ಯೆರೆಮೀಯ 12:16 - ಪರಿಶುದ್ದ ಬೈಬಲ್16 ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ ‘ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನನ್ನ ಜನರಿಗೆ ಬಾಳ್‍ದೇವತೆಯ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ಮೊದಲು ಕಲಿಸಿಕೊಟ್ಟವರು ಇವರೇ. ಈಗ ನನ್ನ ಜನರ ಮಾರ್ಗವನ್ನು ಅವಲಂಬಿಸಿ ನನ್ನ ಹೆಸರೆತ್ತಿ, “ಸರ್ವೇಶ್ವರನ ಜೀವದಾಣೆ” ಎಂದು ಪ್ರಮಾಣ ಮಾಡುವುದನ್ನು ಕಲಿತರೆ ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ ಈಗ ನನ್ನ ಹೆಸರನ್ನೆತ್ತಿ ಯೆಹೋವನ ಜೀವದಾಣೆ ಎಂದು ಪ್ರಮಾಣ ಮಾಡುವ ನನ್ನ ಜನರ ಅಭ್ಯಾಸವನ್ನು ಚೆನ್ನಾಗಿ ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ‘ಈಗ ಯೆಹೋವ ದೇವರ ಜೀವದಾಣೆ,’ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವುದಕ್ಕೆ ನನ್ನ ಜನರ ಮಾರ್ಗಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ, ಆಗ ಅವರು ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿ |
ಈ ರಾತ್ರಿ ಇಲ್ಲಿಯೇ ಇರು. ಆ ಮನುಷ್ಯನು ನಿನಗೆ ಸಹಾಯ ಮಾಡುವನೋ ಎಂಬುದನ್ನು ನಾಳೆ ಬೆಳಿಗ್ಗೆ ನೋಡೋಣ. ಅವನು ನಿನಗೆ ಸಹಾಯ ಮಾಡಲು ಒಪ್ಪಿದರೆ ಒಳ್ಳೆಯದು. ಅವನು ನಿನಗೆ ಸಹಾಯ ಮಾಡಲು ಒಪ್ಪದಿದ್ದರೆ ನಾನು ನಿನ್ನನ್ನು ಮದುವೆಯಾಗುತ್ತೇನೆ. ಅಲ್ಲದೆ ಎಲೀಮೆಲೆಕನ ಭೂಮಿಯನ್ನು ನಿನಗೋಸ್ಕರ ಕೊಂಡುಕೊಳ್ಳುತ್ತೇನೆಂದು ಯೆಹೋವನ ಆಣೆಯಾಗಿ ಹೇಳುತ್ತೇನೆ. ಬೆಳಗಾಗುವವರೆಗೆ ಇಲ್ಲಿ ಮಲಗಿರು” ಎಂದು ಹೇಳಿದನು.
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. ಯಾಕೋಬನ ದೇವರ ಆಲಯಕ್ಕೆ ಹೋಗೋಣ. ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು.