ಯೆರೆಮೀಯ 12:12 - ಪರಿಶುದ್ದ ಬೈಬಲ್12 ಅನೇಕ ಸೈನಿಕರು ಆ ಬೋಳುಬೆಟ್ಟಗಳನ್ನು ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನ್ನು ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನ್ನು ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಕಂಡುಬಂದಿದ್ದಾರೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಮರುಭೂಮಿಯಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ನಾಶಮಾಡುವವರು ಬಂದಿದ್ದಾರೆ. ಏಕೆಂದರೆ, ಯೆಹೋವ ದೇವರ ಖಡ್ಗವು ದೇಶದ ಒಂದು ಕಡೆಯಿಂದ ದೇಶದ ಇನ್ನೊಂದು ಕಡೆಯವರೆಗೂ ನುಂಗಿಬಿಡುತ್ತದೆ. ಯಾವ ಮನುಷ್ಯನೂ ಸುರಕ್ಷಿತವಾಗಿ ಉಳಿಯುವುದಿಲ್ಲ. ಅಧ್ಯಾಯವನ್ನು ನೋಡಿ |
“ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.
‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು.
ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ.
“ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.
ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ.