ಯೆರೆಮೀಯ 11:7 - ಪರಿಶುದ್ದ ಬೈಬಲ್7 ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಅವರಿಗೆ ಒಂದು ಮುನ್ನೆಚ್ಚರಿಕೆಯನ್ನು ಕೊಟ್ಟೆನು. ಇಂದಿನವರೆಗೂ ನಾನು ಮತ್ತೆಮತ್ತೆ ಅವರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟೆ. ನನ್ನ ಆಜ್ಞಾಪಾಲನೆ ಮಾಡಬೇಕೆಂದು ಅವರಿಗೆ ಹೇಳಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ ನನ್ನ ಮಾತನ್ನು ಕೇಳಿರೆಂದು ತಡಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾರಭ್ಯ ಇಂದಿನವರೆಗೂ ನಾನು ಅವರಿಗೆ - ನನ್ನ ಮಾತನ್ನು ಕೇಳಿರಿ ಎಂದು ಸಾವಕಾಶಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ನಾನು ನಿಮ್ಮ ತಂದೆಗಳಿಗೆ, “ನನ್ನ ಮಾತನ್ನು ಕೇಳಿ,” ಎಂದು ಖಂಡಿತವಾಗಿ ಹೇಳಿದೆನು. ಅವರನ್ನು ಈಜಿಪ್ಟ್ ದೇಶದೊಳಗಿಂದ ಮೇಲೆ ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಜ್ಞಾಪಿಸುತ್ತಾ ಬಂದಿದ್ದೇನೆ. ಅಧ್ಯಾಯವನ್ನು ನೋಡಿ |
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.
‘ರೇಕಾಬನ ಮಗನಾದ ಯೋನಾದಾಬನು ತನ್ನ ಮಕ್ಕಳಿಗೆ ದ್ರಾಕ್ಷಾರಸವನ್ನು ಕುಡಿಯಬೇಡಿರೆಂದು ಹೇಳಿದನು. ಅವನ ಆಜ್ಞೆಯನ್ನು ಪಾಲಿಸಲಾಗಿದೆ. ಇಂದಿನವರೆಗೂ ಯೋನಾದಾಬನ ಸಂತಾನದವರು ತಮ್ಮ ಪೂರ್ವಿಕರ ಆಜ್ಞೆಯನ್ನು ಪಾಲಿಸಿದ್ದಾರೆ. ಅವರು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಾನೇ ನಿಮ್ಮ ದೇವರಾದ ಯೆಹೋವನು. ನಾನು ಯೆಹೂದದ ಜನರಾದ ನಿಮಗೆ ಮತ್ತೆಮತ್ತೆ ಸಂದೇಶಗಳನ್ನು ಕೊಟ್ಟಿದ್ದೇನೆ. ಆದರೆ ನೀವು ನನ್ನ ಆಜ್ಞೆಗಳನ್ನು ಪಾಲಿಸಲಿಲ್ಲ.
ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.
ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ.