Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:23 - ಪರಿಶುದ್ದ ಬೈಬಲ್‌

23 ಅನಾತೋತ್ ನಗರದಲ್ಲಿ ಒಬ್ಬನೂ ಉಳಿಯುವುದಿಲ್ಲ; ಯಾರೂ ಬದುಕುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ. ಅವರಿಗೆ ಏನಾದರೂ ಕೇಡಾಗುವಂತೆ ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದಂಡನೆಯ ವರ್ಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದಂಡನೆಯ ಕಾಲವನ್ನು ಗೊತ್ತುಮಾಡಿರುವೆನು. ಅದು ಬಂದಾಗ ಅವರಲ್ಲಿ ಯಾರೂ ಉಳಿಯರು. ಇದು ನನ್ನ ತೀರ್ಮಾನ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದಂಡನೆಯ ವರುಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರಲ್ಲಿ ಶೇಷವು ಇರುವುದಿಲ್ಲ. ಏಕೆಂದರೆ ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಎಂದರೆ ಅವರ ಶಿಕ್ಷೆಯ ವರ್ಷವನ್ನೇ ತರುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:23
15 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ಅವರಿಗೆ ನನ್ನ ಸಂದೇಶಗಳನ್ನು ಇನ್ನು ಮೇಲೆ ಕೊಡುವುದಿಲ್ಲ. ಆಗ ಅವರು ಕತ್ತಲಲ್ಲಿ ನಡೆಯಬೇಕಾಗುವುದು. ಆ ಪ್ರವಾದಿಗಳ ಮತ್ತು ಯಾಜಕರ ಮಾರ್ಗಗಳು ಜಾರುವ ದಾರಿಗಳಾಗಿವೆ. ಆ ಪ್ರವಾದಿಗಳು ಮತ್ತು ಯಾಜಕರು ಕತ್ತಲಲ್ಲಿ ಬೀಳುವರು. ನಾನು ಅವರಿಗೆ ಕೇಡನ್ನು ಬರಮಾಡಿ ಅವರನ್ನು ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ.


ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.


ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವೆ. ನೀನು ಈಗ ಗಲಿಬಿಲಿಗೆ ಒಳಗಾಗುವೆ!


ಪ್ರವಾದಿಯು ಹೀಗೆ ಹೇಳುತ್ತಾನೆ, “ಇಸ್ರೇಲೇ, ಇದನ್ನು ಕಲಿತುಕೋ. ಶಿಕ್ಷೆಯ ಸಮಯವು ಬಂದದೆ. ನೀನು ಮಾಡಿದ ದುಷ್ಟತನಕ್ಕೆ ಪ್ರತಿಯಾಗಿ ದೊರಕಬೇಕಾದ ಸಂಬಳ (ಫಲ)ದ ಸಮಯವು ಬಂತು.” ಆದರೆ ಇಸ್ರೇಲ್ ಜನರು ಹೀಗೆ ಹೇಳುತ್ತಾರೆ: “ಪ್ರವಾದಿಯು ಮೂರ್ಖನಾಗಿದ್ದಾನೆ. ದೇವರಾತ್ಮನುಳ್ಳ ಈ ಮನುಷ್ಯನು ಹುಚ್ಚನಾಗಿದ್ದಾನೆ.” ಪ್ರವಾದಿಯು ಹೀಗೆ ಹೇಳಿದನು, “ನಿನ್ನ ಕೆಟ್ಟ ಪಾಪಗಳಿಗಾಗಿ ನೀನು ಶಿಕ್ಷಿಸಲ್ಪಡುವೆ. ನೀನು ಹಗೆ ಮಾಡಿದುದಕ್ಕೆ ನೀನು ಶಿಕ್ಷೆ ಅನುಭವಿಸುವೆ.”


ಬಾಬಿಲೋನಿನ ಎಲ್ಲಾ ತರುಣರನ್ನು ಕೊಂದುಹಾಕಿರಿ. ಅವರನ್ನು ಕತ್ತರಿಸಿಬಿಡಿ. ಅವರನ್ನು ಸೋಲಿಸುವ ಸಮಯ ಬಂದಿದೆ. ಇದು ಅವರಿಗೆ ಕೇಡಿನ ಕಾಲ. ಇದು ಅವರನ್ನು ದಂಡಿಸುವ ಸಮಯ.


ಜನರು ಅಂಜಿ ಓಡಿಹೋಗುವರು; ಆಳವಾದ ಗುಂಡಿಗಳಲ್ಲಿ ಬೀಳುವರು. ಯಾರಾದರೂ ಆ ಆಳವಾದ ಗುಂಡಿಗಳಿಂದ ಮೇಲಕ್ಕೆ ಹತ್ತಿ ಬಂದರೆ ಅವರನ್ನು ಬಲೆಯಲ್ಲಿ ಹಿಡಿಯಲಾಗುವುದು. ನಾನು ಮೋವಾಬಿಗೆ ದಂಡನೆಯ ವರ್ಷವನ್ನು ತರುವೆನು” ಎಂದು ಯೆಹೋವನು ನುಡಿದನು.


ಸಂಬಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನ್ನು ಎದುರಿಸಲಾರರು. ಅವರ ವಿನಾಶದ ಕಾಲ ಬರುತ್ತಿದೆ. ಬೇಗ ಅವರನ್ನು ದಂಡಿಸಲಾಗುವುದು.


ನಾನು ಯೆಹೂದದ ಜನರನ್ನು ಗಮನಿಸುತ್ತಿರುವುದು ಅವರನ್ನು ಕಾಪಾಡುವುದಕ್ಕಲ್ಲ. ನಾನು ಅವರನ್ನು ಗಮನಿಸುತ್ತಿರುವುದು ಅವರಿಗೆ ಕೇಡುಮಾಡುವುದಕ್ಕಾಗಿ. ಈಜಿಪ್ಟಿನಲ್ಲಿ ವಾಸಿಸುವ ಯೆಹೂದಿಯರು ಹಸಿವಿನಿಂದ ಸತ್ತುಹೋಗುವರು ಮತ್ತು ಖಡ್ಗಕ್ಕೆ ಬಲಿಯಾಗುವರು. ಅವರು ನಿರ್ನಾಮವಾಗುವವರೆಗೆ ಸಾಯುತ್ತಿರುವರು.


ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”


ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’” ಯೆಹೋವನ ನುಡಿಗಳಿವು.


ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ದೇಶದಲ್ಲಿ ಅಳಿದುಳಿದ ಇಸ್ರೇಲಿಯರನ್ನು ಒಟ್ಟಾಗಿ ಸೇರಿಸಿರಿ. ದ್ರಾಕ್ಷಿತೋಟದಲ್ಲಿ ಕೊನೆಯ ದ್ರಾಕ್ಷಿಯನ್ನು ಕೀಳುವಂತೆ ಅವರನ್ನು ಒಟ್ಟಾಗಿ ಸೇರಿಸಿ. ಕೊಯ್ಲುಗಾರನು ಪ್ರತಿಯೊಂದು ಬಳ್ಳಿಯನ್ನು ನೋಡಿ ದ್ರಾಕ್ಷಿಕೀಳುವಂತೆ ನೀವು ಸೂಕ್ಷ್ಮವಾಗಿ ಗಮನಿಸಿ ಅವರನ್ನು ಒಟ್ಟಾಗಿ ಸೇರಿಸಿರಿ.”


ಇವುಗಳ ನಿಮಿತ್ತ ಯೆಹೂದದ ಜನರನ್ನು ನಾನು ಶಿಕ್ಷಿಸಬೇಕಲ್ಲವೆ?” ಯೆಹೋವನು ಹೀಗೆನ್ನುತ್ತಾನೆ: “ಇಂಥ ಜನಾಂಗವನ್ನು ನಾನು ದಂಡಿಸಬೇಕೆಂಬುದು ನಿಮಗೆ ಗೊತ್ತು. ನಾನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.”


ಹೀಗೆ ಮಾಡಿದ್ದಕ್ಕಾಗಿ ಯೆಹೂದದ ಜನರನ್ನು ನಾನು ಶಿಕ್ಷಿಸಬೇಕಲ್ಲವೇ?” ಯೆಹೋವನು ಹೇಳುತ್ತಾನೆ. “ಹೌದು, ನಾನು ಇಂಥಾ ಜನಾಂಗವನ್ನು ಶಿಕ್ಷಿಸಬೇಕು. ಅವರಿಗೆ ತಕ್ಕ ಶಿಕ್ಷೆಯನ್ನು ನಾನು ಕೊಡಬೇಕು.


ಯಾಕೋಬನ ಸಂತತಿಯವರು ಬೆಂಕಿಯಂತಿರುವರು. ಯೋಸೇಫನ ಜನಾಂಗವು ಬೆಂಕಿಯ ನಾಲಗೆಗಳಂತೆ ಇರುವರು. ಆದರೆ ಏಸಾವಿನ ಜನಾಂಗ ಸುಟ್ಟ ಬೂದಿಯಂತಿರುವರು. ಯೆಹೂದದ ಜನರು ಎದೋಮನನ್ನು ಸುಟ್ಟುಹಾಕುವರು. ಯೆಹೂದದ ಜನರು ಎದೋಮನನ್ನು ನಾಶಮಾಡುವರು. ಆಗ ಏಸಾವಿನ ಜನರಲ್ಲಿ ಯಾರೂ ಉಳಿಯುವದಿಲ್ಲ.” ಯಾಕೆಂದರೆ ಇದು ದೇವರಾದ ಯೆಹೋವನ ಮಾತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು