Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:2 - ಪರಿಶುದ್ದ ಬೈಬಲ್‌

2 “ಯೆರೆಮೀಯನೇ, ಈ ಒಡಂಬಡಿಕೆಯ ವಚನಗಳನ್ನು ಕೇಳು, ಈ ವಿಷಯಗಳ ಬಗ್ಗೆ ಯೆಹೂದದ ಜನರಿಗೂ ಜೆರುಸಲೇಮಿನಲ್ಲಿರುವ ಜನರಿಗೂ ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಈ ನಿಬಂಧನವಚನಗಳನ್ನು ಕೇಳಿ ಯೆಹೂದ್ಯರಿಗೂ ಹಾಗೂ ಯೆರೂಸಲೇಮಿನ ನಿವಾಸಿಗಳಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಒಡಂಬಡಿಕೆಯ ಈ ವಚನಗಳನ್ನು ಕೇಳಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಈ ನಿಬಂಧನವಚನಗಳನ್ನು ಕೇಳಿ ಯೆಹೂದ್ಯರಿಗೂ ಯೆರೂಸಲೇವಿುನ ನಿವಾಸಿಗಳಿಗೂ ಹೀಗೆ ಸಾರಿರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಒಡಂಬಡಿಕೆಯ ಈ ವಚನಗಳನ್ನು ಕೇಳಿ, ಯೆಹೂದ್ಯರಿಗೂ ಯೆರೂಸಲೇಮಿನ ನಿವಾಸಿಗಳಿಗೂ ಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:2
9 ತಿಳಿವುಗಳ ಹೋಲಿಕೆ  

ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಈ ಸಂದೇಶವನ್ನು ಸಾರು. ಈ ಒಡಂಬಡಿಕೆಯಲ್ಲಿನ ಮಾತುಗಳನ್ನು ಕೇಳಿ ಅನುಸರಿಸಿರಿ.


ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.


ಆಮೇಲೆ ಅರಸನು ತನ್ನ ಸ್ಥಳದಲ್ಲಿ ಎದ್ದುನಿಂತು, ಯೆಹೋವನ ಎಲ್ಲಾ ಕಟ್ಟಳೆಗಳಿಗೆ ವಿಧೇಯನಾಗಿ ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ಅನುಸರಿಸುವುದಾಗಿ ಪ್ರಮಾಣಮಾಡಿದನು.


ಆದ್ದರಿಂದ ಹಿಜ್ಕೀಯನಾದ ನಾನು ಇಸ್ರೇಲರ ದೇವರಾದ ಯೆಹೋವನೊಂದಿಗೆ ಒಡಂಬಡಿಕೆ ಮಾಡುತ್ತೇನೆ. ಆತನು ಇನ್ನು ಮುಂದೆ ನಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ.


ಅನಂತರ ಯೆಹೋಯಾದನು ಅರಸನೊಂದಿಗೂ ನೆರೆದು ಬಂದಿದ್ದ ಎಲ್ಲಾ ಜನರೊಂದಿಗೂ ಒಪ್ಪಂದವನ್ನು ಮಾಡಿಕೊಂಡನು. ಅವರೆಲ್ಲರೂ ಯೆಹೋವನ ಜನರಾಗಿ ಜೀವಿಸುವದಕ್ಕೆ ಒಪ್ಪಿಕೊಂಡರು.


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಆತನಿಗೆ ಪ್ರಮಾಣಮಾಡಿದರು.


ಯೆರೆಮೀಯನಿಗೆ ಈ ಸಂದೇಶ ಯೆಹೋವನಿಂದ ಬಂದಿತು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು