ಯೆರೆಮೀಯ 12:14 - ಪರಿಶುದ್ದ ಬೈಬಲ್14 ಯೆಹೋವನು ಹೀಗೆ ಹೇಳುತ್ತಾನೆ: “ಇಸ್ರೇಲ್ ಪ್ರದೇಶದ ಸುತ್ತಮುತ್ತ ವಾಸಮಾಡುವ ಜನರಿಗಾಗಿ ನಾನು ಏನು ಮಾಡುವೆನೆಂಬುದನ್ನು ನಿಮಗೆ ಹೇಳುವೆನು. ಆ ಜನರು ತುಂಬ ದುಷ್ಟರಾಗಿದ್ದಾರೆ. ನಾನು ಇಸ್ರೇಲಿನ ಜನರಿಗೆ ಕೊಟ್ಟ ಪ್ರದೇಶವನ್ನು ಅವರು ಹಾಳು ಮಾಡಿದರು. ನಾನು ಆ ಜನರನ್ನು ಅವರ ಪ್ರದೇಶದಿಂದ ಹೊರಗೆ ಎಸೆಯುವೆನು. ನಾನು ಅವರೊಂದಿಗೆ ಯೆಹೂದದ ಜನರನ್ನೂ ಎಸೆಯುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ : “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೆಹೋವನು ತನ್ನ ಜನರಾದ ಇಸ್ರಾಯೇಲ್ಯರಿಗೆ ದಯಪಾಲಿಸಿದ ಸ್ವಾಸ್ತ್ಯಕ್ಕೆ ಕೈ ಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ ಹೀಗೆ ಹೇಳುತ್ತಾನೆ - ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರ ಸ್ವಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ: “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. ಯೆಹೂದ ವಂಶವನ್ನು ಅವರ ಮಧ್ಯೆಯಿಂದ ಕಿತ್ತುಬಿಡುವೆನು. ಅಧ್ಯಾಯವನ್ನು ನೋಡಿ |
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.
“ಎದೋಮಿನ ಬಗ್ಗೆಯೂ ಉಳಿದ ಆ ವಿದೇಶಗಳ ಬಗ್ಗೆಯೂ ನಾನು ರೋಷದಿಂದ ಮಾತಾಡುತ್ತಿದ್ದೇನೆಂದು ಪ್ರಮಾಣ ಮಾಡುತ್ತೇನೆ. ಆ ಜನಾಂಗಗಳು ನನ್ನ ದೇಶವನ್ನು ತಮ್ಮ ಸ್ವಾಸ್ತ್ಯವನ್ನಾಗಿ ಸಂತೋಷದಿಂದ ತೆಗೆದುಕೊಂಡರು. ಅವರು ಅದನ್ನು ವಶಪಡಿಸಿಕೊಂಡು ಸೂರೆ ಮಾಡಿದಾಗ ಮತ್ತು ನನ್ನ ಜನರಿಗೆ ಅವಮಾನ ಮಾಡಿದಾಗ ನನ್ನ ಜನರನ್ನು ಅವರು ಎಷ್ಟೊಂದು ದ್ವೇಷಿಸುತ್ತಾರೆಂದು ತೋರಿಸುತ್ತಾ ಉಲ್ಲಾಸಪಟ್ಟರು.