Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:9 - ಪರಿಶುದ್ದ ಬೈಬಲ್‌

9 ಯೆಹೋವನು ನನಗೆ, “ಯೆರೆಮೀಯನೇ, ಯೆಹೂದದ ಜನರೂ ಜೆರುಸಲೇಮಿನಲ್ಲಿ ವಾಸಮಾಡುವ ಜನರೂ ಒಳಸಂಚನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ನನಗೆ, “ಯೆಹೂದ್ಯರಲ್ಲಿಯೂ ಮತ್ತು ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮತ್ತೆ ಸರ್ವೇಶ್ವರ ನನಗೆ : “ಜುದೇಯದ ಹಾಗು ಜೆರುಸಲೇಮಿನ ನಿವಾಸಿಗಳಲ್ಲಿ ಒಳಸಂಚು ಕಂಡುಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ನನಗೆ ಹೀಗೆ ಹೇಳಿದನು - ಯೆಹೂದ್ಯರಲ್ಲಿಯೂ ಯೆರೂಸಲೇವಿುನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತರುವಾಯ, ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:9
13 ತಿಳಿವುಗಳ ಹೋಲಿಕೆ  

ಕಳ್ಳರು ದಾರಿಯಲ್ಲಿ ಹೊಂಚುಹಾಕುತ್ತಾ ಜನರನ್ನು ಸೂರೆಮಾಡಲು ಕಾಯುತ್ತಿರುತ್ತಾರೆ. ಅದೇ ರೀತಿಯಲ್ಲಿ ಶೆಕೆಮಿಗೆ ಹೋಗುವ ದಾರಿಯಲ್ಲಿ ಯಾಜಕರು ಕಾಯುತ್ತಾ ಹಾದುಹೋಗುತ್ತಿರುವ ಜನರ ಮೇಲೆ ಬೀಳುವರು. ಅವರು ದುಷ್ಕೃತ್ಯಗಳನ್ನು ಮಾಡಿರುತ್ತಾರೆ.


ಅಂದಿನಿಂದ ಯೆಹೂದ್ಯನಾಯಕರು ಯೇಸುವನ್ನು ಕೊಲ್ಲಲು ಸಂಚು ಮಾಡಲಾರಂಭಿಸಿದರು.


“ಯೇಸುವನ್ನು ನಿಮಗೆ ಹಿಡಿದುಕೊಟ್ಟರೆ ನೀವು ನನಗೆ ಎಷ್ಟು ಹಣ ಕೊಡುವಿರಿ?” ಎಂದು ಕೇಳಿದನು. ಮಹಾಯಾಜಕರು ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಯೂದನಿಗೆ ಕೊಟ್ಟರು.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.


“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು