ಯೆರೆಮೀಯ 12:3 - ಪರಿಶುದ್ದ ಬೈಬಲ್3 ಆದರೆ ಯೆಹೋವನೇ, ನಿನಗೆ ನನ್ನ ಹೃದಯದ ಬಗ್ಗೆ ತಿಳಿದಿದೆ, ನೀನು ನನ್ನನ್ನು ನೋಡಿ ನನ್ನ ಮನಸ್ಸನ್ನು ಪರೀಕ್ಷಿಸುವೆ. ವಧೆಗೆ ಎಳೆದುಕೊಂಡು ಹೋಗುವ ಕುರಿಗಳಂತೆ ಆ ಕೆಡುಕರನ್ನು ಎಳೆದುಹಾಕು. ಅವರನ್ನು ವಧೆಯ ದಿನಕ್ಕೆಂದು ಆರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನೇ, ನೀನು ನನ್ನನ್ನು ತಿಳಿದಿದ್ದಿ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತಿ. ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರಾ, ನನ್ನ ಪರಿಚಯ ನಿಮಗಿದೆ ನಿಮ್ಮ ನೋಟ ನನ್ನ ಮೇಲಿದೆ. ನನ್ನ ಹೃದಯ ನಿಮ್ಮೊಂದಿಗಿದೆ, ಇದರ ಪರೀಕ್ಷೆ ನಿಮ್ಮಿಂದಾಗಿದೆ. ಅವರನ್ನೋ, ಕುರಿಗಳೋ ಎಂಬಂತೆ ಕೊಲೆಗೆ ಕರೆದೊಯ್ಯಿರಿ ವಧ್ಯದಿವಸದವರೆಗೂ ಅವರನ್ನು ವಿಂಗಡಿಸಿಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನೇ, ನೀನು ನನ್ನನ್ನು ತಿಳಿದಿದ್ದೀ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀ, ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರೇ, ನೀವು ನನ್ನನ್ನು ತಿಳಿದಿದ್ದೀರಿ, ನನ್ನನ್ನು ನೋಡುತ್ತಾ ನಿಮ್ಮೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀರಿ, ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡಿರಿ. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.
ಯೆಹೋವನೇ, ನನ್ನ ವಿಷಯ ನಿನಗೆ ಗೊತ್ತು. ನನ್ನನ್ನು ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. ಜನರು ನನ್ನನ್ನು ತೊಂದರೆಗೀಡು ಮಾಡುತ್ತಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು. ನೀನು ಅವರೊಂದಿಗೆ ಬಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. ಅವರೊಂದಿಗೆ ತಾಳ್ಮೆಯಿಂದ ಇದ್ದು ನನ್ನನ್ನು ಹಾಳುಮಾಡಬೇಡ. ನನ್ನ ಬಗ್ಗೆ ವಿಚಾರ ಮಾಡು. ಯೆಹೋವನೇ, ನಿನಗಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಬುದನ್ನು ಯೋಚಿಸು.