ಯೆರೆಮೀಯ 12:2 - ಪರಿಶುದ್ದ ಬೈಬಲ್2 ನೀನು ಆ ದುಷ್ಟರನ್ನು ಇಲ್ಲಿ ಇಟ್ಟಿರುವೆ. ಅವರು ಆಳವಾಗಿ ಬೇರುಬಿಟ್ಟ ಸಸಿಗಳಂತಿದ್ದಾರೆ, ಅವು ಬೆಳೆಯುತ್ತವೆ, ಹಣ್ಣು ಬಿಡುತ್ತವೆ. ನೀನು ಅವರಿಗೆ ತುಂಬ ಹತ್ತಿರದವನು ಮತ್ತು ಪ್ರೀತಿಪಾತ್ರನು ಎಂದು ಅವರು ಬಾಯಿಂದ ಹೇಳುತ್ತಾರೆ. ಆದರೆ ಹೃದಯದಲ್ಲಿ ಅವರು ನಿನ್ನಿದ ತುಂಬಾ ದೂರದಲ್ಲಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ. ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರನ್ನು ನಾಟಿಮಾಡಿದವರು ನೀವು ಬೇರೂರಿ ಬೆಳೆದು ಹಣ್ಣುಬಿಡುತ್ತಿದ್ದಾರೆ ಅವರು. ನೀವು ಅವರ ಅಧರಕ್ಕೆ ಹತ್ತಿರ, ಹೃದಯಕ್ಕೆ ದೂರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಅವರನ್ನು ನಾಟಿದ್ದೀ, ಅವರು ಬೇರೂರಿ ಬೆಳೆದು ಹಣ್ಣುಬಿಟ್ಟಿದ್ದಾರೆ; ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದು ಏಕೆ? ನೀವು ಅವರನ್ನು ನಾಟಿದ್ದೀರಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ, ನೀವು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ. ಅಧ್ಯಾಯವನ್ನು ನೋಡಿ |