ಯೆರೆಮೀಯ 11:8 - ಪರಿಶುದ್ದ ಬೈಬಲ್8 ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ದುಷ್ಟಹೃದಯ ಹೇಳಿದಂತೆ ಮಾಡಿದರು. ಆಜ್ಞಾಪಾಲನೆ ಮಾಡದಿದ್ದರೆ ಅವರಿಗೆ ಕೆಡುಕಾಗುವದೆಂದು ಒಡಂಬಡಿಕೆಯಲ್ಲಿ ಹೇಳಲಾಗಿದೆ. ಅದಕ್ಕಾಗಿ ನಾನು ಅವರಿಗೆ ಕೇಡುಂಟಾಗುವಂತೆ ಮಾಡಿದೆ, ಒಡಂಬಡಿಕೆಯನ್ನು ಪಾಲಿಸಬೇಕೆಂದು ನಾನು ಅವರಿಗೆ ಆಜ್ಞಾಪಿಸಿದೆ ಆದರೆ ಅವರು ಪಾಲಿಸಲಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನು ತನ್ನ ದುಷ್ಟ ಹೃದಯದ ನಿಮಿತ್ತ ಹಟಮಾರಿಯಂತೆ ನಡೆದುಕೊಂಡನು. ಆದಕಾರಣ, ಕೈಗೊಳ್ಳಬೇಕೆಂದು ನಾನು ಆಜ್ಞಾಪಿಸಿದ್ದರೂ ಅವರು ಕೈಗೊಳ್ಳದೆಹೋದ ಆ ಒಡಂಬಡಿಕೆಯಲ್ಲೆ ಸೂಚಿಸಲಾಗಿರುವ ಶಾಪಗಳನ್ನೆಲ್ಲ ಅವರ ಮೇಲೆ ಬರಮಾಡಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಕೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡೆದುಕೊಂಡರು. ಆದ್ದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.’ ” ಅಧ್ಯಾಯವನ್ನು ನೋಡಿ |
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.
ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ.