕ್ಕೆ ವಿರೋಧವಾಗಿ ನನ್ನ ಕೋಪವನ್ನು ತೋರಿಸುವೆನು. ನಾನು ಜನರನ್ನೂ ಪ್ರಾಣಿಗಳನ್ನೂ ದಂಡಿಸುವೆನು. ಕಾಡಿನ ಮರಗಳನ್ನೂ ಹೊಲದ ಬೆಳೆಗಳನ್ನೂ ದಂಡಿಸುವೆನು. ನನ್ನ ಕೋಪವು ಉರಿಯುವ ಬೆಂಕಿಯಂತಿರುವದು; ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ.”


ಅವನ ಕೊಂಬೆಗಳು ಬೆಳೆದು ಹರಡಿಕೊಳ್ಳುತ್ತವೆ; ಅವನು ಅಂದವಾದ ಆಲೀವ್ ಮರದಂತಿರುವನು. ಲೆಬನೋನಿನ ದೇವದಾರು ಮರಗಳ ಸುವಾಸನೆಯಂತೆ ಅವನು ಗಮಗಮಿಸುವನು.


ನೀನು ಆರಿಸಿಕೊಂಡಿರುವಾತನ ಕಡೆಗೆ ಕೈಚಾಚಿ ಸಹಾಯ ಮಾಡು. ನೀನು ಬೆಳೆಸಿದ ಜನರ ಕಡೆಗೆ ಕೈಚಾಚು.


ಯೆಹೂದವೇ, ನಾನು ನಿನ್ನನ್ನು ಅತ್ಯುತ್ತಮ ದ್ರಾಕ್ಷಾಲತೆಯಂತೆ ನೆಟ್ಟೆ. ನೀನು ಒಳ್ಳೆಯ ಬೀಜದಂತಿದ್ದಿ. ನೀನು ಕೆಟ್ಟ ಫಲಗಳನ್ನು ಫಲಿಸುವ ಬೇರೆ ದ್ರಾಕ್ಷಿಯ ಬಳ್ಳಿಯಾದದ್ದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು