ಯೆರೆಮೀಯ 12:10 - ಪರಿಶುದ್ದ ಬೈಬಲ್10 ಅನೇಕ ಕುರುಬರು ದ್ರಾಕ್ಷಿತೋಟವನ್ನು ಹಾಳುಮಾಡಿದ್ದಾರೆ. ಆ ಕುರುಬರು ನನ್ನ ತೋಟದ ಸಸಿಗಳನ್ನು ತುಳಿದುಬಿಟ್ಟಿದ್ದಾರೆ: ನನ್ನ ಸುಂದರವಾದ ತೋಟವನ್ನು ಮರಳುಗಾಡನ್ನಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಹುಮಂದಿ ಕುರಿಗಾಹಿಗಳು ಬಂದು ಹಾಳುಮಾಡಿದ್ದಾರೆ ನನ್ನ ದ್ರಾಕ್ಷಾತೋಟವನ್ನು. ತುಳಿದುಹಾಕಿದ್ದಾರೆ ನನ್ನಾ ಸೊತ್ತನ್ನು ಕಾಡನ್ನಾಗಿಸಿದ್ದಾರೆ ಆ ನನ್ನ ಪ್ರಿಯ ಆಸ್ತಿಯನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಬಹುಮಂದಿ ಮಂದೆಗಾರರು ನನ್ನ ತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವಾಸ್ತ್ಯವನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅನೇಕ ಕುರುಬರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಹೊಲವನ್ನು ತುಳಿದುಬಿಟ್ಟಿದ್ದಾರೆ; ನಾನು ಮೆಚ್ಚಿದ ಭಾಗವನ್ನು ಹಾಳಾದ ಮರುಭೂಮಿಯಾಗಿ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.