ಯೆರೆಮೀಯ 11:22 - ಪರಿಶುದ್ದ ಬೈಬಲ್22 ಸರ್ವಶಕ್ತನಾದ ಯೆಹೋವನು, “ನಾನು ಕೂಡಲೇ ಅನಾತೋತಿನ ಜನರನ್ನು ದಂಡಿಸುವೆನು. ಅವರ ಯುವಕರೆಲ್ಲ ಯುದ್ಧದಲ್ಲಿ ಮಡಿದು ಹೋಗುವರು. ಅವರ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಹಸಿವಿನಿಂದ ಸತ್ತುಹೋಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರ ವಿಷಯವಾಗಿ ಸರ್ವೇಶ್ವರ, “ಇಗೋ ಅವರನ್ನು ನಾನು ದಂಡಿಸಿಯೇ ತೀರುವೆನು. ಅವರ ಯುವಕರು ಕತ್ತಿಗೆ ತುತ್ತಾಗುವರು. ಅವರ ಗಂಡುಹೆಣ್ಣು ಮಕ್ಕಳು ಕ್ಷಾಮದಿಂದ ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು, ಅವರ ಗಂಡು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು. ಅಧ್ಯಾಯವನ್ನು ನೋಡಿ |
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.