ಯೆರೆಮೀಯ 12:6 - ಪರಿಶುದ್ದ ಬೈಬಲ್6 ಈ ಜನರು ನಿನ್ನ ಸ್ವಂತ ಸಹೋದರರಾಗಿದ್ದಾರೆ. ನಿನ್ನ ಸ್ವಂತ ಕುಟುಂಬದ ಜನರೇ ನಿನ್ನ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನ್ನೊಡನೆ ಸ್ನೇಹಿತರಂತೆ ಮಾತನಾಡಿದರೂ ಅವರನ್ನು ನಂಬಬೇಡ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿನ್ನ ಸಹೋದರರೂ ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹ ಮಾಡಿರುತ್ತಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗಿರುತ್ತಾರೆ; ಒಳ್ಳೇ ಮಾತಾಡಿದರೂ ಇವರನ್ನು ನಂಬಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ, ನಿನ್ನ ಸಹೋದರರೂ, ನಿನ್ನ ತಂದೆಯ ಮನೆತನದವರೂ ನಿನಗೆ ವಂಚನೆ ಮಾಡಿದ್ದಾರೆ. ಹೌದು, ಇವರೇ ನಿನಗೆ ವಿರೋಧವಾಗಿ ಬಂದು ಜೋರಾಗಿ ಕೂಗಿದ್ದಾರೆ. ಅವರು ನಿನಗೆ ಒಳ್ಳೆಯ ಮಾತುಗಳನ್ನು ಹೇಳಿದರೂ, ಅವರನ್ನು ನಂಬಬೇಡ. ಅಧ್ಯಾಯವನ್ನು ನೋಡಿ |
ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.
ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.