ಯೆರೆಮೀಯ 12:5 - ಪರಿಶುದ್ದ ಬೈಬಲ್5 “ಯೆರೆಮೀಯನೇ, ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿರುವುದಾದರೆ, ಕುದುರೆಗಳೊಂದಿಗೆ ಓಡಿ ಹೇಗೆ ಗೆಲ್ಲುವೆ? ಸುರಕ್ಷಿತವಾದ ದೇಶದಲ್ಲಿ ನೀನು ದಣಿದುಕೊಂಡರೆ ಜೋರ್ಡನ್ ನದಿ ದಡದ ಭಯಾನಕ ಮುಳ್ಳುಕಂಟಿಯ ಪ್ರದೇಶಕ್ಕೆ ಬಂದಾಗ ಏನು ಮಾಡುವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 (ಆಗ ಸರ್ವೇಶ್ವರ ನನಗೆ) : “ಕಾಲಾಳುಗಳ ಸಂಗಡ ಓಡಲು ಆಯಾಸಗೊಂಡೆಯಾದರೆ ಕುದುರೆಗಳೊಂದಿಗೆ ಓಡಿ ಹೇಗೆ ಹೋರಾಡುವೆ? ಪ್ರಶಾಂತ ಪ್ರದೇಶದಲ್ಲಿ ನಿರ್ಭಯನಾಗಿ ನಿಲ್ಲಲಾರೆಯಾದರೆ ಜೋರ್ಡಾನಿನ ದಟ್ಟ ಅಡವಿಯಲ್ಲಿ ಏನು ಮಾಡಬಲ್ಲೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 [ಇಂತೆನ್ನುವ ನನಗೆ ಯೆಹೋವನು ಹೀಗೆ ಹೇಳಿದ್ದಾನೆ - ] ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ನಿರಪಾಯದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಕಾಲಾಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ, ಕುದುರೆಗಳ ಸಂಗಡ ಹೇಗೆ ಹೋರಾಡುವೆ? ನೀನು ಸುರಕ್ಷಿತವಾದ ದೇಶದಲ್ಲಿ ಎಡವಿದರೆ, ಯೊರ್ದನಿನ ದಟ್ಟ ಅಡವಿಯಲ್ಲಿ ಹೇಗೆ ಸುಧಾರಿಸುವೆ? ಅಧ್ಯಾಯವನ್ನು ನೋಡಿ |
ಯೆಹೋವನು ಹೀಗೆನ್ನುತ್ತಾನೆ: “ಜೋರ್ಡನ್ ನದಿಯ ಸಮೀಪದ ದಟ್ಟವಾದ ಅರಣ್ಯದಿಂದ ಒಮ್ಮೆ ಒಂದು ಸಿಂಹವು ಬರುವುದು. ಆ ಸಿಂಹವು ಜನರ ಸಾಕುಪ್ರಾಣಿಗಳಿದ್ದ ಹೊಲಗಳಿಗೆ ನುಗ್ಗುವುದು. ಆ ಪ್ರಾಣಿಗಳೆಲ್ಲ ಓಡಿಹೋಗುವವು. ನಾನು ಆ ಸಿಂಹದಂತಾಗುವೆನು. ನಾನು ಬಾಬಿಲೋನನ್ನು ಅದರ ಪ್ರದೇಶದಿಂದ ಓಡಿಸಿಬಿಡುವೆನು. ಈ ಕಾರ್ಯ ಮಾಡಲು ನಾನು ಯಾರನ್ನು ಆರಿಸಲಿ? ನನ್ನತೆ ಯಾರೂ ಇಲ್ಲ. ನನ್ನನ್ನು ಪ್ರತಿಭಟಿಸುವವರು ಯಾರೂ ಇಲ್ಲ. ಆದ್ದರಿಂದ ನಾನೇ ಅದನ್ನು ಮಾಡುತ್ತೇನೆ. ನನ್ನನ್ನು ಓಡಿಸಲು ಯಾವ ಕುರುಬನೂ ಬರಲಾರನು. ನಾನು ಬಾಬಿಲೋನಿನ ಜನರನ್ನು ಓಡಿಸಿಬಿಡುವೆನು.”
“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”