ಯೆರೆಮೀಯ 12:1 - ಪರಿಶುದ್ದ ಬೈಬಲ್1 ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಓ ಯೆಹೋವ ದೇವರೇ, ನಾನು ನಿಮ್ಮ ಸಂಗಡ ವಾದಿಸುವಾಗ, ನೀವು ನೀತಿವಂತರೇ ಆಗಿದ್ದೀರಿ. ಆದರೂ ನಾನು ನಿಮ್ಮ ಸಂಗಡ ನ್ಯಾಯವಾದವುಗಳನ್ನು ಕುರಿತು ಮಾತನಾಡುವೆನು. ದುಷ್ಟರ ಮಾರ್ಗವು ಸಮೃದ್ಧಿಯಾಗುವುದು ಏಕೆ? ಮಹಾ ವಂಚನೆ ಮಾಡುವವರೆಲ್ಲರು ಸುಖವಾಗಿರುವುದು ಏಕೆ? ಅಧ್ಯಾಯವನ್ನು ನೋಡಿ |
“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.