ಯೆರೆಮೀಯ 11:6 - ಪರಿಶುದ್ದ ಬೈಬಲ್6 ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಪಟ್ಟಣಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಈ ಸಂದೇಶವನ್ನು ಸಾರು. ಈ ಒಡಂಬಡಿಕೆಯಲ್ಲಿನ ಮಾತುಗಳನ್ನು ಕೇಳಿ ಅನುಸರಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನು ನನಗೆ, “ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು, ‘ಈ ನಿಬಂಧನ ವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರ ನನಗೆ : “ಜುದೇಯದ ನಗರಗಳಲ್ಲೂ ಜೆರುಸಲೇಮಿನ ಹಾದಿಬೀದಿಗಳಲ್ಲೂ ಈ ಸಮಾಚಾರವನ್ನು ಹರಡು - ಈ ಒಡಂಬಡಿಕೆಯ ವಚನಗಳನ್ನು ಕೇಳಿ ಅದರಂತೆ ನಡೆದುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನು ನನಗೆ ಹೀಗೆ ಹೇಳಿದನು - ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಈ ಮಾತುಗಳನ್ನೆಲ್ಲಾ ಸಾರು - ಈ ನಿಬಂಧನವಾಕ್ಯಗಳನ್ನೆಲ್ಲಾ ಕೇಳಿ ಕೈಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ತರುವಾಯ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯ ಬೀದಿಗಳಲ್ಲಿಯೂ ಸಾರಿ ಹೇಳು. ‘ಹೇಗೆಂದರೆ, ಈ ಒಡಂಬಡಿಕೆಯ ಮಾತುಗಳನ್ನು ಕೇಳಿ, ಅವುಗಳನ್ನು ಮಾಡಿರಿ. ಅಧ್ಯಾಯವನ್ನು ನೋಡಿ |
ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”