ಯೆರೆಮೀಯ 11:17 - ಪರಿಶುದ್ದ ಬೈಬಲ್17 ಸರ್ವಶಕ್ತನಾದ ಯೆಹೋವನು ನಿಮ್ಮನ್ನು ನೆಟ್ಟನು. ನಿಮಗೆ ಕೇಡು ಬರುವದೆಂದು ಆತನು ಸಾರಿರುವನು. ಏಕೆಂದರೆ ಇಸ್ರೇಲ್ ವಂಶವೂ ಯೆಹೂದ ವಂಶವೂ ದುಷ್ಕೃತ್ಯಗಳನ್ನು ಮಾಡಿವೆ. ಬಾಳನಿಗೆ ಹೋಮವನ್ನರ್ಪಿಸಿ ನನಗೆ ಕೋಪ ಬರುವಂತೆ ಮಾಡಿವೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಸರ್ವಶಕ್ತ ಸರ್ವೇಶ್ವರನಾದ ನಾನೇ ಈ ಇಸ್ರಯೇಲನ್ನೂ ಜುದೇಯವನ್ನೂ ನೆಟ್ಟಿ ಬೆಳೆಸಿದೆ. ಆದರೆ ಈಗ ‘ನಿನಗೆ ಕೇಡು,’ ಎಂದು ಶಪಿಸುತ್ತಿದ್ದೇನೆ. ಏಕೆಂದರೆ ಬಾಳನಿಗೆ ಧೂಪಾರತಿಯೆತ್ತಿ, ನನ್ನನ್ನು ಕೆಣಕಿ, ತಮಗೇ ಕೆಡುಕನ್ನು ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡದ್ದರಿಂದ ನಿನ್ನನ್ನು ನಾಟಿದ ಸೇನಾಧೀಶ್ವರನಾದ ಯೆಹೋವನು ನಿನಗೆ ಕೆಡುಕಾಗಲಿ ಎಂದು ಶಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇಸ್ರಾಯೇಲಿನ ವಂಶವೂ ಯೆಹೂದದ ವಂಶವೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ, ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ, ನಿನ್ನನ್ನು ನೆಟ್ಟ ಸೇನಾಧೀಶ್ವರ ಯೆಹೋವ ದೇವರು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾರೆ. ಅಧ್ಯಾಯವನ್ನು ನೋಡಿ |
“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”
ಚೀಯೋನಿನಲ್ಲಿ ದುಃಖಿಸುವ ಜನರ ಬಳಿಗೆ ನನ್ನನ್ನು ಕಳುಹಿಸಿದನು. ನಾನು ಅವರನ್ನು ಉತ್ಸವಕ್ಕಾಗಿ ಸಿದ್ಧಪಡಿಸುವೆನು. ಅವರ ತಲೆಯ ಮೇಲಿರುವ ಬೂದಿಯನ್ನು ತೆಗೆದುಹಾಕಿ ಅದರ ಬದಲಾಗಿ ಕಿರೀಟವನ್ನು ತೊಡಿಸುವೆನು. ಅವರ ದುಃಖವನ್ನು ತೆಗೆದುಹಾಕಿ ಅವರಿಗೆ ತೈಲವೆಂಬ ಸಂತೋಷವನ್ನು ಅನುಗ್ರಹಿಸುವೆನು. ಅವರ ದುಃಖವನ್ನೆಲ್ಲಾ ನಿವಾರಿಸಿ ಉತ್ಸವಕ್ಕಾಗಿ ಅವರಿಗೆ ಬಟ್ಟೆಯನ್ನು ತೊಡಿಸುವೆನು. ಅವರನ್ನು ಒಳ್ಳೆಯ ಮರಗಳೆಂತಲೂ ದೇವರ ಆಶ್ಚರ್ಯಕರವಾದ ಸಸಿಯೆಂತಲೂ ಕರೆಯುವದಕ್ಕಾಗಿ ದೇವರೇ ನನ್ನನ್ನು ಕಳುಹಿಸಿದನು.”
ನಾನು ನನ್ನ ಜನರಾದ ಇಸ್ರೇಲರಿಗೆ ಒಂದು ಸ್ಥಳವನ್ನು ಆರಿಸಿಕೊಂಡು ಅವರನ್ನು ನೆಲೆಗೊಳಿಸಿದ್ದೇನೆ. ವಾಸಿಸುವುದಕ್ಕಾಗಿ ಅವರ ಸ್ವಂತ ಸ್ಥಳವನ್ನು ಅವರಿಗೆ ಕೊಟ್ಟಿದ್ದೇನೆ. ಆದ್ದರಿಂದ ಈಗ ಅವರು ಅಲೆದಾಡುವ ಅಗತ್ಯವೇ ಇಲ್ಲ. ಮೊದಲು ನನ್ನ ಜನರಾದ ಇಸ್ರೇಲರನ್ನು ಮುನ್ನಡೆಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದೆನು. ದುಷ್ಟಜನರು ಅವರಿಗೆ ತೊಂದರೆ ಕೊಟ್ಟರು. ಆದರೆ ಅದು ಈಗ ಸಂಭವಿಸುವುದಿಲ್ಲ. ನಿನಗೆ ಶತ್ರು ಭಯವಿಲ್ಲದಂತೆ ಮಾಡುತ್ತೇನೆ; ನಿನ್ನ ಕುಟುಂಬದಿಂದಲೇ ರಾಜರುಗಳನ್ನು ಬರಮಾಡುತ್ತೇನೆ.
ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.
ನೀವು ವಿಗ್ರಹಗಳನ್ನು ಮಾಡಿ ನನ್ನನ್ನು ಏಕೆ ಸಿಟ್ಟಿಗೆಬ್ಬಿಸುವಿರಿ? ಈಗ ನೀವು ಈಜಿಪ್ಟಿನಲ್ಲಿ ವಾಸಮಾಡುತ್ತಿರುವಿರಿ. ಈಗ ಈಜಿಪ್ಟಿನ ಸುಳ್ಳುದೇವರುಗಳಿಗೆ ನೈವೇದ್ಯವನ್ನು ಅರ್ಪಿಸಿ ನನಗೆ ಕೋಪ ಬರುವಂತೆ ಮಾಡುತ್ತಿರುವಿರಿ. ನೀವೇ ನಿಮ್ಮನ್ನು ನಾಶಮಾಡಿಕೊಳ್ಳುವಿರಿ. ಅದು ನಿಮ್ಮ ತಪ್ಪೇ ಆಗುವುದು. ಬೇರೆ ಜನಾಂಗದವರು ನಿಂದಿಸುವಂತೆ ನಿಮ್ಮನ್ನು ನೀವು ಮಾಡಿಕೊಳ್ಳುತ್ತಿದ್ದೀರಿ. ಭೂಮಂಡಲದ ಎಲ್ಲಾ ಜನಾಂಗಗಳು ನಿಮ್ಮನ್ನು ತಮಾಷೆ ಮಾಡುವಂತಾಗುವುದು.