ಯೆರೆಮೀಯ 12:9 - ಪರಿಶುದ್ದ ಬೈಬಲ್9 ನನ್ನ ‘ಸ್ವಾಸ್ತ್ಯವಾದ ಜನರು’ ಹದ್ದುಗಳಿಂದ ಸುತ್ತುವರಿಯಲ್ಪಟ್ಟು ಸಾಯುತ್ತಿರುವ ಪ್ರಾಣಿಯಂತಾಗಿದ್ದಾರೆ. ಆ ಪಕ್ಷಿಗಳು ಅವರ ಸುತ್ತಲೂ ಹಾರಾಡುತ್ತವೆ. ಕಾಡುಪ್ರಾಣಿಗಳೇ, ಬನ್ನಿ, ಬನ್ನಿ, ಬಂದು ನಿಮ್ಮ ಆಹಾರವನ್ನು ತೆಗೆದುಕೊಳ್ಳಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಬೇಟೆಯ ಹಕ್ಕಿಯಂತಿದೆ, ಹದ್ದುಗಳು ಅದರ ಸುತ್ತಲೂ ವಿರುದ್ಧವಾಗಿ ಕುಳಿತಿವೆಯೋ? ಹೋಗಿರಿ, ಅದನ್ನು ತಿಂದುಬಿಡುವುದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರೆತನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನನ್ನ ಸೊತ್ತಾದ ಜನತೆ ನನ್ನ ದೃಷ್ಟಿಗೆ ಚಿತ್ರವರ್ಣದ ಪಕ್ಷಿಯಂತೆ ಅದರ ಸುತ್ತ ರಣಹದ್ದುಗಳ ಕೂಟ ಸೇರಿದೆ ಕಾಡುಮೃಗಗಳನ್ನೆಲ್ಲ ಕರೆದುತನ್ನಿ ಅದನ್ನು ತಿಂದುಬಿಡಲಿಕ್ಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಚಿತ್ರವರ್ಣದ ಹದ್ದಿನಂತಿದೆಯೋ? ಹದ್ದುಗಳು ಅದರ ಸುತ್ತಲು ವಿರುದ್ಧವಾಗಿ ಕೂತಿವೆಯೋ? ಹೋಗಿರಿ, ಅದನ್ನು ತಿಂದುಬಿಡುವದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರತನ್ನಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನನ್ನ ಸೊತ್ತು ನನಗೆ ಚಿತ್ರವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಹದ್ದುಗಳು ಅದಕ್ಕೆ ವಿರೋಧವಾಗಿವೆ. ಬನ್ನಿ, ಕಾಡುಮೃಗಗಳನ್ನೆಲ್ಲಾ ಕೂಡಿಸಿರಿ, ನುಂಗುವುದಕ್ಕೆ ಅವುಗಳನ್ನು ತನ್ನಿರಿ. ಅಧ್ಯಾಯವನ್ನು ನೋಡಿ |